ಕೊಪ್ಪಳ 09: ಮಕ್ಕಳಿಗೆ ಹಾಗೂ ಗಭರ್ಿಣಿ/ ಬಾಣಂತಿ ಮಹಿಳೆಯರಿಗೆ ಅನುಕೂಲವಾಗುವಂತೆ ಊರಿನೊಳಗಿರುವ ಶಾಲೆಯಲ್ಲಿಯೇ ಅಂಗನವಾಡಿ ಕೇಂದ್ರವನ್ನು ಸ್ಥಾಪಿಸಿ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದಶರ್ಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಕರ್ಾರದ ಕಾರ್ಯದಶರ್ಿ ಉಮಾ ಮಹದೇವನ್ ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಶುಕ್ರವಾರದಂದು ಆಯೋಜಿಸಲಾದ ಕೊಪ್ಪಳ ಜಿಲ್ಲಾ ಮಟ್ಟದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮಗಳಲ್ಲಿ ಸ್ಥಾಪನೆಯಾಗುವ ಅಂಗನವಾಡಿ ಕೇಂದ್ರಗಳನ್ನು ಊರಿನೊಳಗಿರುವ ಸಕರ್ಾರಿ, ಖಾಸಗಿ ಹೀಗಿ ಯಾವುದೇ ಶಾಲೆಗಳಲ್ಲಿ ಸ್ಥಳ ಅವಕಾಶ ವಿದ್ದಲ್ಲಿ, ಅಂತಹ ಶಾಲೆಗಳಲ್ಲಿಯೇ ಅಂಗನವಾಡಿ ಕೇಂದ್ರಗಳನ್ನು ಸ್ಥಾಪನೆಯಾಗಬೇಕು ಎಂದು ರಾಜ್ಯ ಸಕರ್ಾರವು ತೀಮರ್ಾನಿಸಿದ್ದು, ಸುತ್ತೋಲೆಯನ್ನು ಹೊರಡಿಸಿದೆ. ಇದಕ್ಕೆ ಕೇಂದ್ರ ಸಕರ್ಾರವು ಸಹ ಸುತ್ತೋಲೆ ಹೊರಡಿಸಲಿದೆ. ಕೆಲವು ಕಡೆ ಅಂಗನವಾಡಿ ಕೇಂದ್ರಗಳು ಗ್ರಾಮಗಳ ಹೊರಗಿದ್ದು, ಇದರಿಂದ ಮಕ್ಕಳಿಗೆ ಹಾಗೂ ಗಭರ್ಿಣಿ ಮತ್ತು ಬಾಣಂತಿ ಮಹಿಳೆಯರಿಗೆ ಸಕರ್ಾರದ ಸೌಲಭ್ಯಗಳು ಒದಗುತ್ತಿಲ್ಲ. ಆದ್ದರಿಂದ ಅಗತ್ಯವಿರುವ ಪ್ರದೇಶದಲ್ಲಿಯೇ ಅಂಗನವಾಡಿ ಕೇಂದ್ರ ಸ್ಥಾಪನೆಯಾಗಬೇಕು. ಊರೊಳಗಿರುವ ಸಕರ್ಾರಿ ಶಾಲೆ, ಖಾಸಗಿ ಶಾಲೆ ಮತ್ತು ವಸತಿ ಶಾಲೆಗಳಲ್ಲಿ ಸಾಮಾನ್ಯವಾಗಿ ಸ್ಥಳ ಅವಕಾಶವಿರುತ್ತದೆ. ಅಂತಹ ಶಾಲೆಯಲ್ಲಿ 30/40 ಅಳತೆಯ ಜಾಗೆಯಲ್ಲಿ ಅಂಗನವಾಡಿ ಕೇಂದ್ರ ಹಾಗೂ ಅದರ ಜೊತೆ ಶಾಚಾಲಯವನ್ನು ನಿಮರ್ಿಸಬೇಕು. ಈ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು. ಶಿಕ್ಷಣ ಇಲಾಖೆಯೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಹ ಸಹಕರಿಸಬೇಕು. ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಮಾಹಿತಿ ಮತ್ತು ಇನ್ನತರೇ ಸಮಸ್ಯೆಗಳನ್ನು ಗಮನಕ್ಕೆ ತನ್ನಿ. ಅಂತಹ ಸಮಸ್ಯೆಗಳನ್ನು ಸಕರ್ಾರದ ಗಮನಕ್ಕೆ ತಂದು ಮುಂದಿನ ಕ್ರಮಕೈಗೊಳ್ಳಲಾಗುವುದು ಜಿಲ್ಲಾ ಉಸ್ತುವಾರಿ ಕಾರ್ಯದಶರ್ಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಕರ್ಾರದ ಕಾರ್ಯದಶರ್ಿ ಉಮಾ ಮಹದೇವನ್ ಅವರು ಹೇಳಿದರು.
