ಸಂಸದರ ನೂತನ ಕಚೇರಿ ಉದ್ಘಾಟಿಸಿದ ಈ.ತುಕಾರಾಂ
E. Tukaram inaugurated the new office of MP
ಸಂಸದರ ನೂತನ ಕಚೇರಿ ಉದ್ಘಾಟಿಸಿದ ಈ.ತುಕಾರಾಂ
ಬಳ್ಳಾರಿ 17: ನಗರದ ರೈಲ್ವೇ ನಿಲ್ದಾಣ ರಸ್ತೆಯ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸಂಸದರ ನೂತನ ಕಚೇರಿಯನ್ನು ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದ ಈ.ತುಕಾರಾಂ ಅವರು ಶುಕ್ರವಾರ ಉದ್ಘಾಟಿಸಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರ ಅಹವಾಲು, ಕುಂದು ಕೊರತೆ ಆಲಿಸಲು ಮತ್ತು ಜನರ ಜೊತೆ ನೇರ ಸಂಪರ್ಕಕ್ಕೆ ಅಧಿಕೃತ ಕಚೇರಿ ಆರಂಭಿಸಲಾಗಿದೆ ಎಂದು ತಿಳಿಸಿದರು.
ಕಚೇರಿಯಲ್ಲಿ ಅಗತ್ಯ ಸಿಬ್ಬಂದಿಗಳ ನಿಯೋಜನೆ ಮಾಡಲಾಗುವುದು. ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಸೇರಿದಂತೆ ಇತರೆ ಕಾಮಗಾರಿಗಳಿಗೆ ವೇಗಗೊಳಿಸಲಾಗುವುದು ಎಂದರು.
ಯಾವುದೇ ಅವೈಜ್ಞಾನಿಕ ಕಾಮಗಾರಿಗಳಿಗೆ ಅವಕಾಶ ನೀಡುವುದಿಲ್ಲ. ಜನರಿಗೆ ತೊಂದರೆ ನೀಡುವಂತಹ ಯಾವುದೇ ರೈಲ್ವೆ ಅಭಿವೃದ್ಧಿಗೆ ಭೂಮಿ ವಶಪಡಿಸಿಕೊಳ್ಳುವುದಿಲ್ಲ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಡೂರು ಶಾಸಕರಾದ ಈ.ಅನ್ನಪೂರ್ಣ, ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್ ಸೇರಿದಂತೆ ಹಿರಿಯ ಮುಖಂಡರು, ಪಾಲಿಕೆಯ ಸದಸ್ಯರು ಹಾಗೂ ಸಾರ್ವಜನಿಕರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 