ಸಂತರ ವಿಚಾರ ಸಾಧನೆಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

Everyone should adopt the ideas and achievements of saints

ಸಂತರ ವಿಚಾರ ಸಾಧನೆಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು  

ಬಳ್ಳಾರಿ 15: ಸಂತರ ವಿಚಾರ ಹಾಗೂ ಸಾಧನೆಗಳನ್ನು ಪ್ರತಿಯೊಬ್ಬ ಯುವಕರು ಅಳವಡಿಸಿಕೊಂಡು ಯುವ ಪೀಳಿಗೆಗೆ ಪರಿಚಯಸಲು ಮುಂದಾಗಬೇಕು ಎಂದು ಸಂಗನಕಲ್ಲು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ವಿ.ನಾಗಿ ರೆಡ್ಡಿ ಹೇಳಿದರು. ಸಂಗನಕಲ್ಲು ಗ್ರಾಮ ಪಂಚಾಯಿತಿಯಲ್ಲಿ ಆಯೋಜಿಸಿದ್ದ ಶಿವಯೋಗಿ ಸಿದ್ದರಾಮೇಶ್ವರ 853ನೇ ಜಯಂತಿ ಕಾರ್ಯಕ್ರಮದಲ್ಲಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಶಿವಯೋಗಿ ಸಿದ್ಧರಾಮೇಶ್ವರರು 68 ಸಾವಿರ ವಚನಗಳನ್ನು ರಚಿಸಿ ಹಾಡಿದ್ದಾರೆ.  

ಅವುಗಳ ಪೈಕಿ ಈಗ 1,679 ವಚನಗಳು ಮಾತ್ರ ಲಭಿಸಿವೆ. ಬಸವಣ್ಣ ಹಾಗೂ ಸಿದ್ದರಾಮೇಶ್ವರ ಶಿವಯೋಗಿಗಳು ಶ್ರೆಷ್ಠ ವಚನಕಾರರಾಗಿದ್ದಾರೆ. ಬಸವಣ್ಣನವರು ಸಾಮಾಜಿಕವಾಗಿ ಹೆಚ್ಚು ಒತ್ತು ಕೊಡುತ್ತಿದ್ದರು. ಸಿದ್ದರಾಮೇಶ್ವರರು ಸಮಾಜ ಸೇವೆಯಲ್ಲಿ ತೃಪ್ತಿ ಪಡೆಯುತ್ತಿದ್ದರು ಎಂದರು.ಅಧ್ಯಾತ್ಮ ಪರಂಪರೆ ಹೊಂದಿರುವ ದೇಶದಲ್ಲಿ ದಿವ್ಯಜ್ಞಾನಿಗಳನ್ನು ಮುಂದಿನ ಜನಾಂಗಕ್ಕೆ ಪರಿಚಯಿಸಲು ಅವರ ಚಿಂತನೆಗಳನ್ನು ಅನುಷ್ಠಾನಕ್ಕೆ ತರಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ರವೀಂದ್ರ, ವಿ. ಚಿನ್ನ, ರಾಮಾಂಜನೇಯ, ಅಂಜಿ, ಪರಶುರಾಮ, ಕೋಲಣ್ಣ, ವೆಂಕಟರಾಮುಡು, ಚಿತಾಂಬರಿ, ಲಕ್ಷ್ಮಣ, ಗ್ರಾಮ ಪಂಚಾಯತ್ ಸದಸ್ಯರು ಇತರರು ಭಾಗವಹಿಸಿದ್ದರು.