ರಾಣಿ ಚನ್ನಮ್ಮ ವಿವಿಯಲ್ಲಿ ಪರಿಸರ ದಿನಾಚರಣೆ
Environment Day celebrated at Rani Channamma University
ರಾಣಿ ಚನ್ನಮ್ಮ ವಿವಿಯಲ್ಲಿ ಪರಿಸರ ದಿನಾಚರಣೆ
ಬೆಳಗಾವಿ 05: ವಿಶ್ವವಿದ್ಯಾಲಯ ಕೇವಲ ವಿದ್ಯಾಭ್ಯಾಸದ ಕೇಂದ್ರಗಳಲ್ಲಿ ಅಲ್ಲದೇ ಅವುಗಳು ಸಾಮಾಜಿಕ ಬದಲಾವಣೆಯ ಶಕ್ತಿ ಕೇಂದ್ರಗಳಾಗಬೇಕು. ವಿಶ್ವವಿದ್ಯಾಲಯದ ಆವರಣದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ತಪ್ಪಿಸುವುದು ಮತ್ತು ಹಸಿರು ಕಾರ್ಯ ಚಟುವಟಿಕೆಗಳ ಅನುಷ್ಠಾನಗೊಳಿಸುವುದು ಎಂದು ವಿಶ್ವವಿದ್ಯಾಲಯದ ಕುಲಸಚಿವ ಸಂತೋಷ ಕಾಮಗೌಡ ಇವರು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ಕಾರ್ಯಕ್ರಮವನ್ನು ಆಯೋಜಿಸಿದ ರಾಷ್ಟ್ರೀಯ ಸೇವಾ ಯೋಜನೆ, ಸ್ನಾತಕೋತ್ತರ ಭೂಗೋಳಶಾಸ್ತ್ರ ವಿಭಾಗ, ಉದ್ಯಾನ ವಿಭಾಗಗಳ ಸಹಕಾರವನ್ನು ಶ್ಲಾಘಿಸಿದರು. ನೀರಿನ ಸಂರಕ್ಷಣೆ ಚಟುವಟಿಕೆಗಳು ಮತ್ತು ಪ್ಲಾಸ್ಟಿಕ್ ಮುಕ್ತ ಅಭಿಯಾನದ ಮೂಲಕ ವಿದ್ಯಾರ್ಥಿಗಳಲ್ಲಿ ಪರಿಸರದ ಜವಾಬ್ದಾರಿ ಮೂಡಿಸಬೇಕು ಎಂದರು.
ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಯವರು ಪ್ರತಿ ದಿನ ಕನಿಷ್ಠ ಪರಿಸರ ಸ್ನೇಹಿ ಅಭ್ಯಾಸವನ್ನು ಅಳವಡಿಕೊಳ್ಳಬೇಕು. ವಿಶ್ವವಿದ್ಯಾಲಯದಲ್ಲಿ ಪರಿಸರಕ್ಕೆ ಸಂಬಂಧಿಸಿದಂತೆ ತೆಗೆದುಕೊಳ್ಳುವ ಹೆಜ್ಜೆ ಅರ್ಥಪೂರ್ಣವಾಗಿ ಜಾಗೃತಿಯಿಂದ ಸಾಗೋಣ ಎಂದು ಪ್ರೇರಣಾದಾಯಕ ಸಂದೇಶದೊಂದಿಗೆ ಪರಿಸರ ದಿನಾಚರಣೆಯ ಮಹತ್ವ ತಿಳಿಸಿದರು.
ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳು ಪರಿಸರಕ್ಕೆ ಸಂಬಂಧಿಸಿದಂತೆ ಸ್ಕ್ರಿಪ್ಟ್ ಮಾಡಿದರು. ವಾಣಿಜ್ಯಶಾಸ್ತ್ರ ನಿಖಾಯದ ಡೀನ ಪ್ರೊ. ಎಸ್. ಬಿ. ಆಕಾಶ್, ಕುಲಸಚಿವರ ಕಾರ್ಯಾಲಯದ ವಿಶೇಷಾಧಿಕಾರಿ ಪ್ರೊ. ಎಸ್. ಬಿ. ನಾವಿ, ಉಪಕುಲಸಚಿವ ಡಾ. ಡಿ. ಕೆ. ಕಾಂಬಳೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಡಾ. ಅಶ್ವಿನಿ ಜಾಮುನಿ, ಪ್ರಾಸ್ತಾವಿಕ ಭಾಷಣ ಮಾಡಿದರು, ಡಾ. ಬಸವರಾಜ ಬಗಾಡೆ ವಂದನಾರೆ್ಣ ಮಾಡಿದರು. ಎಲ್ಲಾ ವಿಭಾಗಗಳ ಮುಖ್ಯಸ್ಥರುಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಸಸಿಗಳನ್ನು ನೆಡುವುದರ ಮುಖಾಂತರ ಸಂರಕ್ಷಣೆಯ ಜವಾಬ್ದಾರಿ ಪ್ರತಿಜ್ಞೆ ಮಾಡಿದರು.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 