ಪ್ರತಿಯೊಬ್ಬರು ಒಂದು ಗಿಡ ನೆಟ್ಟು ಪೋಷಿಸಿ : ಕರ್ನಲ್ ವಂಶಿ
Everyone should plant and nurture a sapling: Colonel Vamshi
ವಿಜಯಪುರ 26 : ಎನ್‌ಸಿಸಿ ಕೆಡೆಟ್ ಸೇರಿದಂತೆ ಪ್ರತಿಯೊಬ್ಬರು ಸೂಕ್ತ ಸ್ಥಳದಲ್ಲಿ ಕನಿಷ್ಠ ಒಂದು ಗಿಡ ನೆಟ್ಟು, ಅದನ್ನು ಪೋಷಿಸುವ ಮೂಲಕ ಪರಿಸರ ಸಂರಕ್ಷಣೆಗೆ ಕೊಡುಗೆ ನೀಡಬೇಕು ಎಂದು 36 ಕರ್ನಾಟಕ ಬೆಟಾಲಿಯನ್ ಎನ್‌ಸಿಸಿ ಕಮಾಂಡಿಂಗ್ ಆಫೀಸರ್ ಕರ್ನಲ್ ಬಿ.ಕೆ.ಕೆ. ವಂಶಿ ಕರೆ ನೀಡಿದರು.ನಗರದ ಎ.ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ಆವರಣದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ. ಕಲಾ ಮತ್ತು ಕೆ.ಸಿ.ಪಿ. ವಿಜ್ಞಾನ ಮಹಾವಿದ್ಯಾಲಯ ಹಾಗೂ ಎ.ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ಎನ್‌ಸಿಸಿ ಘಟಕ, 36 ಕರ್ನಾಟಕ ಬೆಟಾಲಿಯನ್ ಎನ್‌ಸಿಸಿ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಏಕ್ ಪೇಡ್ ಮಾ ಕೆ ನಾಮ್ ಹಾಗೂ ಒನ್ ಕೆಡೆಟ್ ಒನ್ ಟ್ರೀ ಸಸಿ ನೆಡುವ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.
ಒನ್ ಕೆಡೆಟ್ ಒನ್ ಟ್ರೀ’ ಅಭಿಯಾನವು ಪರಿಸರ ಜಾಗೃತಿ ಮೂಡಿಸುವುದರ ಜೊತೆಗೆ ಗಿಡ ನೆಟ್ಟು ಪೋಷಿಸುವ ಜವಾಬ್ದಾರಿಯನ್ನು ಕೆಡೆಟ್‌ಗಳಲ್ಲಿ ಬೆಳೆಸುವ ಉದ್ದೇಶ ಹೊಂದಿದೆ.ಎನ್‌ಸಿಸಿ ಮೂಲಕ ಶಿಸ್ತು, ನಾಯಕತ್ವ, ಸಾಮಾಜಿಕ ಹೊಣೆಗಾರಿಕೆ ಹಾಗೂ ಪರಿಸರ ಜಾಗೃತಿಯನ್ನು ಬೆಳೆಸಲಾಗುತ್ತಿದ್ದು, ವಿವಿಧ ತರಬೇತಿ, ಸಮುದಾಯ ಸೇವೆ ಮತ್ತು ಸಾಮಾಜಿಕ ಜಾಗೃತಿ ಚಟುವಟಿಕೆಗಳಲ್ಲೂ ಕೆಡೆಟ್‌ಗಳು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕರ್ನಲ್ ವಂಶಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಎ.ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಸ್.ಬಿ. ಕಮಾಟಿ, ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ. ಕಲಾ ಮತ್ತು ಕೆ.ಸಿ.ಪಿ. ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎ.ಟಿ. ಶ್ರೀನಿವಾಸ್, 36 ಕರ್ನಾಟಕ ಬೆಟಾಲಿಯನ್ ಎನ್‌ಸಿಸಿ ಆಡಳಿತಾಧಿಕಾರಿ ಲೆಫ್ಟಿನೆಂಟ್ ಕರ್ನಲ್ ಅಜಯ್ ಸಿಂಗ್, ಅಸೋಸಿಯೇಟ್ ಎನ್‌ಸಿಸಿ ಅಧಿಕಾರಿ ಲೆಫ್ಟಿನೆಂಟ್ ಡಾ. ರಾಮಚಂದ್ರ ನಾಯಕ್ ಎಂ. ಸೇರಿದಂತೆ ಎನ್‌ಸಿಸಿ ಅಧಿಕಾರಿಗಳು, ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ ಕೆಡೆಟ್‌ಗಳು ಉಪಸ್ಥಿತರಿದ್ದರು.ಇದೇ ವೇಳೆ ಕರ್ನಲ್ ವಂಶಿ ಹಾಗೂ ಲೆಫ್ಟಿನೆಂಟ್ ಕರ್ನಲ್ ಅಜಯ್ ಸಿಂಗ್ ಅವರನ್ನು ಸನ್ಮಾನಿಸಲಾಯಿತು.
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ 