ಆಧುನಿಕ ಭಾರತದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ : ಎಂ.ಎಸ್.ಗುರುಮೂರ್ತಿ
Education is of great importance in modern India: M.S. Gurumurthy
ಕಂಪ್ಲಿ 12: ಪಾಠ, ಪ್ರವಚನದ ಜೊತೆಗೆ ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರ ತರುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಗ್ರಾಪಂ ಮಾಜಿ ಉಪಾಧ್ಯಕ್ಷ ಹಾಗೂ ಶಿಕ್ಷಣ ಪ್ರೇಮಿ ಎಂ.ಎಸ್.ಗುರುಮೂರ್ತಿ ಹೇಳಿದರು. ಸಮೀಪದ ಹೊಸ ದರೋಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ತೋರಣಗಲ್ಲು ಕ್ಲಸ್ಟರ್ ಮಟ್ಟದ ಎಫ್‌ಎಲ್‌ಎನ್ ಕಲಿಕಾ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇಂದಿನ ಆಧುನಿಕ ಭಾರತದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವಿದೆ. ಆದ್ದರಿಂದ ಪೋಷಕರು ಮಕ್ಕಳಿಗೆ ಶಿಕ್ಷಣ ಕೊಡಿಸುವ ಮೂಲಕ ದೇಶದ ಉತ್ತಮ ನಾಗರಿಕರನ್ನಾಗಿ ರೂಪಿಸಬೇಕು. ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ತಿಪ್ಪೇಸ್ವಾಮಿ ಮಾತನಾಡಿ, ಇಂದಿನ ಮಕ್ಕಳಿಗೆ ಆಸ್ತಿ ಮಾಡುವ ಬದಲು ಮಕ್ಕಳಿಗೆ ಶಿಕ್ಷಣ ಕೊಡಿಸುವ ಮೂಲಕ ಮಕ್ಕಳನ್ನು ಆಸ್ತಿಯನ್ನಾಗಿ ರೂಪಿಸಿದರೆ, ಭವಿಷ್ಯ ಉಜ್ವಲವಾಗಿರುತ್ತದೆ.
ತಂತ್ರಜ್ಞಾನದ ಯುಗದಲ್ಲಿ ಮೊಬೈಲ್, ವಾಟ್ಸಾಪ್, ಫೆಸ್‌ಬುಕ್‌ನಿಂದಾಗಿ ಮಕ್ಕಳು ಶಿಕ್ಷಣ ಕಡೆಗೆ ಗಮನ ಹರಿಸುತ್ತಿಲ್ಲ. ಆದ್ದರಿಂದ ಮಕ್ಕಳಿಗೆ ಮೊಬೈಲ್ ಕೊಡುವ ಬದಲು ಪುಸ್ತಕ ಕೊಟ್ಟರೇ, ಶಿಕ್ಷಣವಂತರಾಗಲು ಸಾಧ್ಯ ಎಂದರು. ಸಿಆರ್‌ಪಿ ಯಾಸ್ಮಿನ್ ಜಂಗಲ್ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳು ಪ್ರಾಥಮಿಕ ಶಾಲಾ ಮಟ್ಟದಿಂದಲೇ ಶೈಕ್ಷಣಿಕ ಅಭಿವೃದ್ಧಿಗೆ ಒತ್ತು ನೀಡಬೇಕು. ಕಲಿಕಾ ಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸುವುದರಿಂದ ಸ್ವರ್ಧಾ ಮನೋಭಾವ ಬೆಳೆಯಲಿದೆ ಎಂದರು. ನಂತರ ಮಕ್ಕಳಿಂದ ವಿವಿಧ ಸ್ಪರ್ಧೆಗಳು ನಡೆದವು. ಕಾರ್ಯಕ್ರಮದಲ್ಲಿ ವಿಜೇತರಾದ ಎಲ್ಲ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಮಾಯಣ್ಣ, ಎಸ್‌ಡಿ.ಎಂಸಿ ಸದಸ್ಯರಾದ ಎರಿ್ರಸ್ವಾಮಿ, ರಂಗಸ್ವಾಮಿ, ಕೆ.ಹನುಮಂತಪ್ಪ, ಈರಮ್ಮ, ರಫಿಯಾ, ರಮೀಜಾ, ಮುಖ್ಯಗುರು ಮಲ್ಲಿಕಾರ್ಜುನ ಸೇರಿದಂತೆ ಶಿಕ್ಷಕರು, ಸ್ಥಳೀಯ ಮುಖಂಡರು, ಮಕ್ಕಳು ಪಾಲ್ಗೊಂಡಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 