ಪತ್ರಕರ್ತರ ಸಂಘದ ಶಿರಹಟ್ಟಿ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ
Election of office bearers of Shirahatti Taluk unit of Journalists Association
ಶಿರಹಟ್ಟಿ 27: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿರಹಟ್ಟಿ ತಾಲೂಕು ಘಟಕದ ಪದಾಧಿಕಾರಿಗಳ ಚುನಾವಣೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಸೇರಿ 8 ಸ್ಥಾನಗಳೂ ಅವಿರೋಧ ಆಯ್ಕೆ ಪ್ರಕ್ರಿಯೆ ಜರುಗಿತು ಎಂದು ರಾಜ್ಯ ಕಾರ್ಯಕಾರಿಣಿ ಸದಸ್ಯ ಹಾಗೂ ತಾಲೂಕು ಚುನಾವಣಾಧಿಕಾರಿ ಅರುಣಕುಮಾರ ಹಿರೇಮಠ ತಿಳಿಸಿದರು.ಕಾರ್ಯನಿರತ ಪತ್ರಕರ್ತರ ಸಂಘದ ಶಿರಹಟ್ಟಿ ತಾಲೂಕು ಘಟಕದ ಅಧ್ಯಕ್ಷರಾಗಿ ಮಹದೇವಪ್ಪ ಮಲ್ಲೇಶಪ್ಪ ಸ್ವಾಮಿ, ಉಪಾಧ್ಯಕ್ಷರಾಗಿ ನಿಂಗಪ್ಪ ಮೈಲಾರ್ಪ ಹಮ್ಮಿಗಿ, ಪ್ರಧಾನ ಕಾರ್ಯದರ್ಶಿಯಾಗಿ ರಾಘವೇಂದ್ರ ನರಸಿಂಹ ಕುಲಕರ್ಣಿ, ಕಾರ್ಯದರ್ಶಿಯಾಗಿ ಪ್ರದೀಪಕುಮಾರ ಎಸ್. ಗೊಡಚಪ್ಪನವರ, ಖಜಾಂಚಿಯಾಗಿ ಭರಮಪ್ಪ ಕರಿಯಪ್ಪ ಬಳೂಟಗಿ ಹಾಗೂ ತಾಲೂಕು ಕಾರ್ಯಕಾರಿಣಿ ಸದಸ್ಯರಾಗಿ ವೀರೇಶ ಎಸ್. ಉಮನಾಬಾದಿ, ನೀಲಕಂಠಪ್ಪ ಪ್ರಕಾಶ ನಾಗಶೆಟ್ಟಿ, ಉದಯಕುಮಾರ ಹಣಗಿ ಅವಿರೋಧವಾಗಿ ಆಯ್ಕೆಯಾದರು.
ಕಾನಿಪ ಶಿರಹಟ್ಟಿ ತಾಲೂಕು ಅಧ್ಯಕ್ಷ ಮಹದೇವಪ್ಪ ಮಲ್ಲೇಶಪ್ಪ ಸ್ವಾಮಿ ಮಾತನಾಡಿ, ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಸೇರಿ 8 ಸ್ಥಾನಗಳಿಗೆ ತಲಾ ಒಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ, ಸಲ್ಲಿಕೆಯಾದ ಎಲ್ಲ ನಾಮಪತ್ರಗಳನ್ನು ಪರೀಶೀಲಿಸಿದ ಚುನಾವಣಾಧಿಕಾರಿ ಅರುಣಕುಮಾರ ಹಿರೇಮಠ ಅವರು ನಾಮಪತ್ರ ಸಲ್ಲಿಸಿದ ಎಲ್ಲ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು ಎಂದರು. ಅಲ್ಲದೇ, ಮುಂಬರುವ ದಿನಗಳಲ್ಲಿ ಸರ್ವ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘದ ಶ್ರೇಯೋಭಿವೃದ್ಧಿಗೆ ಶ್ರಮಿಸುವುದಾಗಿಯೂ ತಿಳಿಸಿದರು. ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಮಲ್ಲು ಕಳಸಾಪೂರ ಹಾಗೂ ಸಂತೋಷ ಮುರಡಿ ಅವರು ಸಹಾಯಕ ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದರು. ಈ ಸಂದರ್ಭದಲ್ಲಿ ಕಾನಿಪ ಜಿಲ್ಲಾ ಕಾರ್ಯದರ್ಶಿ ಚಂದ್ರು ಕುಸ್ಲಾಪೂರ, ಹಿರಿಯ ಪತ್ರಕರ್ತರಾದ ಜಿ.ಬಿ. ಹೆಸರೂರ, ಎ.ಎಚ್. ಖಾಜಿ, ಪ್ರಕಾಶ ಮೇಟಿ, ಮಂಜುನಾಥ ಅರೆಪಲ್ಲಿ ಸೇರಿ ಕಾನಿಪದ ಎಲ್ಲ ಸದಸ್ಯರು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 