ಮನುಷ್ಯನಿಗೆ ಎಲ್ಲ ಸಂಪತ್ತು ಇದ್ದರೂ ಅದನ್ನು ಸವಿಯಬೇಕಾದರೆ ಆರೋಗ್ಯ ಉತ್ತಮ
Even if a man has all the wealth, if he has to enjoy it, health is good
ಮನುಷ್ಯನಿಗೆ ಎಲ್ಲ ಸಂಪತ್ತು ಇದ್ದರೂ ಅದನ್ನು ಸವಿಯಬೇಕಾದರೆ ಆರೋಗ್ಯ ಉತ್ತಮ
ಬ್ಯಾಡಗಿ 28: ಮನುಷ್ಯನಿಗೆ ಎಲ್ಲ ಸಂಪತ್ತು ಇದ್ದರೂ ಅದನ್ನು ಸವಿಯಬೇಕಾದರೆ ಆರೋಗ್ಯ ಉತ್ತಮವಾಗಿರಬೇಕೆಂದು ಬಿಜೆಪಿ ಯುವ ಮುಖಂಡ ಪರಶುರಾಮ ಉಜನಿಕೊಪ್ಪ ಹೇಳಿದರು.ಸೋಮವಾರ ಅವರು ಸ್ಥಳೀಯ ಕೆಎಸ್ ಆರ್ ಟಿಸಿ ಸಿಬ್ಬಂದಿಗೆ ಹುಬ್ಬಳ್ಳಿಯ ಎಂ.ಎಂ. ಜೋಶಿ ಕಣ್ಣಿನ ಆಸ್ಪತ್ರೆಯು ಉಚಿತವಾಗಿ ಏರಿ್ಡಸಿದ್ದ ಕಣ್ಣಿನ ಶಿಬಿರ ಉದ್ಘಾಟಿಸಿ ಮಾತನಾಡಿದರು.ಪ್ರಪಂಚ ನೋಡಿ ಆನಂದಿಸಬೇಕಾದರೆ ಕಣ್ಣನ್ನು ಜೋಪಾನವಾಗಿ ಇಟ್ಟುಕೊಳ್ಳಲು ಪ್ರತಿಯೊಬ್ಬರು ಮುಂದಾಗಬೇಕು. ಸೂಕ್ಷ್ಮ ಅಂಗ ಕಣ್ಣು ಬದುಕಿಗೆ ಬೆಳಕಾಗಿರಬೇಕಾದರೆ ಕಣ್ಣಿನ ಆರೋಗ್ಯ ಬಹಳ ಅವಶ್ಯಕವಾಗಿದೆ. ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾದರೆ ನಾವು ಎಲ್ಲ ರಂಗದಲ್ಲಿಯೂ ಅಭಿವೃದ್ಧಿ ಹೊಂದಲು ಸಾಧ್ಯ. ಸರ್ಕಾರಗಳ ಸೌಲಭ್ಯ ಬಡವರಿಗೆ ತಲುಪಲು ವಿದ್ಯಾವಂತರು ಕ್ರೀಯಾಶೀಲರಾಗಬೇಕು ಎಂದರು.ಡಿಪೋ ಮ್ಯಾನೇಜರ್ ಜೆ.ಬಿ.ಆಲದಕಟ್ಟಿ ಮಾತನಾಡಿಪ್ರತಿಯೊಬ್ಬ ಮನುಷ್ಯರಿಗೂ ಕಣ್ಣು ಅತಿ ಮುಖ್ಯ ಅಂಗ. ಹಾಗಾಗಿ, ಕಣ್ಣಿನ ಸಂರಕ್ಷಣೆಗೆ ಹೆಚ್ಚು ಒತ್ತು ನೀಡಬೇಕಾಗಿದೆ.40 ವರ್ಷದ ಬಳಿಕ ಪ್ರತಿಯೊಬ್ಬರಿಗೂ ಕಣ್ಣು ದೃಷ್ಟಿಯಲ್ಲಿ ದೋಷ ಸಾಮಾನ್ಯ ವಾಗಿ ಕಾಣಿಸಿಕೊಳ್ಳುತ್ತದೆ. ಅಂತಹ ಸಂದರ್ಭದಲ್ಲಿ ವೈದ್ಯರ ಬಳಿ ಸೂಕ್ತವಾದ ಚಿಕಿತ್ಸೆ ಪಡೆಯಬೇಕು.ಹಿರಿಯರಿಗೆ ಮಕ್ಕಳು ಇಂತಹ ಉಚಿತ ತಪಾಸಣೆಗೆ ಕರೆತರುವ ಮೂಲಕ ಹಿರಿಯರ ಸೇವೆಗೆ ಬದ್ದರಾಗಿರಬೇಕೆಂದರುಈ ಸಂದರ್ಭದಲ್ಲಿ ಕೆಎಸ್ ಆರ್ ಟಿಸಿ ನಿಯಂತ್ರಣಾಧಿಕಾರಿ ಈರ್ಪ ಇಟಗಿ, ಮಾಲತೇಶ ಬೆನ್ನೂರ, ಅಂಗಡಿ, ಕಣ್ಣಿನ ಆಸ್ಪತ್ರೆ ವೈದ್ಯಾಧಿಕಾರಿಗಳಾದ ಇಮ್ತಿಯಾಜ್ ಶೇಖ, ಎಚ್. ಪ್ರೇಮಾ, ಸ್ನೇಹಲ್, ನಿಖಿತಾ ಬೊಸ್ಲೇ, ಅಂಜಲಿ ಕುರಬಗೇರಿಮಠ ಸೇರಿದಂತೆ ಇತರರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 