ಧರಣಿ ಯಶಸ್ವಿಗೆ ಎಲ್ಲರ ಸಹಕಾರ ಅಗತ್ಯ: ನಡಹಳ್ಳಿ
Everyone's cooperation is essential for the success of the protest: Nadahalli
ತಾಳಿಕೋಟಿ 16: ಮುದ್ದೇಬಿಹಾಳ, ತಾಳಿಕೋಟಿ ಹಾಗೂ ದೇವರಹಿಪ್ಪರಗಿ ತಾಲೂಕುಗಳು ಸೇರಿದಂತೆ ಇಡೀ ವಿಜಯಪುರ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಆಗ್ರಹಿಸಿ ಸೆ.17ರಿಂದ ಮೂರು ದಿನಗಳ ಕಾಲ ಧರಣಿ ಸತ್ಯಾಗ್ರಹ ನಡೆಸಲು ಹಾಗೂ ಸೆ.21ರಂದು ತಾಳಿಕೋಟಿ ಸಂಪೂರ್ಣ ಬಂದ್ ಆಚರಿಸಲು ನಿರ್ಧರಿಸಲಾಗಿದೆ. ಈ ಹೋರಾಟದ ಯಶಸ್ಸಿಗೆ ಎಲ್ಲ ರೈತರು ಸಹಕರಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಹೇಳಿದರು. ಮಂಗಳವಾರ ಪಟ್ಟಣದ ಎಪಿಎಂಸಿ ಸಭಾಭವನದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಜಂಟಿ ನೇತೃತ್ವದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಭೀಕರ ಬರಗಾಲದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದರಲ್ಲೂ ಮುದ್ದೇಬಿಹಾಳ ಮತಕ್ಷೇತ್ರದ ಎರಡು ತಾಲೂಕುಗಳು ಹಾಗೂ ದೇವರಹಿಪ್ಪರಗಿ ತಾಲೂಕು ಬರದಿಂದ ಹೆಚ್ಚು ಬಾಧಿತವಾಗಿವೆ. ಸರ್ಕಾರ ಇದುವರೆಗೆ ಬರ ಘೋಷಣೆ ಮಾಡದಿರುವುದು ರೈತರಿಗೆ ಅನ್ಯಾಯವಾಗಿದೆ. ಸರ್ಕಾರದ ಧೋರಣೆ ಖಂಡಿಸಿ ಅನಿವಾರ್ಯವಾಗಿ ಹೋರಾಟ ನಡೆಸಬೇಕಾಗಿದೆ ಎಂದರು. ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಜಂಟಿ ನೇತೃತ್ವದಲ್ಲಿ ರೈತಪರ ಸಂಘಟನೆಗಳು ಮತ್ತು ಸಾರ್ವಜನಿಕರ ಸಹಕಾರದೊಂದಿಗೆ ಸೆ.17ರಿಂದ ತಾಳಿಕೋಟಿ ಎಪಿಎಂಸಿ ಆವರಣದಲ್ಲಿ ಧರಣಿ ಸತ್ಯಾಗ್ರಹ ಆರಂಭಿಸಲಾಗುವುದು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 