ಉದ್ದಿಮೆದಾರರು ವ್ಯಾಪಾರ ಅವಕಾಶಗಳ ಕುರಿತು ಅರಿವು ಹೊಂದಿ: ನರೇಂದ್ರ ಬಾಬು.ಟಿ
Entrepreneurs should be aware of business opportunities: Narendra Babu.T
ಬಳ್ಳಾರಿ 02: ಉದ್ದಿಮೆದಾರರು ವ್ಯಾಪಾರ ಅವಕಾಶಗಳ ಕುರಿತು ಅರಿವು ಹೊಂದಬೇಕು ಎಂದು ಅಲ್ಲಂ ಕರಿಬಸಪ್ಪ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಕಾಲೇಜಿನ ಅಧ್ಯಕ್ಷ ನರೇಂದ್ರ ಬಾಬು.ಟಿ ಅವರು ಹೇಳಿದರು.
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ವತಿಯಿಂದ ಆರ್‌ಎಎಂಪಿ ಯೋಜನೆಯಡಿ ವ್ಯಾಪಾರ ಅಭಿವೃದ್ಧಿ ಸೇವಾ ಪೂರೈಕೆದಾರರು ಯೋಜನೆ ಕುರಿತು ನಗರದ ಕಂಟೋನ್‌ಮೆಂಟ್‌ನ ವೀರಶೈವ ವಿದ್ಯಾವರ್ಧಕ ಸಂಘದ ಅಲಂ ಕರಿಬಸಪ್ಪ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಕಾಲೇಜು ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಒಂದು ದಿನದ ಜಾಗೃತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ವ್ಯವಹಾರ ಯೋಜನೆ ಸಿದ್ದತೆಗೆ ಸಹಕಾರ, ತಂತ್ರಜ್ಞಾನದ ಉನ್ನತೀಕರಣ ಮತ್ತು ಗುಣಮಟ್ಟದ ಪ್ರಮಾಣೀಕರಣಕ್ಕೆ ಬೆಂಬಲ, ವಿಳಂಬಿತ ಪಾವತಿಗಳ ಸಮಸ್ಯೆಗಳ ಬಗ್ಗೆ ಹಾಗೂ ಬ್ರಾಂಡಿಂಗ್ ಮತ್ತು ರಫ್ತು ಪ್ರಚಾರದ ಕುರಿತು ಮಾತನಾಡಿದರು. ಕಾರ್ಯಾಗಾರದಲ್ಲಿ ವ್ಯಾಪಾರ ಅಭಿವೃದ್ಧಿ ಸೇವಾ ಪೂರೈಕೆದಾರರು (ಬಿ.ಡಿ.ಎಸ್.ಪಿ) ಸೌಲಭ್ಯಗಳು, ಯಶಸ್ಸಿನ ಕಥೆಗಳ ಬಗ್ಗೆ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸೋಮಶೇಖರ್.ಬಿ., ಅಲ್ಲಂ ಕರಿಬಸಪ್ಪ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ನಿರ್ದೇಶಕ ಡಾ.ಗೋಪಿ ಕೆ.ಟಿ., ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ.ಶೈಲಜಾ ಬಿ., ಎಂಸಿಎ ವಿಭಾಗದ ಎಚ್‌ಒಡಿ ಸತ್ಯನಾರಾಯಣ, ನಿರ್ವಹಣ ಅಧ್ಯಯನ ವಿಭಾಗದ ಎಚ್‌ಒಡಿ ಡಾ.ಎ ತಿಮ್ಮಣ್ಣಗೌಡ, ಪ್ರಮಾಣೀಕೃತ ರಾಷ್ಟ್ರೀಯ ತರಬೇತುದಾರರ ಮತ್ತು ಮಕ್ಕಳ ಸಲಹೆಗಾರರಾದ ಜೆಎಫ್‌ಎಂ ಮಂಜುನಾಥ್ ಬಳ್ಳುಳ್ಳಿ, ಎಂಸಿಎ ಶಿವಾನಂದ, ಸಿಡಾಕ್‌ನ ತರಬೇತಿ ಅಧಿಕಾರಿ ವಿನೋದ್ ಕುಮಾರ್ ಸೇರಿದಂತೆ ಉದ್ದಿಮೆದಾರರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 