ಸಮಾಜ ಕಲ್ಯಾಣ ಇಲಾಖೆ ಉಪನಿದರ್ೇಶಕರಾದ ಬಿ. ಕಲ್ಲೇಶ ಮಾತನಾಡಿ, ಇಲಾಖೆಯಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕಂಪ್ಯೂಟರ್ಸ್ ಆಪರೇಟರ್ಸ್ ಹೀಗೆ ಹಲವು ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದು, ಅವರ ವೇತನವು ಪ್ರತಿ ತಿಂಗಳಿಗೊಮ್ಮೆ ಸಿಗುತ್ತಿಲ್ಲ ಬದಲಾಗಿ ಮೂರು/ ನಾಲ್ಕು ತಿಂಗಳಿಗೊಮ್ಮೆ ವೇತನವು ಸಿಗುತ್ತಿದ್ದು, ಅವರಿಗೆ ತುಂಬ ತೊಂದರೆ ಉಂಟಾಗುತ್ತಿದೆ. ಆದ್ದರಿಂದ ಈ ಕುರಿತು ಪರಿಶೀಲಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದಶರ್ಿಗಳಿಗೆ ಮನವಿ ಮಾಡಿದರು.
ಕೃಷಿ ಇಲಾಖೆಯಲ್ಲಿ ವಿವಿಧ ಹುದ್ದೆಗಳು ಖಾಲಿ ಇವೆ ಹಾಗೂ ರೇಷ್ಮೆ ಇಲಾಖೆಯಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳ ಹುದ್ದೆಗಳು ಖಾಲಿ ಇದ್ದು, ಕಛೇರಿ ಕೆಲಸಕ್ಕೆ ಮತ್ತು ಸಾರ್ವಜನಿಕರ ಸೇವೆಗೆ ತೊಂದರೆ ಉಂಟಾಗುತ್ತಿದೆ. ಆದ್ದರಿಂದ ಶೀಘ್ರ ಈ ಹುದ್ದೆಗಲಿಗೆ ಅಧಿಕಾರಿ/ ಸಿಬ್ಬಂದಿಗಳನ್ನು ನೇಮಕ ಮಾಬೇಕು ಎಂದು ಕೃಷಿ ಹಾಗೂ ರೇಷ್ಮೆ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಮನವಿ ಮಾಡಿದರು. ಇದಕ್ಕೆ ಪ್ರತಿ ಕ್ರೀಯಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದಶರ್ಿಗಳು ಕಂಪ್ಯೂಟರ್ಸ್ ಆಪ್ರೇಟ್ ಹುದ್ದೆಗಳನ್ನು ಏಜೆನ್ಸಿ ಮುಖಾಂತರ ಗುತ್ತಿಗೆ ಆಧಾರದ ಮೇಲೆ ಪಡೆದುಕೊಳ್ಳಬೇಕು. ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಖಾಲಿ ಇರುವ ಹುದ್ದೆಗಳ ವಿವರವನ್ನು ಸಕರ್ಾರದ ಗಮನಕ್ಕೆ ತರಲಾಗುವುದು. ಅನುದಾನ, ಅಗತ್ಯ ಹುದ್ದೆ ಹೀಗೆ ಯಾವುದೇ ಸಮಸ್ಯೆಗಳು ಇದಲ್ಲಿ ಅಧಿಕಾರಿಗಳು ಜಿ.ಪಂ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿಗಳ ಮೂಲಕ ನಮ್ಮ ಗಮನಕ್ಕೆ ತನ್ನಿ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ವೆಂಕಟರಾಜಾ, ಅಪರ ಜಿಲ್ಲಾಧಿಕಾರಿಯಾಗಿರುವ ಉಪ ವಿಭಾಗಾಧಿಕಾರಿ ಸಿ.ಡಿ ಗೀತಾ, ಜಿ.ಪಂ. ಉಪ ಕಾರ್ಯದಶರ್ಿ ಎನ್.ಕೆ ತೊರವಿ, ಯೋಜನಾ ನಿದರ್ೇಶಕ ರವಿ ಬಸರಿಹಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ವಿವಿಧ ತಾಲೂಕುಗಳ ತಹಶೀಲ್ದಾರರು ಉಪಸ್ಥಿತರಿದ್ದರು.