ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಿ: ಸಾಯಬಣ್ಣ ಮಡಿವಾಳರ
Ensure higher education for children: Sayabanna Madiwalara
ಬೀಳಗಿ 28: ಮಡಿವಾಳ ಸಮಾಜದ ಯುವ ಪೀಳಿಗೆಗೆ ಶಿಕ್ಷಣ ಅತ್ಯಂತ ಮುಖ್ಯವಾಗಿದ್ದು, ಮಕ್ಕಳನ್ನು ಕೇವಲ ಕುಲಕಸುಬಿಗೆ ಸೀಮಿತಗೊಳಿಸದೆ ಉನ್ನತ ಶಿಕ್ಷಣ ಕೊಡಿಸುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂದು ಉತ್ತರ ಕರ್ನಾಟಕ ಮಡಿವಾಳ ಸಮಾಜದ ಕಾರ್ಯಾಧ್ಯಕ್ಷ ಸಾಯಬಣ್ಣ ಮಡಿವಾಳರ ಹೇಳಿದರು. ಪಟ್ಟಣದ ಕಾಳಿಕಾಕಮಠೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆದ ಮಡಿವಾಳ ಸಮಾಜದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಸರ್ಕಾರದ ಸೌಲಭ್ಯಗಳು ಹಾಗೂ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ತಲುಪುವಂತೆ ಸಂಘಟನೆ ಕಾರ್ಯನಿರ್ವಹಿಸಬೇಕು.
ರಾಜ್ಯಾದ್ಯಂತ ಯುವ ಹಾಗೂ ಮಹಿಳಾ ಸಂಘಟನೆಗಳನ್ನು ಬಲಪಡಿಸಿ, ಮುಂದಿನ ದಿನಗಳಲ್ಲಿ ಜಿಲ್ಲಾ ಸಮಾವೇಶ ನಡೆಸಲಾಗುವುದು ಎಂದರು. ರಾಜ್ಯ ಮಡಿವಾಳ ಸಮಾಜದ ಯುವ ಘಟಕದ ರಾಜ್ಯಾಧ್ಯಕ್ಷ ನಿಂಬಣ್ಣ ಮಡಿವಾಳರ ಮಾತನಾಡಿ, ಮಡಿವಾಳ ಸಮಾಜವು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದ್ದು, ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸುವಂತೆ ಹಲವು ಹೋರಾಟಗಳನ್ನು ನಡೆಸಲಾಗಿದೆ. ಹಕ್ಕುಗಳಿಗಾಗಿ ಸಮಾಜದವರು ಒಗ್ಗಟ್ಟಾಗಿ ಹೋರಾಡಬೇಕು ಎಂದರು. ರಾಜ್ಯ ಉಪಾಧ್ಯಕ್ಷ ದುರ್ಗೇಶ ಮಡಿವಾಳರ ಮಾತನಾಡಿ, ಸಮಾಜದ ಅಭಿವೃದ್ಧಿ ಹಾಗೂ ಹಕ್ಕುಗಳ ಹೋರಾಟದಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದೆ.
ಪ್ರತಿಯೊಬ್ಬರೂ ಸಂಘಟನೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದರು. ತಾಲೂಕಾಧ್ಯಕ್ಷ ಹಣಮಂತ ಮಡಿವಾಳರ ಮಾತನಾಡಿ, ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಸಮಾಜದ ಪ್ರಗತಿಗಾಗಿ ಎಲ್ಲರೂ ಒಂದಾಗಬೇಕು. ಸಂಘಟನೆಯೇ ನಮ್ಮ ಶಕ್ತಿ ಎಂದರು. ಮಹಿಳಾ ಜಿಲ್ಲಾಧ್ಯಕ್ಷೆ ರಾಜೇಶ್ವರಿ ಮಡಿವಾಳರ ಮಾತನಾಡಿ, ಪ್ರತಿಯೊಬ್ಬ ಪೋಷಕರೂ ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಲು ಆದ್ಯತೆ ನೀಡಬೇಕು. ಸಮಾಜದ ಮುಖ್ಯವಾಹಿನಿಗೆ ಬರಲು ಶಿಕ್ಷಣವೇ ಶಾಶ್ವತ ಪರಿಹಾರ ಎಂದರು. ಜಿಲ್ಲಾಧ್ಯಕ್ಷ ಬಸವರಾಜ ಮಡಿವಾಳರ, ಮುಧೋಳ ತಾಲೂಕು ಮಹಿಳಾ ಅಧ್ಯಕ್ಷೆ ಮಂಜುಳಾ ಪರೀಟ ಮಾತನಾಡಿದರು.
ಸಭೆಯಲ್ಲಿ ತಾಲೂಕು ಮಹಿಳಾ ಅಧ್ಯಕ್ಷೆಯಾಗಿ ಸುಧಾ ಮಡಿವಾಳರ, ಕಾರ್ಯದರ್ಶಿಯಾಗಿ ಅನುಷಾ ಮಡಿವಾಳರ, ನಗರ ಘಟಕ ಅಧ್ಯಕ್ಷರಾಗಿ ಸಂಗಮೇಶ ಮಡಿವಾಳರ, ಕಾರ್ಯದರ್ಶಿಯಾಗಿ ಪ್ರಕಾಶ ಮಡಿವಾಳರ ಹಾಗೂ ಉಪಾಧ್ಯಕ್ಷರಾಗಿ ಸುರೇಶ ಮಡಿವಾಳರ ಅವರನ್ನು ಆಯ್ಕೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಸನ್ಮಾನ ಸಮಾರಂಭವೂ ನಡೆಯಿತು. ಈ ಸಂದರ್ಭದಲ್ಲಿ ತಾಲೂಕು ಉಪಾಧ್ಯಕ್ಷ ಈರ್ಪ ಮಡಿವಾಳರ, ಪುಂಡಲೀಕಪ್ಪ ಮಡಿವಾಳರ, ಮುಕುಂದ ಮಡಿವಾಳರ, ಮಲ್ಲಿಕಾರ್ಜುನ ಮಡಿವಾಳರ, ನಿಂಗಪ್ಪ ಮಡಿವಾಳರ, ಮಂಜುನಾಥ ಆಗಸರ, ಯಂಕಪ್ಪ, ಮುಧೋಳದ ಪ್ರಕಾಶ ಮಡಿವಾಳರ, ಜಿಲ್ಲಾ ಮಹಿಳಾ ಉಪಾಧ್ಯಕ್ಷೆ ನಿಂಗಮ್ಮ ಪರೀಟ, ಶಾರದಾ ಮಡಿವಾಳರ, ಚಂದ್ರಕಲಾ ಮಡಿವಾಳರ, ಆಶಾ ಮಡಿವಾಳರ, ರೂಪಾ ಮಡಿವಾಳರ ಸೇರಿದಂತೆ ಸಮಾಜದ ಮುಖಂಡರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಐವರು ಪೋಲಿಸರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ನಾಗರಿಕರ ಪ್ರತಿಭಟನೆ, ನೀಲಗಾರ ಗಣಪತಿ ದರ್ಶನ ರದ್ದು
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ 