ಮತದಾರರ ಪಟ್ಟಿಗೆ ಅರ್ಹರು ಹೆಸರು ಸೇರಿಸಿಕೊಳ್ಳಿ
Eligible persons should get their names added to the voters' list
ಲೋಕದರ್ಶನ ವರದಿ
ಹಾವೇರಿ 02 : ಮತದಾನ ಪ್ರತಿಯೊಬ್ಬರ ಮೂಲಭೂತ ಹಕ್ಕು. ಮತದಾರರ ಚೀಟಿ ಅಸ್ತಿತ್ವದ ಗುರುತು. ಅದು ನಮ್ಮ ಜೀವಂತಿಕೆಯನ್ನು ತೋರಿಸುತ್ತದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಜಾರಿಗೊಳಿಸಿರುವ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಪಾಲ್ಗೊಳ್ಳುವ ಎಲ್ಲ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರೆ್ಡಗೊಳಿಸಬೇಕು ಎಂದು ವಿಧಾನಸಭೆ ಸಭಾಧ್ಯಕ್ಷ ಹಾಗೂ ಶಾಸಕ ರುದ್ರ್ಪ ಲಮಾಣಿ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಹಾವೇರಿ ವಿಧಾನಸಭಾ ಕ್ಷೇತ್ರದ ಬಿ.ಎಲ್.ಎ 2ಗಳ ಸಭೆಯಲ್ಲಿ ಮಾತನಾಡಿದ ಅವರು, ವಿಶೇಷ ಸಮಗ್ರ ಪರಿಷ್ಕರಣೆ ಈ ತಿಂಗಳಾಂತ್ಯದವರೆಗೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಬಗ್ಗೆ ಅಭಿಮಾನ ಹೊಂದಿರುವ ದಲಿತರು,ಅಲೆಮಾರಿಗಳು ಹಾಗೂ ಶ್ರಮಿಕರ ಹೆಸರುಗಳು ಮತದಾರರ ಪಟ್ಟಿಯಿಂದ ಹೊರ ಹೋಗದಂತೆ ನೋಡಿಕೊಳ್ಳಬೇಕಿದೆ. ತಮ್ಮ ದಾಖಲೆಗಳನ್ನು ಸಲ್ಲಿಸುವಾಗ ಯಾವುದೇ ಅಕ್ಷರ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕಿದೆ. ನಮ್ಮ ಪಕ್ಷದ ಮತದಾರರನ್ನು ಹಿಡಿದಿಟ್ಟುಕೊಳ್ಳುವುದು ಕಾರ್ಯಕರ್ತರ ಜವಾಬ್ದಾರಿ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಮಾತನಾಡಿ ನಮ್ಮ ದೇಶದಲ್ಲಿ ಮೊದಲ ಬಾರಿಗೆ ಮತದಾರರನ್ನು 18 ವಯಸ್ಸಿಗೆ ಅರ್ಹರನ್ನಾಗಿ ಮಾಡಿದ ಶ್ರೇಯಸ್ಸು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ಸಲ್ಲುತ್ತದೆ. ಸದ್ಯ ಕೇಂದ್ರ ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿದೆ. ಕಾಂಗ್ರೆಸ್ ಪಕ್ಷದ ಮತದಾರರನ್ನು ಕಡೆಗಣಿಸಲು ಬಿಜೆಪಿಯೊಂದಿಗೆ ಕೈಜೋಡಿಸಿದೆ ಎಂದು ಆರೋಪಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 