ಸಹಕಾರ ಸಂಘಗಳ ಮುಖಾಂತರ ಆರ್ಥಿಕ ಅಭಿವೃದ್ಧಿ ಸಾಧ್ಯ.
Economic development is possible through cooperatives.
ಕೊಪ್ಪಳ 14 ಃ ಜಿಲ್ಲೆಯಲ್ಲಿ ಸಹಕಾರ ಸಂಘಗಳು ಜನಸಾಮಾನ್ಯರ ಆರ್ಥಿಕ ಬದುಕು ರೂಪಿಸಲು ಸಾಕಷ್ಟು ಕೆಲಸ ಮಾಡುತ್ತಿರುವುದು ಶ್ಲಾಘನೀಯ. ವಿಶೇಷವಾಗಿ ಸಹಕಾರ ಸಂಘಗಳ ಮುಖಾಂತರ ದುರ್ಬಲರಿಗೆ, ಸಣ್ಣ ಉದ್ದಿಮೆದಾರರಿಗೆ ಸಾಲ ನೀಡುವ ಮುಖಾಂತರ ಆರ್ಥಿಕ ಸ್ವಾವಲಂಬನೆ ಮಾಡಿ ಸುಸ್ಥಿರ ಅಭಿವೃದ್ಧಿಗೆ ಸಹಕಾರ ಕ್ಷೇತ್ರ ತನ್ನ ಕೊಡುಗೆಯನ್ನು ನೀಡುತ್ತಾ ಬಂದಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕೊಪ್ಪಳ ಜಿಲ್ಲಾ ಸಹಕಾರ ಯೂನಿಯನ್ ನಿ., ಕೊಪ್ಪಳ, ಸಹಕಾರ ಇಲಾಖೆ ಮತ್ತು ಸಂಸ್ಥೆಗಳ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ನಿ., ಕೊಪ್ಪಳ ಹಾಗೂ ಸಹಕಾರ ಇಲಾಖೆ, ಕೊಪ್ಪಳ ಇವರುಗಳ ಸಂಯುಕ್ತ ಆಶ್ರಯದಲ್ಲಿ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ-2025ರ ಮುಖ್ಯಧ್ಯೇಯ: "ಆತ್ಮನಿರ್ಭರ ಭಾರತದ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಸ್ಥೆಗಳು" ಇಂದಿನ ವಿಷಯ: ಕಾರ್ಯದಕ್ಷತೆ ಉತ್ತರದಾಯಿತ್ವ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸಲು ಡಿಜಿಟಲೀಕರಣವನ್ನು ಪ್ರೋತ್ಸಾಹಿಸುವುದು ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದಂತಹ ಕೊಪ್ಪಳ ಜಿಲ್ಲಾ ಸಹಕಾರ ಯೂನಿಯನ್ನಿನ ಉಪಾಧ್ಯಕ್ಷರು ಹಾಗೂ ಸಹಕಾರ ಇಲಾಖೆ ಮತ್ತು ಸಂಸ್ಥೆಗಳ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ನಿ., ಕೊಪ್ಪಳ ಇದರ ಅಧ್ಯಕ್ಷರಾದ ಹಾಲಯ್ಯ ವ್ಹಿ. ಹುಡೇಜಾಲಿ ಇವರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಸಹಕಾರ ಇಲಾಖೆ ಮತ್ತು ಸಂಸ್ಥೆಗಳ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ನಿ., ಕೊಪ್ಪಳ ಇದರ ನೂತನವಾಗಿ ನಿರ್ಮಿಸಿದ ಕಟ್ಟಡವನ್ನು ಮಾಜಿ ಸಂಸದರಾದ ಸಂಗಣ್ಣ ಕರಡಿ, ಮಾಜಿ ಸಚಿವರಾದ ಹಾಲಪ್ಪ ಆಚಾರ, ಉದ್ಘಾಟಿಸಿ ಉತ್ತರೋತ್ತರವಾಗಿ ಸಂಸ್ಥೆಯು ಏಳಿಗೆಯನ್ನು ಪಡೆಯಲಿ ಎಂದು ಆಶಿಸಿ ಶುಭ ಹಾರೈಹಿಸಿದರು. ಕಾರ್ಯಕ್ರಮದ ಜ್ಯೋತಿ ಬೆಳಗಿಸುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಆರ್.