ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಈಶ್ವರಿ ರಾಜ್ಯಕ್ಕೆ ಪ್ರಥಮ ಸ್ಥಾನ
ಶಿಗ್ಗಾವಿ 18 : ತಾಲೂಕಿನ ಸರಕಾರಿ ಪ್ರೌಢಶಾಲೆ ನೀರಲಗಿ ವಿದ್ಯಾರ್ಥಿನಿ ಕುಮಾರಿ ಈಶ್ವರಿ ಅಶೋಕ ಬಡ್ನಿ ಇವಳು ಸಹಕಾರ ಇಲಾಖೆ ನಡೆಸಿದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದು ಶಾಲೆಗೆ ತಾಲೂಕಿಗೆ ಹಾಗೂ ಹಾಗೂ ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾಳೆ.ವಿದ್ಯಾರ್ಥಿಗೆ ನೀರಲಗಿ ಕಡಹಳ್ಳಿ ಗ್ರಾಮದ ಗುರುಹಿರಿಯರು, ಎಸ್ ಡಿಎಂಸಿ ಅಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಶಾಲಾ ಮುಖ್ಯೋಪಾಧ್ಯಾಯರು ಸೇರಿದಂತೆ ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.