ಬ್ಯಾಲ ವಿವಾಹ ತಡೆಗೆ ಪ್ರತಿಯೊಬ್ಬರು ಕೈಜೋಡಿಸಿ : ತಿಪ್ಪೇಶಪ್ಪ
Everyone should join hands to prevent Beala marriage: Thippeshappa
ಕಂಪ್ಲಿ 29: ಬಾಲ್ಯ ವಿವಾಹ ತಡೆಗಟ್ಟಲು ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ಬಳ್ಳಾರಿ ರೀಡ್ಸ್ ಸಂಸ್ಥೆಯ ನಿರ್ದೇಶಕ ತಿಪ್ಪೇಶಪ್ಪ ತಿಳಿಸಿದರು.ಪಟ್ಟಣದ ಅಥಿತಿ ಗೃಹದಲ್ಲಿ ಭಾನುವಾರ ಮಕ್ಕಳ ರಕ್ಷಣೆಗೆ ಕಾನೂನುಗಳ ಎಂಬ ಪುಸ್ತಕಗಳನ್ನು ಬಿಡುಗಡೆಗೊಳಿಸಿ ಮಾತನಾಡಿ, ಅನಕ್ಷರತೆ, ಬಡತನ ಬಾಲ್ಯ ವಿವಾಹಕ್ಕೆ ಮುಖ್ಯ ಕಾರಣವಾಗಿದೆ. ಇಂತಹ ಬಾಲ್ಯ ವಿವಾಹ ಪಿಡುಗನ್ನು ತೊಲಗಿಸಲು ಕಠಿಬದ್ಧವಾಗಿ ನಿಲ್ಲುವುದು ನಮ್ಮ ನಿಮ್ಮೆಲ್ಲರ ಜವಾಬ್ದಾರಿಯಾಗಿದೆ. ಇತ್ತೀಚಿನ ದಿನಮಾನದಲ್ಲಿ ಬಾಲ ಗರ್ಭೀಣಿಯರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದು ವಿಷಾಧನೀಯವಾಗಿದೆ.
ಕಂಪ್ಲಿ ತಾಲೂಕಿನಲ್ಲಿ ಕಳೆದ ಒಂದೆರಡು ತಿಂಗಳಲ್ಲಿ ಮೂರು ಬಾಲ್ಯ ವಿವಾಹ ಪ್ರಕರಣಗಳು ದಾಖಲಾದರೆ, ಮೂರು ಬಾಲ್ಯ ವಿವಾಹ ತಡೆಗಟ್ಟಲಾಗಿದೆ. ಆದ್ದರಿಂದ ಇನ್ನಷ್ಟು ಜಾಗೃತಿ ಅವಶ್ಯಕತೆ ಇದೆ. ಆದ್ದರಿಂದ ಮಕ್ಕಳ ರಕ್ಷಣೆಗೆ ಕಾನೂನುಗಳ ಎಂಬ ಪುಸ್ತಕವನ್ನು ಮುದ್ರಿಸಿ, ಎಲ್ಲಾ ಸರ್ಕಾರಿ ಶಾಲೆಗಳಿಗೆ ತಲುಪಿಸಿ, ಮಕ್ಕಳ ಹಕ್ಕುಗಳ ರಕ್ಷಣೆ, ಬಾಲ್ಯವಿವಾಹ ತಡೆ, ಬಾಲ ಕಾರ್ಮಿಕ ತಡೆ, ಹೀಗೆ ಪುಸ್ತಕ ಪರಿಚಯಿಸಿ, ಮಕ್ಕಳಲ್ಲಿ ಜ್ಞಾನ ಮತ್ತು ಆತ್ಮ ವಿಶ್ವಾಸ ತುಂಬುವ ಕೆಲಸ ಮಾಡುತ್ತಿದ್ದೇವೆ. ಆದ್ದರಿಂದ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು. ಮಕ್ಕಳ ಹಕ್ಕುಗಳ ನಿಗಾ ಕೇಂದ್ರದ ಸದಸ್ಯ ಹೆಚ್.ಸಿ.ರಾಘವೇಂದ್ರ ಮಾತನಾಡಿದರು. ಈ ಸಂದರ್ಭದಲ್ಲಿ ರೀಡ್ಸ್ ಸಂಸ್ಥೆಯ ಸಂಯೋಜಕರಾದ ಕೆ.ಎಂ.ತಿಪ್ಪೇಸ್ವಾಮಿ, ಕರಿಸ್ವಾಮಿ, ಟಿಜಿ ಶ್ರೀಧರ್ ಇದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 