ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯ-ಡಾ, ಕಸ್ತೂರಿ ಕರಮುಡಿ

Everyone's cooperation is necessary to build a healthy society - Dr. Kasturi Karamudi

ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯ-ಡಾ, ಕಸ್ತೂರಿ ಕರಮುಡಿ

ಕೊಪ್ಪಳ   16:  ಎಲ್ಲಾ ರೋಗಗಳ ಮೂಲ ಆ ಸ್ವಚ್ಛತೆಯಾಗಿದ್ದು ಪ್ರತಿಯೊಬ್ಬರು ತಮ್ಮ ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡಲು ಜನರಲ್ಲಿ ಜಾಗೃತಿ ಮೂಡಿಸಬೇಕು, ಆರೋಗ್ಯವೇ ಭಾಗ್ಯ, ಆರೋಗ್ಯ ಪೂರ್ಣ ಸಮಾಜ ನಿರ್ಮಾಣ ಮಾಡಲು ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ ಮಹಿಳಾ ಘಟಕದ ಅಧ್ಯಕ್ಷರಾದ ಡಾ, ಕಸ್ತೂರಿ ಕರಮುಡಿ ಹೇಳಿದರು, ಅವರು ನಗರದ ಹಮಾಲರ ಕಾಲೋನಿಯಲ್ಲಿರುವ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಶುಕ್ರವಾರದಂದು ಆಯುಷ್ ಆರೋಗ್ಯ ಮಂದಿರ ಕಾಮನೂರ ಇವುಗಳ ಸಹಯೋಗದಲ್ಲಿ ಏರಿ​‍್ಡಸಿದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ವಸತಿ ನಿಲಯದ ಬಾಲಕಿಯರಿಗೆ ಮತ್ತು ಸಿಬ್ಬಂದಿಗಳಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಿ ಓಷಧಿ ವಿತರಣೆ ಮಾಡಿ ಮತ್ತು ವೈಯಕ್ತಿಕ ಶುಚಿತ್ವದ ಬಗ್ಗೆ ಬಾಲಕಿಯರಲ್ಲಿ ಮತ್ತು ಮಹಿಳೆಯರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಆರೋಗ್ಯದ ಬಗ್ಗೆ ನಿಷ್ಕಾಳಜಿ ಮಾಡುವುದು ಬೇಡ ಆರೋಗ್ಯ ಕಾಪಾಡಿಕೊಂಡು ಹೋಗಬೇಕು ಮತ್ತು ಇತರರಿಗೆ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಪ್ರತಿಯೊಬ್ಬರು ಮಾಡಬೇಕು, ಆರೋಗ್ಯಕ್ಕಿಂತ ದೊಡ್ಡ ಭಾಗ್ಯ ಬೇರೊಂದಿಲ್ಲ ಎಂದು ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ ನ ಮಹಿಳಾ ಘಟಕದ ಅಧ್ಯಕ್ಷರಾದ ಡಾ. ಕಸ್ತೂರಿ ಕರಮುಡಿ ಅಭಿಪ್ರಾಯಪಟ್ಟರು. ಸಮಾರಂಭದಲ್ಲಿ ಅಸೋಸಿಯೇಷನ್ ನ ಕಾರ್ಯದರ್ಶಿ ಡಾ, ಭಾಗ್ಯಶ್ರೀ ಗಾಯದ, ಖಜಾಂಚಿ ಡಾ. ಕವಿತಾ ಹ್ಯಾಟಿ, ಉಪಾಧ್ಯಕ್ಷರಾದ ಡಾ. ರುದ್ರಾಕ್ಷಿ ,ಸಹ ಕಾರ್ಯದರ್ಶಿ ಡಾ, ರಾಜೇಶ್ವರಿ, ಮತ್ತು ವಸತಿ ನಿಲಯದ ಮೇಲ್ವಿಚಾರಕಿ ಮಂಜುಳಾ ವಾಲಿ ಸೇರಿದಂತೆ ಅನೇಕರು ಉಪಸ್ಮಿತರಿದ್ದರು.