ಕೆ.ಡಿ.ಸಿ.ಸಿ. ಬ್ಯಾಂಕಿನ ನಿರ್ದೇಶಕರಾದ ರಾಜೇಂದ್ರಕುಮಾರ ಶೆಟ್ಟರ್ ರವರು ವಹಿಸಿ ಶುಭ ಹಾರೈಹಿಸಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಆರ್.ಕೆ.ಡಿ.ಸಿ.ಸಿ. ಬ್ಯಾಂಕಿನ ನಿರ್ದೇಶಕರಾದ ಶರಣಪ್ಪ ಹ್ಯಾಟಿ, ಶ್ರೀ ಗವಿಸಿದ್ದೇಶ್ವರ ಅರ್ಬನ್ ಬ್ಯಾಂಕಿನ ಅಧ್ಯಕ್ಷರಾದ ರಾಜಶೇಖರಗೌಡ ಆಢೂರು, ಕೃಷಿಕ ಸಮಾಜದ ಉಪಾಧ್ಯಕ್ಷರಾದ ವೈಜನಾಥ ದಿವಟರ, ಜಿಲ್ಲಾ ಸಹಕಾರ ಯೂನಿಯನ್ನಿನ ನಿರ್ದೇಶಕರುಗಳಾದ ಶ್ರೀಮತಿ ಶಕುಂತಲಾ ಹೆಚ್. ಹುಡೇಜಾಲಿ, ಅಂದಾನಪ್ಪ ಎಸ್. ಡಂಬಳ, ಗೃಹ ನಿರ್ಮಾಣ ಸಹಕಾರ ಸಂಘದ ನಿರ್ದೇಶಕರುಗಳಾದ ಕಳಕಪ್ಪ ವಿವೇಕಿ, ಎಲ್.ಬಿ. ವಿವೇಕಿ, ವಿಜೇಂದ್ರ ಕೆ., ಶ್ರೀಮತಿ ಸುಧಾಬಾಯಿ, ಶ್ರೀಮತಿ ರೇಣುಕಾ ಕಣಕಾಲ, ಪಂಪಯ್ಯ ಹಿರೇಮಠ, ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ ಗಣಪತಿ ಬಗಲಿ, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಮಲ್ಲಯ್ಯ ಕಂದಾ, ಸಹಕಾರ ಸಂಘಗಳ ನೀರೀಕ್ಷಕರಾದ ದುರುಗಪ್ಪ ತಿಪ್ಪನಾಳ, ಕೊಪ್ಪಳ ಜಿಲ್ಲಾ ಸಹಕಾರ ಯೂನಿಯನ್ನಿನ .ಮುಖ್ಯಕಾರ್ಯನಿರ್ವಹಣಾಧಿಕಾರಿಯಾದ ಅಕ್ಷಯ್‌ಕುಮಾರ, ಹಾಗೂ ವ್ಯವಸ್ಥಾಪಕರಾದ ರಾಜಶೇಖರ ಎಂ. ಹೊಸಮನಿ ಇವರುಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶ್ರೀಮತಿ ರಾಜ್ಮಾ ರವರು ಪ್ರಾರ್ಥನೆ ಮಾಡಿದರು, ಕೊಪ್ಪಳ ಜಿಲ್ಲಾ ಸಹಕಾರ ಯೂನಿಯನ್ನಿನ .ಮುಖ್ಯಕಾರ್ಯನಿರ್ವಹಣಾಧಿಕಾರಿಯಾದ ಅಕ್ಷಯ್‌ಕುಮಾರ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಉಪನ್ಯಾಸ ನೀಡಿದರು. ಜಿಲ್ಲಾ ಸಹಕಾರ ಯೂನಿಯನ್ ವ್ಯವಸ್ಥಾಪಕರಾದ ರಾಜಶೇಖರ ಎಂ. ಹೊಸಮನಿ ಕಾರ್ಯಕ್ರಮವನ್ನು ನಿರೂಪಿಸಿದರು. ಅತಿಥಿಗಳನ್ನು ಗವಿಸಿದ್ದಯ್ಯ ಎಸ್. ಹಿರೇಮಠ ರವರು ಸ್ವಾಗತಿಸಿದರು. ಕೊನೆಯಲ್ಲಿ ಕಳಕಪ್ಪ ವಿವೇಕಿ ವಂದಿಸಿದರು.
.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 