ಅಂಕ ಗಳಿಕೆ ಶಿಕ್ಷಣವಲ್ಲ: ತಹಸೀಲ್ದಾರ ಅನೀಲ ಬಡಿಗೇರ
Earning marks is not education: Tehsildar Anil Badigera
ಜಮಖಂಡಿ 06: ಶಾಲಾ ಜೀವನವು ವ್ಯಕ್ತಿತ್ವ ರೂಪಿಸಿಕೊಳ್ಳುವ ಸುಂದರ ಘಟ್ಟ. ಅದು ಕೇವಲ ಅಂಕ ಗಳಿಕೆ ಶಿಕ್ಷಣವಲ್ಲ, ನೈತಿಕ ಮೌಲ್ಯಗಳೊಂದಿಗೆ ಸಂಸ್ಕಾರವಂತರಾದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ತಹಸೀಲ್ದಾರ ಅನೀಲ ಬಡಿಗೇರ ಹೇಳಿದರು.
ತಾಲೂಕಿನ ತುಬಚಿ ಗ್ರಾಮದ ರಾಣಿ ಚೆನ್ನಮ್ಮ ಹಿರಿಯ ಪ್ರಾಥಮಿಕ ಶಾಲೆಯ 21ನೇ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ ಎನ್ನುವುದು ನಿಂತ ನೀರಲ್ಲ, ಅದು ನಿರಂತರ ಪ್ರಕ್ರಿಯೆ. ಶಿಕ್ಷಕರು ಮತ್ತು ಪೋಷಕರು ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಡಿಜಿಟಲ್ ಯುಗದಲ್ಲಿ ಮಕ್ಕಳು ತಂತ್ರಜ್ಞಾನದ ಸದ್ಬಳಕೆ ಮಾಡಿಕೊಂಡು ಜ್ಞಾನವಂತರಾಗಬೇಕು ಎಂದರು.
ಮಾಜಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ಎಸ್. ಸಿಂಧೂರ ಮಾತನಾಡಿ, ಗ್ರಾಮೀಣ ಭಾಗದ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವುದು ಶಾಲಾ ವಾರ್ಷಿಕೋತ್ಸವಗಳ ಮುಖ್ಯ ಉದ್ದೇಶ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು. ಈ ಶಾಲೆಯ ಅಭಿವೃದ್ಧಿಗೆ ನನ್ನ ಸಂಪೂರ್ಣ ಸಹಕಾರವಿದೆ ಎಂದರು.
ಡಾ. ಸದಾಶಿವ ಬಾಲಪ್ಪನವರ ಮಾತನಾಡಿದರು, ಸಾನಿಧ್ಯ ವಹಿಸಿ ತುಬಚಿ ಹಾಗೂ ನಾಗನೂರು ರುದ್ರಾಕ್ಷಿ ಮಠದ ಡಾ, ಅಲ್ಲಮಪ್ರಭು ಮಹಾಸ್ವಾಮಿಗಳು ಆಶೀರ್ವಚನ ನಿಡಿದರು. ಇದೇ ಸಂದರ್ಭದಲ್ಲಿ ಗುರುರಾಜ ಕುಲಕರ್ಣಿ, ಮಲ್ಲಿಕಾರ್ಜುನ ಪಾಟೀಲ, ಬಸವರಾಜ ತೇಲಿ, ಶಿವಲಿಂಗಪ್ಪ ಕಿತ್ತೂರು, ಜಿನಗೌಡ ಪಾಟೀಲ, ವಸಂತರಾವ ಕುಲಕರ್ಣಿ, ನಾರಾಯಣ ಅದ್ಯಾಪಕ, ರಮೇಶ ಕಣಬೂರ ಅನೇಕರು ಉಪಸ್ಥಿತರಿದ್ದರು ಆನಂದ ದೂಪದಾಳ ಸ್ವಾಗತಿಸಿದರು. ಅಕ್ಷತಾ ಬಿರಾದಾರ ನಿರೂಪಿಸಿದರು.
ನಂತರ ಶಾಲಾ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಜಾನಪದ ನೃತ್ಯ, ನಾಟಕ ಮತ್ತು ದೇಶಭಕ್ತಿ ಗೀತೆಗಳು ಪ್ರೇಕ್ಷಕರ ಮನಸೂರೆಗೊಂಡವು. ಕಳೆದ ಸಾಲಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಮತ್ತು ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 