ಬಾಲ್ಯ ವಿವಾಹ-ದೇವದಾಸಿ ಪದ್ಧತಿ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ: ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಅಭಿಮತ
Everyone's cooperation is necessary to eradicate child marriage and the Devadasi system: Vice Chanc
ಲೋಕದರ್ಶನ ವರದಿ
ವಿಜಯಪುರ 12 : ಬಾಲ್ಯ ವಿವಾಹ ಹಾಗೂ ದೇವದಾಸಿ ಪದ್ಧತಿ ಸಮಾಜದ ಅಭಿವೃದ್ಧಿಗೆ ದೊಡ್ಡ ಅಡ್ಡಿ. ಅವುಗಳ ನಿರ್ಮೂಲನೆಗೆ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಮಹಿಳಾ ವಿವಿ ಕುಲಪತಿ ಪ್ರೊ.ವಿಜಯಾ ಬಿ. ಕೋರಿಶೆಟ್ಟಿ ಕರೆ ನೀಡಿದರು. ನಗರದ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ವಿಭಾಗ ಹಾಗೂ ಬೆಂಗಳೂರಿನ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ‘ಬಾಲ್ಯ ವಿವಾಹ ನಿಷೇಧ ಹಾಗೂ ದೇವದಾಸಿ ಪದ್ಧತಿ ನಿರ್ಮೂಲನೆ’ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರುಬಾಲ್ಯ ವಿವಾಹ ಶತಮಾನಗಳಿಂದಲೂ ನಡೆಯುತ್ತಾ ಬಂದ ಸಾಮಾಜಿಕ ಸಮಸ್ಯೆ ತಡೆಗೆ ಸರ್ಕಾರ ಹಲವು ಕಾನೂನು ಜಾರಿಗೆ ತಂದಿದೆ. ಇಂದಿಗೂ ಕೆಲವೆಡೆ ಬಾಲ್ಯ ವಿವಾಹಗಳು ನಡೆಯುತ್ತಿರುವುದು ವಿಷಾದನೀಯ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಬೆಂಗಳೂರಿನ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆಯ ನಿರ್ದೇಶಕ ಪ್ರೊ. ಸಿ.ಎಸ್. ಪಾಟೀಲ್ ಮಾತನಾಡಿ, ಮಹಿಳೆಯರನ್ನು ಗೌರವದಿಂದ ಕಾಣುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿ. ವಿದ್ಯಾರ್ಥಿನಿಯರು ಬೇರೆ ಬೇರೆ ವಿಷಯಗಳಲ್ಲಿ ಪದವಿ ಪಡೆದರೂ ಸಹ ಕಾನೂನುಗಳನ್ಮು ಅರ್ಥೈಸಿಕೊಳ್ಳುವುದು ಅಗತ್ಯ ಎಂದರು.ಕಾರ್ಯಕ್ರಮದಲ್ಲಿ ಕುಲಸಚಿವ ಶಂಕರಗೌಡ ಸೋಮನಾಳ, ಪ್ರೊ. ವೆಂಕೋಬ, ಪ್ರೊ. ಲಕ್ಷ್ಮೀದೇವಿ ವೈ., ಚಂದ್ರಕಲಾ ಹಳ್ಳಿ, ಪ್ರೊ. ರಾಜು ಬಾಗಲಕೋಟ, ಪ್ರೊ. ನಾರಾಯಣ ಪವಾರ, ಪ್ರೊ. ಚಿಂತಾಮಣಿ, ಡಾ. ಗುರುರಾಜ, ಡಾ. ಕೆ.ಆರ್. ರಂಜಿತಾ, ಡಾ. ಉಜ್ವಲಾ ಸರನಗೌಡ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ವಿದ್ಯಾರ್ಥಿನಿಯರು ಹಾಗೂ ಸಂಶೋಧನಾ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.ಕನ್ನಡ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ. ಎಂ. ನಾಗರಾಜ ಸ್ವಾಗತಿಸಿದರು. ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆಯ ಮುಖ್ಯಸ್ಥ ಡಾ. ರೇವಯ್ಯ ಒಡೆಯರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ರೂಪಾ ಇಂಗಳೆ ಕಾರ್ಯಕ್ರಮವನ್ನು ನಿರೂಪಿಸಿದರು. ಡಾ. ಚೈತನ್ಯ ಸಂಕೊಂಡ ವಂದಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 