ಇಂಗ್ಲಿಷ್ : ಗ್ರಾಮೀಣ ವಿದ್ಯಾರ್ಥಿಗಳು ವಂಚಿತರಾಗಬಾರದು

English : Rural students should not be deprived

ಇಂಗ್ಲಿಷ್ : ಗ್ರಾಮೀಣ ವಿದ್ಯಾರ್ಥಿಗಳು ವಂಚಿತರಾಗಬಾರದು  

ಹೂವಿನ ಹಡಗಲಿ 11: ಗ್ರಾಮೀಣ ವಿದ್ಯಾರ್ಥಿಗಳು ಇಂಗ್ಲಿಷ್ ಜ್ಞಾನದಿಂದ ವಂಚಿತರಾಗಬಾರದು ಎಂದು ಪ್ರಾಚಾರ್ಯ ಬಿ ಈಶ್ವರ​‍್ಪ ಹೇಳಿದರು.ತಾಲೂಕಿನ ಹಿರೇಹಡಗಲಿಯ ವಿ. ಕೆ. ಕೆ. ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹೊಳಲು, ಮಾಗಳ ಮತ್ತು ಹಿರೇಹಡಗಲಿ ಸರಕಾರಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಒಂದು ದಿನದ ಇಂಗ್ಲಿಷ್ ಪರೀಕ್ಷಾ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಪಡೆಯಲು ಇಂಗ್ಲಿಷ್ ವಿಷಯವನ್ನು ಚೆನ್ನಾಗಿ ಅರ್ಥೈಸಿಕೊಳ್ಳಬೇಕು. ಮುಂಬರುವ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಬೇಕು ಎಂದರು.ಅಧ್ಯಕ್ಷತೆ ವಹಿಸಿ ಮಾತಾಡಿದ ಹಿರೇಹಡಗಲಿ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಕಾಶ್ ಕಲ್ಲನಗೌಡ್ರು, ಗ್ರಾಮೀಣ ಕಾಲೇಜುಗಳಲ್ಲಿನ ಫಲಿತಾಂಶ ಸುಧಾರಣೆಯ ಕ್ರಮವಾಗಿ ಈ ಇಂಗ್ಲಿಷ್ ಬೂಸ್ಟರ್ ಕಾರ್ಯಾಗಾರ ಆಯೋಜಿಸಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.ಪ್ರತಿ ವರ್ಷದಂತೆ ಈ ವರ್ಷವೂ ಮೂರೂ ಕಾಲೇಜಿನಲ್ಲಿ ಈ ಕಾರ್ಯಾಗಾರವನ್ನು ಏರಿ​‍್ಡಸಲಾಗಿದೆ. ವಾರ್ಷಿಕ ಪರೀಕ್ಷೆಗೆ ತಯಾರಾಗಲು ಈ ಕಾರ್ಯಾಗಾರಗಳು ವಿದ್ಯಾರ್ಥಿಗಳಿಗೆ ಅನುಕೂಲಕರವಾಗಲಿವೆ ಎಂದರು.ಸಂಪನ್ಮೂಲ ವ್ಯಕ್ತಿಯಾಗಿ ಎಮ್ಮಿಗನೂರಿನ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕ ಕೆ. ಧರ್ಮಪ್ಪ  ಬದಲಾದ ಹೊಸ ಪರೀಕ್ಷಾ ಪದ್ಧತಿಯ ಪ್ರಕಾರ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ವಿಷಯದಲ್ಲಿ ಹೆಚ್ಚಿನ ಅಂಕ ಪಡೆಯುವ ಬಗ್ಗೆ ಮಾರ್ಗದರ್ಶನ ಮಾಡಿದರು.  ಕಾರ್ಯಾಗಾರದಲ್ಲಿ ಉಪನ್ಯಾಸಕರಾದ ಎಂ. ರೇವಣಸಿದ್ಧಪ್ಪ, ಪರಶುರಾಮ ನಾಗೋಜಿ, ಎಚ್‌. ನಾಗರಾಜ, ತಾರಾಸಿಂಗ್ ಉಪಸ್ಥಿತರಿದ್ದರು. ಹೊಳಲು, ಹಿರೇಹಡಗಲಿ ಹಾಗೂ ಮಾಗಳ ಸರಕಾರಿ ಪದವಿಪೂರ್ವ ಕಾಲೇಜುಗಳ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.