ಇಂಧನ ಅಭಿವೃದ್ಧಿ ನಿಯಮಿತ ತಾಂತ್ರಿಕ ತರಬೇತಿ ಕಾರ್ಯಕ್ರಮ
Energy Development Regular Technical Training Programme
ಹುಬ್ಬಳ್ಳಿ ಏ.1: ಇಲ್ಲಿನ ವಿದ್ಯಾನಗರದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ (ಬಿ.ಇ.ಇ) ಹಾಗೂ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ (ಕ್ರೆಡೆಲ್) ರವರ ಪ್ರಾಯೋಜಕತ್ವದಲ್ಲಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಸಹಯೋಗದೊಂದಿಗೆ ಪಂಪ್ ಉಪಕರಣ ತಂತ್ರಜ್ಞರು ಹಾಗೂ ವಿದ್ಯಾರ್ಥಿಗಳಿಗೆ ಇಂಧನ ದಕ್ಷತಾ ಕ್ರಮಗಳ ಕುರಿತು ತಾಂತ್ರಿಕ ತರಬೇತಿ ಕಾರ್ಯಕ್ರಮ ಇತ್ತೀಚೆಗೆ ಜರುಗಿತು.
ಕ್ರೆಡೆಲ್‌ನ ಹುಬ್ಬಳ್ಳಿ ಧಾರವಾಡದ ತಾಂತ್ರಿಕ ಅಧಿಕಾರಿ ಸವಿತಾ ಎಸ್. ಮೇಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ನವೀಕರಿಸಬಹುದಾದ ಇಂಧನಗಳಿಂದ ಪರಿಸರಕ್ಕೆ ಆಗುವ ಲಾಭಗಳು ಮತ್ತು ನವೀಕರಿಸಲಾಗದ ಇಂಧನಗಳಿಂದ ಆಗುವ ಹಾನಿಗಳು, ಮಧ್ಯ ಪ್ರಾಚ್ಯ ದೇಶಗಳ ಯುದ್ಧದಿಂದ ನವೀಕರಿಸಲಾಗದ ಇಂಧನಗಳ ಅಭಾವ, ಅದನ್ನು ತುಂಬಿಕೊಳ್ಳುವ ಬಗೆ ಹೇಗೆ?,
ನಮ್ಮ ದೇಶದಲ್ಲಿ ಇಂಧನದ ಸ್ವಾವಲಂಬನೆ, ಪ್ರಧಾನ ಮಂತ್ರಿ ಮುಫ್ತ ಬಿಜಿಲಿ ಸೂರ್ಯಘರ್ ಯೋಜನೆ, ಕರ್ನಾಟಕ ಸರ್ಕಾರದ ಯೋಜನೆಗಳು ಮತ್ತು ಇಂಧನ ಉಳಿಸುವುದರ ಕುರಿತು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು. ಇದು ಬಿಇಇ ಕ್ರೆಡೆಲ್ ನಿಂದ ಪಂಪ್ ಉಪಕರಣಗಳ ಕ್ಷಮತೆ, ಇಂಧನ ಉಳಿತಾಯದ ಮತ್ತು ನವೀಕರಿಸಬಹುದಾದ ಇಂಧನಗಳ ಕುರಿತಾದ ತಿಳುವಳಿಕೆ ಕಾರ್ಯಕ್ರಮವಾಗಿದೆ ಎಂದು ಅವರು ತಿಳಿಸಿದರು.
ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ರವೀಂದ್ರ ಪಿ.ದ್ಯಾಬೇರಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವಿದ್ಯಾರ್ಥಿಗಳಿಗೆ ತರಬೇತಿಯನ್ನು ಕಿರ್ಲೋಸ್ಕರ್ ಎಲೆಕ್ಟ್ರೀಕ್ ಕಂಪನಿಯ ನಿವೃತ್ತ ಇಂಜಿನಿಯರಾದ ಅಜಿತ್ ದಾನಿ ಅವರು ನಡೆಸಿಕೊಟ್ಟರು.ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಬಂಧ, ರಸ ಪ್ರಶ್ನೆ ಸ್ಪರ್ಧೆಗಳನ್ನು ಏರಿ್ಡಸಲಾಗಿತ್ತು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಮತ್ತು ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಇತರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 