ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಲು ಜಿಲ್ಲಾಧಿಕಾರಿಗಳು ಕರೆ
ಗದಗ 05: ಸೆಪ್ಟೆಂಬರ್ 2ರಂದು ಗಣೇಶ ಚತುಥರ್ಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಬೇಕೆಂದು ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ನುಡಿದರು.
ಅವರಿಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ ಮತ್ತು ಬಣ್ಣ ಲೇಪಿತ ಗಣೇಶ ವಿಗ್ರಹಗಳ ನಿಷೇಧದ ಬಗ್ಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ಲಾಸ್ಟರ್ ಆಫ್ ಪ್ಯಾರೀಸ್ ಮತ್ತು ರಸಾಯನಿಕ ಬಣ್ಣಲೇಪಿತ ಗಣೇಶ ವಿಗ್ರಹಗಳನ್ನು ತಯಾರಿಸಿ ಜಲ ಮೂಲಗಳಲ್ಲಿ ವಿಸಜರ್ಿಸುವುದನ್ನು ಈಗಾಗಲೇ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಗಣೇಶ ಮೂರ್ತಿ ತಯಾರಕರು ಜೇಡಿ ಮಣ್ಣಿನ ಸಣ್ಣ ಗಾತ್ರದ ಗಣೇಶ ಮೂರ್ತಿಗಳನ್ನು ಮಾತ್ರ ತಯಾರಿಸಬೇಕು. ರಸಾಯನಿಕ ಬಣ್ಣ ಲೇಪಿತ ಗಣೇಶ ವಿಗ್ರಹ ವಿಸರ್ಜನೆಯಿಂದ ವಿಷಯುಕ್ತ ಜಲದಿಂದ ಜಲಚರ ಮೂಲಗಳಿಗೆ ಹಾನಿಯುಂಟಾಗುತ್ತದೆ. ಯಾವ ಕಾರಣಕ್ಕೂ ಇಂತಹ ವಸ್ತುಗಳಿಂದ ಗಣೇಶ ಮೂರ್ತಿಗಳನ್ನು ನಿರ್ಮಿಸದಿರಲು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಪ್ಲಾಸ್ಟರ್ ಆಫ್ ಪ್ಯಾರೀಸ್ನಿಂದ ಗಣೇಶ ವಿಗ್ರಹಗಳನ್ನು ತಯಾರು ಮಾಡದಂತೆ ನೋಡಕೊಳ್ಳುವುದು ಮತ್ತು ಮಾರಾಟ ಮಾಡುವ ವ್ಯಕ್ತಿ ಅಥವಾ ಸಂಸ್ಥೆಗಳಿಗೆ ವ್ಯಾಪಾರ್ ಲೈಸನ್ಸ್ ನ್ನು ನೀಡದಿರಲು, ಯಾವುದೇ ಲೈಸನ್ಸ್ನ್ನು ಪಡೆಯದೇ ಅನಧಿಕೃತವಾಗಿ ತಯಾರಿ, ಮಾರಾಟ ಮಾಡುತ್ತಿರುವ ವ್ಯಕ್ತಿ ಅಥವಾ ಸಂಸ್ಥೆಗಳ ಮೇಲೆ ಕಾನೂನು ಕ್ರಮ ತಕ್ಷಣ ಜರುಗಿಸಲಾಗುವುದು. ಬೇರೆ ಜಿಲ್ಲೆಗಳಿಂದ ಗದಗ ಜಿಲ್ಲೆಗೆ ತರುವ ಪ್ಲಾಸ್ಟರ್ ಆಫ್ ಪ್ಯಾರೀಸ ಗಣೇಶ ವಿಗ್ರಹಗಳನ್ನು ತಡೆಯಲು ಮತ್ತು ವಾಪಸ್ಸು ಕಳುಹಿಸುವ ಜವಾಬ್ದಾರಿಯನ್ನು ಎಲ್ಲ ಗಡಿ ಠಾಣೆಯ/ ಚೆಕ್ ಪೋಸ್ಟರ್ ಅಧಿಕಾರಿಗಳು ಕಡ್ಡಾಯವಾಗಿ ವಹಿಸಬೇಕಾಗುತ್ತದೆ. ತಾಲೂಕು ಮಟ್ಟದಲ್ಲಿಯೂ ತಹಶೀಲ್ದಾರರು ಸ್ಥಳೀಯ ಮುಖ್ಯಾಧಿಕಾರಿಗಳು ಹಾಗೂ ಪೊಲೀಸ ಇಲಾಖೆಯೊಂದಿಗೆ ಈ ಕುರಿತು ಸಮನ್ವಯ ಸಮಿತಿ ಸಭೆಯನ್ನು ಜರುಗಿಸಲು ಜಿಲ್ಲಾಧಿಕಾರಿನಿರ್ದೇಶನ ನೀಡಿದರು.
ಗಣೇಶ ವಿಸರ್ಜನಾ ಸ್ಥಳ ನಿಗದಿ, ಸಾರ್ವಜನಿಕ ಗಣೇಶ ವಿಸರ್ಜನೆಗೆ ಸಮನ್ವಯ ಸಮಿತಿ ರಚನೆ, ಸ್ಥಳೀಯ ಸಂಸ್ಥೆಗಳು ಕೂಡ ಪರಿಸರ ಸ್ನೇಹಿ ಗಣೇಶ ಹಬ್ಬದ ಕುರಿತು ಜನಜಾಗೃತಿ ಕಾರ್ಯಕ್ರಮ, ಸಭೆಯಲ್ಲಿ ಚರ್ಚಿಸಲಾಯಿತು.
ಗದಗ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪವಿಭಾಗಾಧಿಕಾರಿ ಪಿ.ಎಸ್. ಮಂಜುನಾಥ, ಜಿಲ್ಲಾ ಪಂಚಾಯತ್ ಉಪಕಾರ್ಯದಶರ್ಿ ಪ್ರಾಣೇಶ ರಾವ್, ಸ್ಥಳೀಯ ಸಂಸ್ಥೆಯ ಮುಖ್ಯಸ್ಥರು, ಕನರ್ಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಬಿ. ರುದ್ರೇಶ್, ಗಣೇಶ ಮೂತರ್ಿ ತಯಾರಕರು, ವಿವಿಧ ಇಲಾಖೆ ಅಧಿಕಾರಿಗಳು, ಉಪಸ್ಥಿತರಿದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 