ಮಕ್ಕಳನ್ನು ಪ್ರೋತ್ಸಾಹಿಸುವುದು ಅತ್ಯಗತ್ಯ: ಮಮದಾಪುರ
Encouraging children is essential: Mamadapura
ವಿಜಯಪುರ 01: ದರಬಾರ ಸಮೂಹ ಶಿಕ್ಷಣ ಸಂಸ್ಥೆಯ, ವಿದ್ಯಾವರ್ಧಕ ಸಂಘದ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಾರ್ಷಿಕ ಪಾರಿತೋಷಕ ವಿತರಣಾ ಸಮಾರಂಭ ಜರುಗಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಡಿ. ಎನ್. ದರಬಾರ ಬಾಲಕಿಯರ ಮಾಧ್ಯಮಿಕ ಶಾಲೆಯ ಮುಖ್ಯೋಧ್ಯಾಪಕಿಯಾದ ಸುಜಾತಾ ಮಮದಾಪುರ ಅವರು ಮಾತನಾಡಿ ಮಕ್ಕಳಿಗೆ ಆಟ, ಪಾಠ, ಮನೋರಂಜನೆಯ ಜೊತೆಗೆ ಮಕ್ಕಳಿಗೆ ಪ್ರಶಸ್ತಿ ನೀಡುವುದು, ಅವರನ್ನು ಪ್ರೋತ್ಸಾಹಿಸುವುದು ತುಂಬಾ ಅತ್ಯಗತ್ಯವಾದುದು ಎಂದು ಹೇಳಿದರು.
’ಶಿಸ್ತು ಮೊದಲು, ಆಮೇಲೆ ಓದು’ ಎಂಬ ಧ್ಯೇಯ ವಾಕ್ಯವನ್ನು ಮಕ್ಕಳು ತಮ್ಮ ಬಾಲ್ಯ ಜೀವನದಲ್ಲಿ ಅಳವಡಿಸಿಕೊಳ್ಳುವುದು ತುಂಬಾ ಅಗತ್ಯವೆಂದು ಹೇಳಿದರು. ಕಾರ್ಯಕ್ರಮದ ವೇದಿಕೆಯ ಅಧ್ಯಕ್ಷತೆಯನ್ನು ಮುಖ್ಯೋಧ್ಯಾಪಕಿ ರೂಪಾಲಿ ತೋಳ ವಹಿಸಿಕೊಂಡಿದ್ದರು ಹಾಗೂ ಶಾಲೆಯ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಯವರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 