ರಾಜ್ಯದಲ್ಲಿ ಜೈವಿಕ ಇಂಧನ ಕ್ಷೇತ್ರದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆಗೆ ಪ್ರಯತ್ನ : ಎಸ್.ಇ. ಸುಧೀಂದ್ರ
Efforts to increase investment in biofuel sector in the state: S.E. Sudhindra
ಕಾರವಾರ, ಜ.28: ರಾಜ್ಯದಲ್ಲಿ ನೂತನ ಜೈವಿಕ ಇಂಧನ ರಚನೆಗೆ ಮತ್ತು ಈ ಕ್ಷೇತ್ರದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆಗಾಗಿ, ಜೈವಿಕ ಇಂಧನ ಸಂಶೋಧನೆ, ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕೇಂದ್ರಗಳು, ಜೈವಿಕ ಇಂಧನ ಉದ್ಯಾನಗಳು, ಸ್ವಯಂ ಸೇವಾ ಸಂಸ್ಥೆಗಳು, ಜೈವಿಕ ಇಂಧನ ಸಂಶೋಧನೆ ಹಾಗೂ ಗುಣಮಟ್ಟ ಖಾತ್ರಿ ಪ್ರಯೋಗ ಶಾಲೆ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯೊಂದಿಗಿನ ಸಹಯೋಗದಲ್ಲಿ, ಜೈವಿಕ ಇಂಧನ ಕ್ಷೇತ್ರದ ಬೆಳವಣಿಗೆಗಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇದಕ್ಕೆ ಪ್ರೋತ್ಸಾಹ ದೊರಕಿಸುವಲ್ಲಿ ಪರಿಣಾಮಕಾರಿಯಾಗಿವೆ ಎಂದು ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ದಿಮಂಡಳಿಯ ಅಧ್ಯಕ್ಷ ಎಸ್.ಈ.ಸುಧೀಂದ್ರ ತಿಳಿಸಿದರು.
ಅವರು ಬುಧವಾರ ಕಾರವಾರ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿನ, ಜೈವಿಕ ಇಂಧನ ಸಂಶೋಧನೆ, ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕೇಂದ್ರಕ್ಕೆ ಭೇಟಿ ನೀಡಿ ಪ್ರಗತಿ ಪರೀಶೀಲನೆ ನಡೆಸಿದರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಕಾರವಾರದ ಕೇಂದ್ರವು ಕಡಲ ತೀರದಲ್ಲಿ ದೊರೆಯುವ ಜೈವಿಕ ಇಂಧನ ಸಂಪನ್ಮೂಲಗಳ ಕುರಿತು ಹಾಗೂ ಸಿರ್ಸಿ ಅರಣ್ಯ ಕಾಲೇಜಿನ ಕೇಂದ್ರವು ಅರಣ್ಯ ಸಂಪನ್ಮೂಲಗಳ ಮೇಲೆ ಕೇಂದ್ರೀಕೃತವಾಗಿ ಕಾರ್ಯನಿರ್ವಹಿಸುತ್ತಿರುವುದರ ಕುರಿತು ಚರ್ಚಿಸಿದರು.
ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಮಾತನಾಡಿ, ಜಿಲ್ಲಾ ವಿಜ್ಞಾನ ಕೇಂದ್ರದ ಕಾರ್ಯಚಟುವಟಿಕೆಗಳ ಕುರಿತು ಸಮಗ್ರ ಮಾಹಿತಿ ನೀಡಿ , ಜೈವಿಕ ಇಂಧನ ಸಂಶೋಧನೆ, ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕೇಂದ್ರವು ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿರುವುದರಿಂದ ಕಾರವಾರ ಮತ್ತು ಗೋವಾ ರಾಜ್ಯದ ವಿದ್ಯಾರ್ಥಿಗಳಿಗೆ ಜೈವಿಕ ಇಂಧನ ಕುರಿತು ಅರಿವು ಮೂಡಿಸುವಲ್ಲಿ, ಸಂಶೋಧನಾ ಕಾರ್ಯಗಳನ್ನು ಕೈಗೊಳ್ಳಲು ಹಾಗೂ ಬಯೋ ಡೀಸಲ್ ಉತ್ಪಾದನೆಯನ್ನು ಪ್ರಾತ್ಯಕ್ಷಿಕೆಯ ಮೂಲಕ ವಿವರಿಸಲು ನೆರವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಾದ ಶಿವಶಂಕರ್.ಎಲ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಅಲ್ಲಾಬಕ್ಷ್, ವಲಯ ಅರಣ್ಯಾಧಿಕಾರಿ, ಕಿರಣ್ ಮಾನವಾಚಾರಿ , ಮರೈನ್ ಇಕೋ ಸಿಸ್ಟಮ್ ಸೆಲ್, ಕಾರವಾರ ಕೇಂದ್ರದ ಸಂಯೋಜಕಾರದ ರೋಹನ್ ಬುಜಲೆ, ಹಾಗೂ ವಿಜ್ಞಾನ ಕೇಂದ್ರದ ಅಧಿಕಾರಿಗಳು ಹಾಗೂ ಜೈವಿಕ ಇಂಧನ ಕೇಂದ್ರದ ಸಿಬ್ಬಂದಿಂ ನಿಧಿ ನಾಯಕ್ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 