ವಿವಿಧ ಸ್ಥಳೀಯ ಬೇಡಿಕೆ ಈಡೇಸಲು ಭರವಸೆ ಹಿನ್ನೆಲೆ ಮುಷ್ಕರ ಮುಕ್ತಾಯ

Ending the strike against the background of promises to fulfill various local demands

ವಿವಿಧ ಸ್ಥಳೀಯ ಬೇಡಿಕೆ ಈಡೇಸಲು ಭರವಸೆ ಹಿನ್ನೆಲೆ ಮುಷ್ಕರ ಮುಕ್ತಾಯ 

ವಿಜಯಪುರ 18: ಕರ್ನಾಟಕ ಅಂಗನವಾಡಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಸಂಯೋಜಿತ ಜಿಲ್ಲಾ ಸಮಿತಿ ವಿಜಯಪುರ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಮುಂಭಾಗ ಎರಡನೇ ದಿನವಾದ ಬುಧವಾರ ಅಹೋರಾತ್ರಿ ಧರಣಿ ಮುಷ್ಕರವನ್ನು ಮುಕ್ತಾಯಗೊಳಿಸಿದರು. 

ಮುಷ್ಕರ ನಿರತರ ಸ್ಥಳೀಯ ಬೇಡಿಕೆಗಳನ್ನು ಸ್ಥಳಕ್ಕೆ ಆಗಮಿಸಿದ ವಿಜಯಪುರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ. ಚವ್ಹಾಣ ಆಗಮಿಸಿ ಮನವಿ ಪತ್ರ ಸ್ವೀಕರಿಸಿ, ಒಂದು ವಾರದ ನಂತರ ತಮ್ಮೆಲ್ಲರ ಬೇಡಿಕೆಗಳನ್ನು ಮುಂದಿನ ದಿನಗಳಲ್ಲಿ ಸಭೆ ಕರೆದು ಚರ್ಚಿಸಿ ತಮ್ಮ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ಭರವಸೆ ನೀಡಿದರು. 

ಈ ಸಂದರ್ಭದಲ್ಲಿ ಅಂಗನವಾಡಿ ನೌಕರರ ಜಿಲ್ಲಾಧ್ಯಕ್ಷರಾದ ಸುನಂದಾ ನಾಯಕ ಮಾತನಾಡಿ, ಮುಂಗಡವಾಗಿ ಕೋಳಿ ಮೊಟ್ಟೆ, ಬಾಡಿಗೆ, ಗ್ಯಾಸ್, ತರಕಾರಿ, ಕಾಂಟೆಜಿನ್ಸಿ ಬಿಲ್‌ಗಳನ್ನು ಹಾಕದೇ ಫಲಿತಾಂಶ ಕೇಳಬಾರದು. ಅಂಗನವಾಡಿ ಕೇಂದ್ರದ ಚಟುವಟಿಕೆಗಳನ್ನು ಮೊಬೈಲ್‌ನಲ್ಲಿ ದಾಖಲೆ ನಿರ್ವಹಣೆ ಮಾಡಿದರೆ, ಪುಸ್ತಕದಲ್ಲಿ ಬರೆಯುವುದನ್ನು ನಿಲ್ಲಿಸಬೇಕು. ಘೋಷಣ್ ಟ್ರಾಕರ್‌ನಲ್ಲಿರುವ ಫೇಸ್ ವ್ಯಾಲ್ಯು ಹಾಕಬೇಕಾದರೆ ತಾಂತ್ರಿಕ ಮತ್ತು ಪ್ರಾಯೋಗಿಕ ಸಮಸ್ಯೆಗಳನ್ನು ಬಗೆಹರಿಸಬೇಕು. ಇಲಾಖೆ ನಡೆಸುವ ಮಾಸಿಕ ಮತ್ತು ಗೌರವಧನದ ಸಭೆಗಳಲ್ಲಿ ಅಂಗನವಾಡಿ ನೌಕರರಿಗೆ ಕುರ್ಚಿ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು. 

ಈ ಸಂದರ್ಭದಲ್ಲಿ  ಸಿಐಟಿಯು ಜಿಲ್ಲಾಧ್ಯಕ್ಷರಾದ ಅಣ್ಣಾರಾಯ ಈಳಗೇರ, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಹಂದ್ರಾಳ, ಜಿಲ್ಲಾ ಗೌರವಾಧ್ಯಕ್ಷರು ಭಾರತಿ ವಾಲಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ವಿನಿ ತಳವಾರ, ರೈತ ಮುಖಂಡರಾದ ಭೀಮರಾಯ ಪೂಜಾರಿ, ಜಿಲ್ಲಾ ಖಜಾಂಚಿ ಪ್ರತಿಭಾ ಕುರಡೆ, ಸಿಂದಗಿ ತಾಲೂಕಾಧ್ಯಕ್ಷರಾದ ಸರಸ್ವತಿ ಮಠ, ವಿಜಯಪುರ ತಾಲೂಕಾ ಕಾರ್ಯದರ್ಶಿ ಸುವರ್ಣಾ ಹಲಗಣಿ, ಚಡಚಣ ತಾಲೂಕಾ ಕಾರ್ಯದರ್ಶಿ ಶೋಭಾ ಕಬಾಡೆ, ಬ.ಬಾಗೇವಾಡಿ ತಾಲೂಕಾ ಅಧ್ಯಕ್ಷರಾದ ವಿಜಯಲಕ್ಷ್ಮೀ ಹಿಪ್ಪರಗಿ, ಬ.ಬಾಗೇವಾಡಿ ಕಾರ್ಯದರ್ಶಿ ಚೌಡಮ್ಮ ಕಡಕೋಳಕರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.