ಸರ್ಕಾರಿ ಶಾಲೆಗಳಲ್ಲಿಯೂ ಕೂಡ ಗುಣಮಟ್ಟದ ಶಿಕ್ಷಣ ಇದೆ: ಪಟೇಲ್
ಕೊಪ್ಪಳ 19: ಸರ್ಕಾರಿ ಶಾಲೆ ಗಳು ಖಾಸಗಿ ಶಾಲೆಗಳಿಗಿಂತ ಕಡಿಮೆ ಏನು ಇಲ್ಲ ಎಂಬಂತೆ ಪ್ರತಿಯೊಬ್ಬ ಶಿಕ್ಷಕರು ಅತ್ಯಂತ ಕಾಳಜಿ ವಹಿಸಿ ಶ್ರಮಿಸುತ್ತಿದ್ದಾರೆ ಇಲ್ಲಿಯೂ ಕೂಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿದೆ ಇದು ಒಳ್ಳೆಯ ಬೆಳವಣಿಗೆ ಎಂದು ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ಹೇಳಿದರು. ಅವರು ನಗರದ ಸರ್ಕಾರಿ ಕೇಂದ್ರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರಿ್ಡಸಿದ ವಾರ್ಷಿಕೋತ್ಸವ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದರು, ಇಂದಿನ ಮಕ್ಕಳೇ ಈ ನಾಡಿನ ಭಾವಿ ಪ್ರಜೆಗಳಾಗಿದ್ದು ಅವರಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಅಗತ್ಯವಾಗಿದೆ ಈ ದಿಶೆಯಲ್ಲಿ ಇಂದು ಶಿಕ್ಷಣ ಕೇವಲ ಖಾಸಗಿ ಶಾಲೆಗಳಲ್ಲಿ ಸಿಗುತ್ತದೆ ಎಂಬುದು ಸರಿಯಲ್ಲ ಸರಕಾರಿ ಶಾಲೆಗಳಲ್ಲಿಯೂ ಕೂಡ ಉತ್ತಮ ಗುಣಮಟ್ಟದ ಶಿಕ್ಷಣಕ್ಕೆ ಇಲ್ಲಿನ ಶಿಕ್ಷಕರು ಶ್ರಮಿಸುತ್ತಿದ್ದಾರೆ ಎಂದವರು ಸರ್ಕಾರಿ ಶಾಲೆಗಳಲ್ಲಿ ಬಡ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಾರೆ ಅವರಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿ ಅವರ ಮುಂದಿನ ಭವಿಷ್ಯ ಉಜ್ವಲ ಗೊಳಿಸಬೇಕು ಎಂದು ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ಹೇಳಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಗುಲಾಮ ಹುಸೇನ್ ವಹಿಸಿದ್ದರು, ದೈಹಿಕ ಶಿಕ್ಷಣ ಶಿಕ್ಷಕ ಎ ಬಸವರಾಜ್ ಬಿ ಆರ್ ಸಿ ಆರ್ ಪಿ ಸೇರಿದಂತೆ ಶಾಲೆ ದತ್ತು ಪಡೆದ ಕೊಪ್ಪಳ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷರಾದ ಉಮಾ ಮಹೇಶ್ ತಂಬ್ರಳ್ಳಿ ಸೇರಿದಂತೆ ಇತರ ಪದಾಧಿಕಾರಿಗಳಾದ ಮೀನಾಕ್ಷಿ ಬಣ್ಣದ ಬಾವಿ,ಮಧು ಶೆಟ್ಟರ್ ಮಧು ನಿಲೋಗಲ್ ಹಿರಿಯ ವೈದ್ಯ ಡಾ, ರಾಧಾ ಕುಲಕರ್ಣಿ, ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.