ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರೂ ಪಣತೊಡಬೇಕು: ಸಂಸದ ಜಿಗಜಿಣಗಿ
Everyone should strive for the unity and integrity of the country: MP Jigajinagi
ವಿಜಯಪುರ 14: ರಾಷ್ಟ್ರೀಯ ಏಕತಾ ದಿನವು ಭಾರತದ ಶಕ್ತಿ ವೈವಿಧ್ಯತೆಯಲ್ಲಿ ಏಕತೆಯಲ್ಲಿದೆ ಎಂದು ನಮಗೆ ನೆನಪಿಸುತ್ತದೆ. ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರೂ ಪಣತೊಡಬೇಕಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ಕರೆ ನೀಡಿದರು.
ಯುವ ಕಾರ್ಯ ಮತ್ತು ಕ್ರೀಡಾ ಮಂತ್ರಾಲಯ ಮೈ ಭಾರತ ಇಲಾಖೆ, ಎನ್.ಎಸ್.ಎಸ್. ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಶಿವಾಜಿ ಸರ್ಕಲ್ ದಿಂದ ಪ್ರಾರಂಭಗೊಂಡ ಸರದಾರ ವಲ್ಲಭಾಯಿ ಪಟೇಲ ಅವರ 150ನೇ ಜನ್ಮ ದಿನಾಚರಣೆ ಅಂಗವಾಗಿ ಜರುಗಿದ ರಾಷ್ಟ್ರೀಯ ಏಕತಾ ನಡೆಗೆ ಚಾಲನೆ ನೀಡಿ ಮಾತನಾಡುತ್ತಾ, ಭಾರತುಕ್ಕಿನ ಮನುಷ್ಯ ಸರ್ದಾರ ವಲ್ಲಭಬಾಯಿ ಪಟೇಲ ಅವರನ್ನು ಗೌರವಿಸಲು ರಾಷ್ಟ್ರೀಯ ಏಕತಾ ದಿವನ್ನು ಆಚರಿಸಲಾಗುತ್ತಿದೆ. ಭಾರತ ಐಕತೆ ಮತ್ತು ಸಮಗ್ರತೆಯನ್ನು ಪುನರುಚ್ಚಿಸಲು ಭಾರತ ಸರಕಾರ 2014 ರಿಂದ ಆಚರಣೆ ಮಾಡುತ್ತಾ ಬಂದಿದೆ. ಪಟೇಲರ ಸಾಧನೆಗಳು ನಮ್ಮೆಲ್ಲರಿಗೂ ಸ್ಪೂರ್ತಿಯಾಗಿವೆ. ಐಕ್ಯತೆ, ಸಮಗ್ರತೆ, ಆಂತರಿಕ ಭದ್ರತೆ ನಿಟ್ಟಿನಲ್ಲಿ ಒಗ್ಗೂಡಿಸಿ ಕಾರ್ಯ ನಿರ್ವಹಿಸಲು ಈ ಏಕತಾ ದಿನ ಆಚರಣೆ ಪ್ರೇರಣೆಯಾಗಿದೆ ಎಂದರು.
ಜಿಲ್ಲಾಧಿಕಾರಿ ಆನಂದ ಕೆ ಮಾತನಾಡಿ, ಭಾರತದ ಉಕ್ಕಿನ ಮನುಷ್ಯ ಸರ್ದಾರ ವಲ್ಲಭಬಾಯಿ ಪಟೇಲ ಅವರು ವೈವಿಧ್ಯಮಯ ರಾಜ್ಯ ಪ್ರಭುತ್ವಗಳನ್ನು ಒಗ್ಗೂಡಿಸಿ ಆಧುನಿಕ ಭಾರತೀಯ ರಾಷ್ಟ್ರವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಭಾರತದ ನಾಗರೀಕರಲ್ಲಿ ರಾಷ್ಟ್ರೀಯ ಏಕತೆ ದೇಶಭಕ್ತಿ ಮತ್ತು ಸಾಮರಸ್ಯ ಆದರ್ಶಗಳನ್ನು ಪಾಲಿಸಲು ಪ್ರತಿಯೊಬ್ಬ ಭಾರತೀಯ ಪ್ರಜೆಯ ಕರ್ತವ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮಹಾಪೌರರಾದ ಎಂ.ಎಸ್. ಕರಡಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಜಾವಿದ ಜಮಾದಾರ, ಜಿಲ್ಲಾ ಅಧ್ಯಕ್ಷ ಗುರುಲಿಂಗಪ್ಪಾ ಅಂಗಡಿ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಭೀಮಾಂಶಕರ ಹದನೂರ, ಚಂದ್ರಶೇಖರ ಕವಟಗಿ, ಇರಣ್ಣಾ ರಾವೂರ, ಮಲ್ಲು ಕಲಾದಗಿ, ಶ್ರೀಧರ ಬಿಜ್ಜರಗಿ, ಸುರೇಶ ಬಿಜಾಪುರ, ಉಮೇಶ ಕೂಳಕೂರ, ವಿಜಯ ಜೋಶಿ, ಮಹಾನಗರ ಪಾಲಿಕೆ ಸದಸ್ಯರಾದ ಮಳುಗೌಡ ಬಿರಾದಾರ, ಎನ್.ಎಸ್.ಎಸ್.ಅಧಿಕಾರಿ ಗಂಗಾಧರ ಅಗಸರ, ಸೇವಾದಳದ ನಾಗೇಶ ಡೋಣೂರ, ಜಿಲ್ಲಾ ಯುವ ಅಧಿಕಾರಿ ಗೌತಮ ರೆಡ್ಡಿ ಉಪಸ್ಥಿತರಿದ್ದರು. ಅಪಾರ ಸಂಖ್ಯೆಯ ವಿದ್ಯಾರ್ಥಿಗಳು ರಾಷ್ಟ್ರೀಯ ಧ್ವಜದೊಂದಿಗೆ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮಕ್ಕೂ ಮುನ್ನ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 