ನೌಕರರ ಸಂಘದ ಅಧ್ಯಕ್ಷರಾಗಿ ಮೂರನೇ ಬಾರಿಗೆ ಆಯ್ಕೆ

Elected for the third time as the President of the Employees' Union

ನೌಕರರ ಸಂಘದ ಅಧ್ಯಕ್ಷರಾಗಿ ಮೂರನೇ ಬಾರಿಗೆ ಆಯ್ಕೆ

ಧಾರವಾಡ 16 : ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಮೂರನೇ ಬಾರಿಗೆ ಆಯ್ಕೆ ಆದ ಮಾನ್ಯ ಶ್ರೀ ಎಸ್ ಎಫ್ ಸಿದ್ಧನಗೌಡ್ರ ಅವರನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸನ್ಮಾನ ಮಾಡಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಫೆಬ್ರವರಿ 3 , 4 ರಂದು ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಜರುಗುವ 17 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಕ್ಕೆ  ಧಾರವಾಡ ಜಿಲ್ಲೆಯ ಎಲ್ಲ ಸರ್ಕಾರಿ ನೌಕರರನ್ನು ಹಾಗೂ ಜಿಲ್ಲಾ, ತಾಲೂಕು ಪದಾಧಿಕಾರಿಗಳಿಗೆ ಆಹ್ವಾನ ನೀಡಿಲಾಯಿತು. ಎಲ್ಲ ನೌಕರರಿಗೂ ಸಹ ಓಓಡಿ ಸೌಲಭ್ಯ ವಿರುತ್ತದೆ. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಡಾ. ಲಿಂಗರಾಜ ಅಂಗಡಿ, ಎ.ಡಿ.ಎಲ್‌.ಆರ್ ರಾಜಶೇಖರ ಹಳ್ಳೂರ.  ಗೌರವ ಕಾರ್ಯದರ್ಶಿ ಕೆ.ಎಸ್ ಕೌಜಲಗಿ, ತಾಲೂಕಾಧ್ಯಕ್ಷ ಮಹಾಂತೇಶ ನರೇಗಲ್ಲ, ಕಾರ್ಯದರ್ಶಿ ಮಾರ್ತಾಂಡಪ್ಪ ಕತ್ತಿ, ಪರಿವಾನಿಗೆ ಭೂಮಾಪಕ ಶಿವಾನಂದ ಅಗಸಿಮನಿ ಇದ್ವಿದರು.