ಹುಲ್ಲೂರ ಗ್ರಾಮದಲ್ಲಿ ಇ-ಕೆವೈಸಿ ಜಾಗೃತಿ ಕಾರ್ಯಕ್ರಮ
E-KYC awareness program in Hullur village
ಹುಲ್ಲೂರ ಗ್ರಾಮದಲ್ಲಿ ಇ-ಕೆವೈಸಿ ಜಾಗೃತಿ ಕಾರ್ಯಕ್ರಮ
ರೋಣ 27: ಕೇಂದ್ರ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ)ಯಡಿ ಕೂಲಿಕಾರರಿಗೆ ಇ-ಕೆವೈಸಿ ಪ್ರಕ್ರಿಯೆಯನ್ನು ಕಡ್ಡಾಯಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ರೋಣ ತಾಲೂಕಿನ ಹುಲ್ಲೂರ ಗ್ರಾಮ ಪಂಚಾಯತಿಯಲ್ಲಿ ಇ-ಕೆವೈಸಿ ಕಾರ್ಯಕ್ಕೆ ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಚಂದ್ರಶೇಖರ ಬಿ. ಕಂದಕೂರ ಅವರು ಭೇಟಿ ನೀಡಿ, ಖುದ್ದು ಫೋಟೋ ತೆಗೆದು ಇ-ಕೆವೈಸಿ ಪ್ರಕ್ರಿಯೆಯನ್ನು ನಡೆಸಿ ಜಾಗೃತಿ ಮೂಡಿಸಿದರು.ಹುಲ್ಲೂರ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಅವರು, ನರೇಗಾ ಕೂಲಿಕಾರರೊಂದಿಗೆ ಸಮಾಲೋಚನೆ ನಡೆಸಿ, ಇ-ಕೆವೈಸಿ ಪ್ರಕ್ರಿಯೆಯನ್ನು ಅಕ್ಟೋಬರ್ 31, 2025 ರೊಳಗಾಗಿ ಪೂರ್ಣಗೊಳಿಸುವಂತೆ ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ಸೂಚಿಸಿದರು. "ಇ-ಕೆವೈಸಿ ಮಾಡಿಸದಿದ್ದರೆ ನರೇಗಾ ಉದ್ಯೋಗ ಚೀಟಿಗಳು ರದ್ದಾಗುವ ಸಾಧ್ಯತೆ ಇದೆ. ಇದರಿಂದ ಕೂಲಿಕಾರರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸದ ಅವಕಾಶ ಕಳೆದುಕೊಳ್ಳುವ ಆತಂಕವಿದೆ. ಆದ್ದರಿಂದ ಎಲ್ಲರೂ ತಕ್ಷಣವೇ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು," ಎಂದು ಅವರು ಗ್ರಾಮಸ್ಥರಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಅವರು ಗ್ರಾಮದ ಸಾರ್ವಜನಿಕ ಸ್ಥಳಗಳಲ್ಲಿ ಕೂಲಿಕಾರರನ್ನು ಒಟ್ಟುಗೂಡಿಸಿ, ಇ-ಕೆವೈಸಿ ಕಾರ್ಯಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಬೆಳಿಗ್ಗೆ ಮತ್ತು ಸಾಯಂಕಾಲದ ವೇಳೆಯಲ್ಲಿ ನೆಟ್‌ವರ್ಕ್ ಸಮಸ್ಯೆ ಕಡಿಮೆ ಇರುವುದರಿಂದ ಈ ಸಮಯದಲ್ಲಿ ಇ-ಕೆವೈಸಿ ಪ್ರಕ್ರಿಯೆಯನ್ನು ವೇಗವಾಗಿ ನಡೆಸಲು ಸಿಬ್ಬಂದಿಗೆ ಸಲಹೆ ನೀಡಿದರು.ರೋಣ ತಾಲೂಕಿನಲ್ಲಿ ಒಟ್ಟು 50090 ನರೇಗಾ ಕೂಲಿಕಾರರಿದ್ದು, ಈ ಪೈಕಿ ಸುಮಾರು 20758 ಇ-ಕೆವೈಸಿ ಪ್ರಕ್ರಿಯೆಯನ್ನು ಈಗಾಗಲೇ ಪೂರ್ಣಗೊಳಿಸಿದ್ದಾರೆ. ಉಳಿದ ಕೂಲಿಕಾರರಿಗೆ ಮುಂದಿನ ನಾಲ್ಕು ದಿನಗಳಲ್ಲಿ ಈ ಕಾರ್ಯವನ್ನು ಮುಗಿಸಲು ಗ್ರಾಮ ಪಂಚಾಯತಿಗಳ ಸಿಬ್ಬಂದಿಗಳಿಗೆ ಚಂದ್ರಶೇಖರ ಅವರು ತಾಕೀತು ಮಾಡಿದರು.ಈ ಕಾರ್ಯಕ್ರಮದಲ್ಲಿ ತಾಲೂಕ ಪಂಚಾಯತಿ ವ್ಯವಸ್ಥಾಪಕರಾದ ದೇವರಾಜ ಸಜ್ಜನಶೆಟ್ಟರ, ಹುಲ್ಲೂರ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಗಣಕಯಂತ್ರ ನಿರ್ವಾಹಕರು, ನರೇಗಾ ಯೋಜನೆಯ ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರು, ಎಂಐಎಸ್ ಸಂಯೋಜಕರು, ಬಿಎಫ್‌ಟಿ, ಮತ್ತು ಗ್ರಾಮ ಕಾಯಕ ಮಿತ್ರರು ಉಪಸ್ಥಿತರಿದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 