ಹವಾಮಾನ ಬದಲಾವಣೆ ತಡೆಗೆ ಎಲ್ಲರ ಸಹಕಾರ ಅಗತ್ಯ
Everyone's cooperation is needed to prevent climate change
ಹವಾಮಾನ ಬದಲಾವಣೆ ತಡೆಗೆ ಎಲ್ಲರ ಸಹಕಾರ ಅಗತ್ಯ
ಕಾರವಾರ 30: ಜಾಗತಿಕ ಪರಿಸರದಲ್ಲಿ ಉಂಟಾಗುತ್ತಿರುವ ಹವಾಮಾನ ಬದಲಾವಣೆ ಮತ್ತು ವೈಪರೀತ್ಯಗಳ ತಡೆಗೆ ಎಲ್ಲಾ ಇಲಾಖೆಗಳ ಸಹಕಾರ ಅಗತ್ಯವಾಗಿದೆ ಎಂದು ಸಾಮಾಜಿಕ ಅರಣ್ಯ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್ ನಾವಿ ಹೇಳಿದರು.
ಅವರು ಗುರುವಾರ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ, ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ ವತಿಯಿಂದ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳಿಗೆ, ಹವಾಮಾನ ಬದಲಾವಣೆ ಕುರಿತು ಕರ್ನಾಟಕ ರಾಜ್ಯ ಕ್ರಿಯಾ ಯೋಜನೆ ಬಗ್ಗೆ ಆಯೋಜಿಸಿದ್ದ ಕಾರ್ಯಗಾರದಲ್ಲಿ ಮಾತನಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹವಾಮಾನ ಬದಲಾವಣೆ ಮತ್ತು ವೈಪರೀತ್ಯಗಳ ತಡೆಗೆ ರೂಪಿಸಿರುವ ಮಾರ್ಗಸೂಚಿಗಳನ್ನು ಎಲ್ಲಾ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ತಪ್ಪದೇ ಅನುಸರಿಸಬೇಕು. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಮುದ್ರ ಮತ್ತು ನದಿಗಳಲ್ಲಿ ಪ್ಲಾಸ್ಟಿಕ್ ಹಾವಳಿ ತಡೆಯುವ ಕುರಿತಂತೆ ಅರಣ್ಯ ಇಲಾಖೆ ವತಿಯಿಂದ ಕೋಸ್ಟಲ್ ಮೆರೈನ್ ಇಕೋ ಸಿಸ್ಟಂ ಜಾರಿಗೆ ತರಲಾಗಿದೆ. ಕೆ-ಶೋರ್ ಯೋಜನೆಯಡಿ ಕೂಡಾ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಎಂದರು.
ಸಂಪನ್ಮೂಲ ವ್ಯಕ್ತಿ ಡಾ. ಪ್ರಕಾಶ್ ಮೇಸ್ತಾ ಮಾತನಾಡಿ, ಜಗತ್ತಿನ ಯಾವುದೇ ಭಾಗದಲ್ಲಿ ಹವಾಮಾನ ವೈಪರೀತ್ಯವಾದಲ್ಲಿ ಅದರ ಪರಿಣಾಮ ವಿಶ್ವದ ಎಲ್ಲಾ ದೇಶಗಳಿಗೆ ಕಂಡುಬರುತ್ತದೆ. ಹಿಂದೂ ಮಹಾಸಾಗರದ ವ್ಯಾಪ್ತಿಯಲ್ಲಿ ಪ್ರಪಂಚದ ಅತೀ ಹೆಚ್ಚು ಜನಸಂಖ್ಯೆ ಇದ್ದು ಈ ಭಾಗದಲ್ಲಿ ಹವಾಮಾನ ವೈಪರೀತ್ಯ ತಡೆಗೆ ಭಾರತ ತೆಗೆದುಕೊಳ್ಳುವ ಕ್ರಮಗಳು ಅತ್ಯಂತ ಮಹತ್ವವಾಗಲಿವೆ. ಹವಾಮಾನದಲ್ಲಾಗುವ ಬದಲಾವಣೆಗಳನ್ನು ಅಧ್ಯಯನ ಮಾಡಲು ಉತ್ತರ ಜಿಲ್ಲೆಯು ಅತ್ಯಂತ ಪ್ರಶಸ್ತವಾಗಿದ್ದು, ಇಲ್ಲಿನ ಕರಾವಳಿ ಮತ್ತು ಪಶ್ಚಿಮಘಟ್ಟಗಳಿಂದ ನಿಖರವಾಗಿ ಮಾಹಿತಿ ಪಡೆಯಲು ಸಾಧ್ಯ ಎಂದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ್, ಸಂಶೋಧನಾ ವಿಜ್ಞಾನಿ ಡಾ. ಬಿ.ವಿ.ಶೃತಿ, ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯ ತರಬೇತಿ ಸಹಾಯಕಿ ರುಚಿತಶ್ರೀ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 