ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಅಭಿಯಂತರರ ದಿನಾಚರಣೆ
Engineers' Day celebrated at Visvesvaraya Technological University
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಅಭಿಯಂತರರ ದಿನಾಚರಣೆ
ಬೆಳಗಾವಿ, 15 ; ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿಯಲ್ಲಿ ಅಭಿಯಂತರರ ದಿನಾಚರಣೆ ಆಚರಣೆ ವಿಶ್ವ ಕಂಡ ಶ್ರೇಷ್ಠ ಇಂಜಿನಿಯರಗಳಲ್ಲಿ ಒಬ್ಬರಾದ ಸರ್ ಎಂ ವಿಶ್ವೇಶ್ವರಯ್ಯನವರ ಜನ್ಮದಿನಾಚರಣೆ ಅಂಗವಾಗಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಅಭಿಯಂತರರ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಬೆಳಗಾವಿ ನಗರದ ಪೋಲಿಸ ಕಮಿಷನರ್ ಶ್ರೀ ಭೂಷಣ ಗುಲಾಬರಾವ ಬೋರ್ಸೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.ಸರ್ ಎಂ ವಿಶ್ವೇಶ್ವರಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸ್ವತಃ: ಇಂಜಿನಿಯರಿಂಗ್ ಪದವೀಧರರಾದ ಅವರು ಈ ಸಂದರ್ಭದಲ್ಲಿ ಮಾತನಾಡುತ್ತಾ ಸರ್. ಎಂ. ವಿಶ್ವೇಶ್ವರಯ್ಯನವರು ಆಧುನಿಕ ಭಾರತದ ನಿರ್ಮಾತೃರರಲ್ಲಿ ಒಬ್ಬರಾಗಿದ್ದು ಅವರು ಬದುಕು ಕೇವಲ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಅಷ್ಟೇ ಅಲ್ಲದೆ ಎಲ್ಲರಿಗೂ ಅದರಲ್ಲಿಯೂ ಅಧಿಕಾರದಲ್ಲಿ ಇರುವ ಎಲ್ಲರಿಗೂ ಮಾದರಿಯಾಗಿದೆ ಎಂದು ಹೇಳಿದ ಅವರು ಅವರ ಹೆಸರಿನಲ್ಲಿ ಇರುವ ಈ ವಿಶ್ವವಿದ್ಯಾಲಯದಲ್ಲಿ ಓದುತ್ತಿರುವ ನೀವು ಅವರ ರಾಯಭಾರಿಗಳಾಗಿ ಬೆಳೆಯಬೇಕು ಎಂದು ಹೇಳಿದರು.
ಇವತ್ತಿನ ವಿದ್ಯಾರ್ಥಿಗಳು ಪುಸ್ತಕದ ಜ್ಞಾನದ ಜೊತೆಗೆ ಕೌಶಲ್ಯ ಜ್ಞಾನವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ನೀವು ಬದುಕಿನ ಅತ್ಯಂತ ರಕ್ಷಣಾತ್ಮಕ ಅವಧಿಯಲ್ಲಿ ಬದುಕುತ್ತ ಇದ್ದಿರಿ ಕಾರಣ ತೋರಿಕೆಯ ಬದುಕನ್ನ ಮೈಗೂಡಿಸಿಕೊಳ್ಳದೆ ಸರಳವಾಗಿ ವಿದ್ಯಾರ್ಥಿ ಬದುಕನ್ನ ಬದುಕಿ ಹಾಗೂ ಮಾದಕ ವಸ್ತುಗಳ ಬಳಕೆ ಮತ್ತು ಸೇವನೆಯಿದ ದೂರವಿರಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಅಧ್ಯಕ್ಷೀಯ ಭಾಷಣ ಮಾಡಿದ ಕುಲಪತಿ ಪ್ರೊ ವಿದ್ಯಾಶಂಕರ್ ಎಸ್ ಅವರು ವಿದ್ಯಾರ್ಥಿಗಳನ್ನು ಪರಿಪೂರ್ಣ ಇಂಜಿನಿಯರಿಂಗ್ ಪದವಿಧರರನ್ನಾಗಿ ಮಾಡಲು ವಿ ಟಿ ಯು ಅನೇಕ ಯೋಜನೆಗಳನ್ನು ಹಮ್ಮಿಕೊಂಡು ಸೆಂಟರ್ ಆಫ್ ಎಕ್ಸೆಲೆನ್ಸ್ ಗಳನ್ನ ಸ್ಥಾಪಿಸಿದೆ ಎಂದು ಹೇಳಿದರು.ಕುಲಸಚಿವರಾದ ಪ್ರೊ. ಬಿ. ಈ. ರಂಗಸ್ವಾಮಿ ಸ್ವಾಗತಿಸಿದರು, ಪ್ರೊ. ಟಿ. ಎನ್. ಶ್ರೀನಿವಾಸ ವಂದಿಸಿದರು, ಪ್ರೊ ಎಸ್. ಎ. ಅಂಗಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು ಮತ್ತು ಪ್ರೊ. ವಿವೇಕ್ ರೆಡ್ಡಿ ಅತಿಥಿಗಳನ್ನು ಪರಿಚಯಿಸಿದರು. ಪ್ರೊ ರಂಜನಾ ನಾಡಗೌಡರ್ ಕಾರ್ಯಕ್ರಮವನ್ನು ನಿರೂಪಿಸಿದರು. ಈ ಸಂದರ್ಭದಲ್ಲಿ ಹಣಕಾಸು ಅಧಿಕಾರಿ ಡಾ ಪ್ರಶಾಂತ ನಾಯಕ್ ಜಿ, ವಿಟಿಯು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 