ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಣ, ಶಿಸ್ತು ಸಹಕಾರಿ: ಶಾಸಕ ಸಿದ್ದು ಸವದಿ
Education and discipline contribute to the all-round development of students: MLA Siddu Savadi
ಮಹಾಲಿಂಗಪುರ 22: ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಣ ಮತ್ತು ಶಿಸ್ತು ಸಹಾಯಕ ಎಂದು ಶಾಸಕ ಸಿದ್ದು ಸವದಿಯವರು ಹೇಳಿದರು. ಸಮೀಪದ ಚಿಮ್ಮಡದ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಪ್ರಭುಲಿಂಗೇಶ್ವರ ಇಂಟರ್ನ್ಯಾಷನಲ್ ಶಾಲೆಯ ವಾರ್ಷಿಕ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಣ ಮತ್ತು ಶಿಸ್ತು ಎರಡು ಮುಖ್ಯ. ಶಿಕ್ಷಣ ಮತ್ತು ಶಿಸ್ತು ಒಂದೇ ನಾಣ್ಯದ ಎರಡು ಮುಖಗಳು. ಎರಡು ಒಟ್ಟಿಗೆ ಸೇರಿದಾಗ ವಿದ್ಯಾರ್ಥಿಗಳ ಸರ್ವೋತೋಮುಖ ಬೆಳವಣಿಗೆ ಸಾಧ್ಯ ಎಂದರು.
ಡಿಎಸ್ಪಿ ರೋಶನ್ ಜಮೀರ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಗುರಿಯ ಕಡೆಗೆ ಗಮನ ವಹಿಸಬೇಕು ಜೊತೆಗೆ ಉತ್ತಮ ಸ್ಥಾನ ಪಡೆಯಬೇಕು ಎಂದರು. ಉಪಾಧ್ಯಕ್ಷ ಬಾಬಾಗೌಡ ಪಾಟೀಲ, ಬೆಂಗಳೂರು ಬುಲ್ಸ್ ತಂಡದ ಪ್ರಮುಖ ಆಟಗಾರ ಸತ್ಯಪ್ಪ ಮಟ್ಟಿ, ಶಾಲೆಯ ಕಾರ್ಯದರ್ಶಿ ವಿದ್ಯಾಧರ ಸವದಿ ಸೇರಿದಂತೆ ಶಾಲಾ ಪ್ರಾಂಶುಪಾಲರು, ಹಿಪ್ಪೋಕ್ಯಾಂಪಸ್ ನಿರ್ದೇಶಕರು, ಶಿಕ್ಷಕ ಸಿಬ್ಬಂದಿ, ಶಾಲೆಯ ಆಡಳಿತ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 