ಕೊಪ್ಪಳ 12: ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವ ಜವಾಬ್ದಾರಿಯು ಪ್ರತಿಯೊಬ್ಬ ಭಾರತೀಯ ಪ್ರಜೆಗಳ ಮೇಲೆ ಕಾನೂನು ಬದ್ಧವಾಗಿದೆ ಎಂದು ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸಂಜೀವ ವಿ. ಕುಲಕರ್ಣಿ ಅವರು ಹೇಳಿದರು.
ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಕೊಪ್ಪಳ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ವಕೀಲರ ಸಂಘ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಮಕ್ಕಳ ಸಹಾಯವಾಣಿ-1098, ಯುನೆಸೆಫ್ ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ ಇವರ ಸಹಯೋಗದಲ್ಲಿ ಬುಧವಾರದಂದು ನಗರದ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದ ಶ್ರೇಯೋಭಿವೃದ್ಧಿಯಾಗಬೇಕಾದರೆ ಬಾಲಕಾಮರ್ಿಕ ಪದ್ಧತಿಯ ನಿರ್ಮೂಲನೆ ಅತ್ಯವಶ್ಯಕವಾಗಿದೆ. ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದ ಮೇರೆಗೆ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಜೂನ್. 12 ರಂದು ಪ್ರತಿ ವರ್ಷ ಆಚರಿಸಲಾಗುತ್ತಿದ್ದು, ಮಕ್ಕಳು ಬಾಲಕಾರ್ಮಿಕತೆಗೆ ಒಳಪಡದಂತೆ ಹಾಗೂ ಅವರನ್ನು ಶಿಕ್ಷಣದತ್ತ ಕೊಂಡೋಯ್ಯುವುದು ಮತ್ತು ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣ ನಿರ್ಮೂಲನೆ ಮಾಡುವುದೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆ ಗಾಗಿ 1986 ರಲ್ಲಿಯೇ ಕಾಯ್ದೆ ಜಾರಿಗೆ ಬಂದಿದ್ದರೂ ಸಹ ಹೋಟೆಲ್, ಗ್ಯಾರೇಜ್, ಇಟ್ಟಿಗೆ ಬಟ್ಟಿ ಹಾಗೂ ಇತರೇ ವ್ಯಾಪಾರ ಸಂಕೀರ್ಣಗಳಲ್ಲಿ ಬಾಲ ಕಾಮರ್ಿಕರು ಇಂದಿಗೂ ಕಂಡುಬರುತ್ತಿದ್ದಾರೆ.
ಇದರಿಂದ ಕಾಯ್ದೆಯು ಸಂಪೂರ್ಣ ಬಳಕೆಯಾಗುತ್ತಿಲ್ಲ ಎಂಬುವುದು ತಿಳಿಯುತ್ತದೆ. ಇದ್ದಕ್ಕೆ ಮುಖ್ಯ ಕಾರಣ ಕಾನೂನು ಅರಿವು ಹಾಗೂ ಶಿಕ್ಷಣದ ಕೊರತೆ. ದೇಶದ ಅಭಿವೃದ್ಧಿಗಾಗಿ ಶಿಕ್ಷಣ ಬಹು ಮುಖ್ಯವಾಗಿದ್ದು, ಮಕ್ಕಳು ಒಳ್ಳೆಯ ಶಿಕ್ಷಣವನ್ನು ಕಲಿತು ಉತ್ತಮ ನಾಗರಿಕರಾಗಬೇಕು ಅಂದಾಗ ಮಾತ್ರ ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಸಾಧ್ಯವಾಗಲಿದೆ. ಬಾಲಕಾಮರ್ಿಕ ಪದ್ಧತಿಯ ನಿಮರ್ೂಲನೆಗಾಗಿ ಕೇಂದ್ರ ಹಾಗೂ ರಾಜ್ಯ ಸಕರ್ಾರಗಳು ಕಾಯ್ದೆಗಳನ್ನು ಜಾರಿಗೊಳಿಸಿದ್ದು, ಬಾಲಕಾರ್ಮಿಕ ಮತ್ತು ಕಿಶೋರಾವಸ್ಥೆಯ ನಿಷೇಧ ಮತ್ತು ನಿಯಂತ್ರಣ ಕಾಯ್ದೆ-2016 ಜಾರಿಯಲ್ಲಿದೆ. 14 ವರ್ಷದೊಳಗಿನ ಯಾವುದೇ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 15 ರಿಂದ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಂಡಲ್ಲಿ 06 ತಿಂಗಳಿನಿಂದ 02 ವರ್ಷ ಜೈಲು ಹಾಗೂ 20 ರಿಂದ 50 ಸಾವಿರ ರೂ. ವರೆಗೆ ದಂಡ ವಿಧಿಸಲಾಗುವುದು. ಸಮಾಜದ ಶ್ರೇಯೋಭಿವೃದ್ಧಿಗಾಗಿ ಬಾಲಕಾರ್ಮಿಕ ಪದ್ಧತಿಯು ಮಾರಕವಾಗಿದ್ದು, ಈ ಅನಿಷ್ಠ ಪದ್ಧತಿಯನ್ನು ಬೇರಿನಿಂದ ಕಿತ್ತೋಗೆಯಬೇಕು. ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆ ಪ್ರತಿಯೊಬ್ಬ ಭಾರತೀಯ ನಾಗರೀಕರ ಆಧ್ಯ ಕರ್ತವ್ಯವಾಗಿದ್ದು, ಸಾರ್ವಜನಿಕರೆಲ್ಲರೂ ಸಹಕರಿಸಿ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸಂಜೀವ ವಿ. ಕುಲಕಣರ್ಿ ಅವರು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಅಪರ ಜಿಲ್ಲಾಧಿಕಾರಿ ಸೈಯದಾ ಅಯಿಷಾ ಅವರು ಮಾತನಾಡಿ, ಬಾಲಕಾಮರ್ಿಕ ಪದ್ಧತಿಯು ಒಂದು ಸಾಮಾಜಿಕ ಪೀಡುಗಾಗಿದ್ದು, ಈ ಅನಿಷ್ಠ ಪದ್ಧತಿಯು ದೇಶದ ಅಭಿವೃದ್ಧಿಗೆ ಮಾರಕವಾಗಿದೆ. ಬಾಲಕಾಮರ್ಿಕ ವ್ಯವಸ್ಥೆಗೆ ಒಳಪಟ್ಟ ಮಕ್ಕಳು, ಮಾನಸಿಕ ಹಾಗೂ ದೈಹಿಕವಾಗಿ ಸದೃಡವಾಗಿರುವುದಿಲ್ಲ. ಈ ಪದ್ಧತಿಗೆ ಅನೇಕ ಸಮಸ್ಯೆಗಳಿದ್ದು, ಮುಖ್ಯವಾಗಿ ಶಿಕ್ಷಣದ ಕೊರತೆಯಾಗಿದೆ. ಕಡ್ಡಾಯ ಶಿಕ್ಷಣ ಪ್ರತಿಯೊಬ್ಬ ಮಕ್ಕಳ ಮೊದಲ ಹಕ್ಕಾಗಿದ್ದು, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಎಲ್ಲಾ ಪಾಲಕರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಕಾನೂನು ಅರಿವು ಅತ್ಯವಶ್ಯಕವಾಗಿದ್ದು, ಮಕ್ಕಳ ಹಕ್ಕುಗಳ ಬಗ್ಗೆ ಮಕ್ಕಳಲ್ಲಿ ಹಾಗೂ ಅವರ ಪಾಲಕರಿಗೆ ಅರಿವು ಮೂಡಿಸಿ, ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ಎಲ್ಲರೂ ಸಹಕರಿಸಬೇಕು. ಯಾವುದೇ ಕ್ಷೇತ್ರಗಳಲ್ಲಿ ಕೆಲಸಕ್ಕಾಗಿ ಮಕ್ಕಳನ್ನು ದುಡಿಮೆಗೆ ಬಳಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು ಮಕ್ಕಳಿಗೆ ಕೆಲಸಕ್ಕೆ ಇಟ್ಟುಕೊಂಡ ಪ್ರಕರಣಗಳು ಹಾಗೂ ಯಾವುದೆ ರೀತಿಯ ದೌರ್ಜನ್ಯ ಕಂಡುಬಂದಲ್ಲಿ ಕೂಡಲೇ ಮಕ್ಕಳ ಸಹಾಯವಾಣಿ 1098 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಿ ಎಂದರು.
ಕಾರ್ಯಕ್ರಮದ ಅಂಗವಾಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶರ್ಿ ಟಿ. ಶ್ರೀನಿವಾಸ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ಕುಮಾರ ಎಸ್., ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ. ಹರೀಶ್ ಪಾಟೀಲ್, ವಕೀಲರ ಸಂಘದ ಕಾರ್ಯದರ್ಶಿ ಬಿ.ವಿ. ಸಜ್ಜನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಈರಣ್ಣ ಪಂಚಾಳ್ ಸೇರಿದಂತೆ ಮಕ್ಕಳ ಸಹಾಯವಾಣಿಯ ಅಧಿಕಾರಿಗಳು ಸಿಬ್ಬಂದಿಗಳು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ-ಯುನಿಸೆಫ್ ತರಬೇತಿ ಸಂಯೋಜಕರಾದ ಹರೀಶ ಜೋಗಿ ಅವರು "ಮಕ್ಕಳ ಹಕ್ಕು ಮತ್ತು ರಕ್ಷಣೆ" ಕುರಿತು ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಬಸವರಾಜ ಹಿರೇಗೌಡ್ರ ಅವರು "ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿಷೇದ ಮತ್ತು ನಿಯಂತ್ರಣ ಕಾಯ್ದೆ-2016" ಕುರಿತು ವಿಶೇಷ ಉಪನ್ಯಾಸ ನೀಡಿದರು. ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ತಹಶೀಲ್ದಾರ ಕಚೇರಿಯಿಂದ ನಗರದಾದ್ಯಂತ ಶಾಲಾ ವಿದ್ಯಾರ್ಥಿ ಗಳಿಂದ ಬೃಹತ್ ಜಾಗೃತಿ ಜಾಥಾ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.