ಪ್ರತಿಯೊಬ್ಬರಿಗೂ ಪ್ರಜಾಪ್ರಭುತ್ವದಡಿ ಜೀವಿಸುವ ಹಕ್ಕಿದೆ-ಉಪ ಸಭಾಧ್ಯಕ್ಷ ರುದ್ರ್ಪ ಲಮಾಣಿ
Everyone has the right to live under democracy - Deputy Speaker Rudrapa Lamani
ಪ್ರತಿಯೊಬ್ಬರಿಗೂ ಪ್ರಜಾಪ್ರಭುತ್ವದಡಿ ಜೀವಿಸುವ ಹಕ್ಕಿದೆ-ಉಪ ಸಭಾಧ್ಯಕ್ಷ ರುದ್ರ್ಪ ಲಮಾಣಿ
ಹಾವೇರಿ15 : ದೇಶದ ಪ್ರಜೆಗಳಾದ ನಾವುಗಳು ಪ್ರಜಾಪ್ರಭುತ್ವದ ಅಡಿಯಲ್ಲಿ ಜೀವಿಸುತ್ತಿದ್ದೇವೆ, ಪ್ರತಿಯೊಬ್ಬರಿಗೂ ಇಲ್ಲಿ ಸಮಾನ ಅವಕಾಶಗಳಿವೆ ಎಂದು ಶಾಸಕರು ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷರಾದ ರುದ್ರ್ಪ ಮಾನಪ್ಪ ಲಮಾಣಿ ಹೇಳಿದರು.
ನಗರದ ಡಾ. ಬಿ ಆರ್ ಅಂಬೇಡ್ಕರ್ ಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನವು ನಮ್ಮ ಉಸಿರು ಇದ್ದಹಾಗೆ, ಸಂವಿಧಾನವನ್ನು ನಾವು ಗೌರವಿಸಬೇಕು ಸಂವಿಧಾನದಿಂದ ಪ್ರಜಾಪ್ರಭುತ್ವದಲ್ಲಿ ಹೇಗೆ ಜೀವಿಸಬೇಕು ಎಂಬುವುದನ್ನು ತಿಳಿದುಕೊಂಡಿದ್ದೇವೆ ಪ್ರಜಾಪ್ರಭುತ್ವದ ಅಡಿಯಲ್ಲಿ ಪ್ರತಿಯೊಬ್ಬರಿಗೂ ವಾಕ್ ಸ್ವಾತಂತ್ರ್ಯ, ಬದುಕುವ ಹಕ್ಕು ಜೊತೆಗೆ ಕರ್ತವ್ಯಗಳನ್ನು ಪಡೆದುಕೊಂಡಿದ್ದೇವೆ. ಇಲ್ಲಿ ಯಾರು ಹೆಚ್ಚು ಮತ್ತು ಕಡಿಮೆ ಎನ್ನುವ ಮನೋಭಾವನೇ ಇಲ್ಲ, ಎಲ್ಲರಿಗೂ ಸಮಾನ ಅವಕಾಶಗಳಿವೆ ಎಂದರು.
ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ್ ದಾನಮ್ಮನವರ ಅವರು ಮಾತನಾಡಿ, ಪ್ರಜಾಪ್ರಭುತ್ವದ ಮೌಲ್ಯಗಳಾದ ಸ್ವಾತಂತ್ರ್ಯ, ಸಮಾನತೆ, ಭಾಗವಹಿಸುವಿಕೆ, ಉತ್ತರದಾಯಿತ್ವ, ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಬಲವರ್ಧನೆ ಮಾಡಿ ಜನರಲ್ಲಿ ಅರಿವು ಮೂಡಿಸುವ ಕೆಲಸಮಾಡಬೇಕೆಂದರು.
ಪ್ರಬಲ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾರ್ಯಾಂಗ, ನ್ಯಾಯಾಂಗ ಮತ್ತು ಶಾಸಕಾಂಗಗಳು ಯಾರ ಹಸ್ತಕ್ಷೇಪ ವಿಲ್ಲದೆ ಸ್ವತಂತ್ರವಾಗಿರಬೇಕು, ಸ್ವಾತಂತ್ರ್ಯ ಹಕ್ಕುಗಳು, ಸಮಾನ ಕಾನೂನುಗಳು ಇರಬೇಕು, ವ್ಯವಸ್ಥಿತ ವಿರೋಧ ಪಕ್ಷವಿರಬೇಕು ಆಗ ಆಡಳಿತ ಪಕ್ಷವನ್ನು ಹತೋಟಿಗೆ ತರಲು ಸಹಕಾರಿಯಾಗಲಿದೆ ಎಂದರು.
ಸೈಕಲ್ ಜಾಥಾಗೆ ಚಾಲನೆ : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸೋಮವಾರ ಬೆಳ್ಳಿಗೆ 8.00 ಗಂಟೆಗೆ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ್ ದಾನಮ್ಮನವರ ಸೈಕಲ್ ಜಾಥಾ ಚಾಲನೆ ನೀಡಿದರು. ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಸಾರ್ವಜನಿಕರು ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದರು.
ಬೈಕ್ ಜಾಥಾಗೆ ಚಾಲನೆ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ “ನನ್ನ ಮತ ನನ್ನ ಹಕ್ಕು” ಎಂಬ ಧ್ಯೇಯ ವಾಕ್ಯದಡಿ ಬೈಕ್ ರ್ಯಾಲಿಗೆ ಚಾಲನೆ ನೀಡಲಾಯಿತು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಆಂಜನೇಯ ಹುಲ್ಲಾಳ ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಧಿಕಾರದ ಅಧ್ಯಕ್ಷರಾದ ಎಸ್ ಎಫ್ ಎನ್ ಗಾಜಿಗೌಡ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರುಚಿ ಬಿಂದಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ, ನಗರ ಸಭೆ ಸದಸ್ಯರಾದ ಸಂಜೀವಕುಮಾರ ನೀರಲಗಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಪ್ರಶಾಂತ ಎಂ ವರಗಪ್ಪನವರ,ಸಮುದಾಯದ ಮುಖಂಡರು, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 