ಮಹರ್ಷಿ ವಾಲ್ಮೀಕಿ ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ
Everyone should implement the philosophies of Maharishi Valmiki in their lives.
ಹನುಮಸಾಗರ 14: ಮಹರ್ಷಿ ವಾಲ್ಮೀಕಿ ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ಶಾಸಕ ದೊಡ್ಡನಗೌಡ ಎಚ್. ಪಾಟೀಲ್ ಹೇಳಿದರು. ಸಮೀಪದ ತುಮರಿಕೊಪ್ಪ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ನಿಮಿತ್ತ ಶನಿವಾರ ಹಮ್ಮಿಕೊಂಡ ಭಾವಚಿತ್ರ ಹಾಗೂ ಕುಂಭ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು. ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ರಚಿಸುವ ಮೂಲಕ ಶ್ರೀರಾಮಚಂದ್ರನನ್ನು ಜಗತ್ತಿಗೆ ಪರಿಚಯಿಸಿದ್ದಾರೆ. ವಾಲ್ಮಿ?ಕಿ ರಾಮಾಯಣ ಮಹಾಕಾವ್ಯ ರಚಿಸದಿದ್ದರೆ ರಾಮ, ಲಕ್ಷ್ಮಣ, ಸೀತೆ, ಆಂಜನೇಯ, ರಾವಣ ಪಾತ್ರಗಳು ಇದ್ದವು ಎನ್ನುವುದೇ ಯಾರಿಗೂ ತಿಳಿಯುತ್ತಿರಲಿಲ್ಲ.
ರಾಮಾಯಣದಲ್ಲಿ ಬರುವ ಪಿತೃವಾಕ್ಯ ಪರಿಪಾಲನೆ, ಸಹೋದರರ ಬಾಂಧವ್ಯ ಸಂಬಂಧಗಳ ಅಂಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಆದರ್ಶ ವ್ಯಕ್ತಿಗಳಾಗಿ ಬಾಳಬೇಕು. ರಾಮಾಯಣ ಮತ್ತು ಮಹಾಭಾರತ ದೇಶದ ಎರಡು ಕಣ್ಣುಗಳಿದ್ದಂತೆ. ಮಕ್ಕಳಿಗೆ ಈ ಕಾವ್ಯಗಳನ್ನು ಓದುವಂತೆ ಪ್ರೊ?ತ್ಸಾಹಿಸಬೇಕು. ಮನುಷ್ಯನಲ್ಲಿ ಮಾನವಿ?ಯ ಮೌಲ್ಯ ಬೆಳೆಸುವ ಶಕ್ತಿ ರಾಮಾಯಣಕ್ಕೆ ಇದೆ ಎಂದರು.ಮಹರ್ಷಿ ವಾಲ್ಮೀಕಿ ದೇವಸ್ಥಾನದಿಂದ ಸಕಲ ವಾದ್ಯ ವೈಭವಗಳೊಂದಿಗೆ ಆರಂಭವಾದ ಕುಂಭ ಹಾಗೂ ಭಾವಚಿತ್ರ ಮೆರವಣಿಗೆ ಸಿಂಧೂರ ಲಕ್ಷ್ಮಣ ಸರ್ಕಲ್, ಮದಕರಿ ನಾಯಕ ಸರ್ಕಲ್, ದುರ್ಗಾದೇವಿ ದೇವಸ್ಥಾನ, ಗಾಂಧಿ ಸರ್ಕಲ್ ಮಾರ್ಗವಾಗಿ ಮಾರುತೇಶ್ವರ ದೇವಸ್ಥಾನ ತಲುಪಿ, ಮರಳಿ ವಾಲ್ಮೀಕಿ ದೇವಸ್ಥಾನ ತಲುಪಿತು. ಮೆರವಣಿಗೆಯಲ್ಲಿ ಗ್ರಾಮದ ಮುಖಂಡರು, ಯುವಕರು, ಮಹಿಳೆಯರು ಮತ್ತು ಮಕ್ಕಳು ಪಾಲ್ಗೊಂಡಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 