ಅತಿಯಾದ ಮೊಬೈಲ್ ಬಳಕೆ ಮಾನಸಿಕ ಅಸ್ಥಿರತೆಗೆ ಕಾರಣ: ಶಂಕರಗೌಡ ಸೋಮನಾಳ
Excessive mobile phone use causes mental instability: Shankaragowda Somanala
ವಿಜಯಪುರ 16: ವಿದ್ಯಾರ್ಥಿನಿಯರಲ್ಲಿ ಹೆಚ್ಚುತ್ತಿರುವ ಮೊಬೈಲ್ ಬಳಕೆ ಮಾನಸಿಕ ಸ್ಥಿರತೆಯನ್ನು ಹಾಳು ಮಾಡುತ್ತಿದೆ ಎಂದು ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿ ಕ್ಷೇಮ ಪಾಲನ ನಿರ್ದೇಶನಾಲಯ ಮತ್ತು ಸಮಾಜಶಾಸ್ತ್ರ ವಿಭಾಗದ ಸಹಯೋಗದಲ್ಲಿ ಇತ್ತೀಚಿಗೆ ಹಮ್ಮಿಕೊಂಡಿದ್ದ ಮಾನಸಿಕ ಆರೋಗ್ಯ ಕುರಿತ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ದಿನಗಳಲ್ಲಿ ವಿದ್ಯಾರ್ಥಿನಿಯರು ಮೊಬೈಲ್‌ಗೆ ಅತಿಯಾಗಿ ಅವಲಂಬಿತರಾಗುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಅಷ್ಟೇ ಅಲ್ಲದೇ ಮೊಬೈಲ್ ಅಡಿಕ್ಷನ್‌ನಿಂದಾಗಿ ಏಕಾಗ್ರತೆ ಕುಂದಿ ಮಾನಸಿಕ ಅಸ್ಥಿರತೆ ಎದುರಾಗುತ್ತಿದೆ. ಮೊಬೈಲ್ ಬಳಕೆಯನ್ನು ಅಗತ್ಯಕ್ಕೆ ಮಾತ್ರ ಸೀಮಿತಗೊಳಿಸಿ, ಶಿಕ್ಷಣ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಹೆಚ್ಚು ಗಮನ ಹರಿಸಬೇಕು ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಮನೋವೈದ್ಯ ಡಾ. ಮಂಜುನಾಥ ಮಸಳಿ ಮಾತನಾಡಿ, ಮಾನಸಿಕ ಆರೋಗ್ಯದ ಮಹತ್ವ ಕುರಿತು ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಆಹಾರ ತಜ್ಞೆ ಗಿರಿಜಾ ಜಂಡರ್ ಮಾತನಾಡಿ, ಆಹಾರ ಹಾಗೂ ಪೌಷ್ಟಿಕತೆಯ ಅಗತ್ಯತೆ ಕುರಿತು ಹೇಳಿದರು.
ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಪ್ರಾಧ್ಯಾಪಕರು, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಮತ್ತಿತರಿದ್ದರು. ವಿದ್ಯಾರ್ಥಿನಿ ಕ್ಷೇಮ ಪಾಲನ ನಿರ್ದೇಶನಾಲಯದ ನಿರ್ದೇಶಕಿ ಪ್ರೊ. ಜ್ಯೋತಿ ಉಪಾಧ್ಯಾಯ ಸ್ವಾಗತಿಸಿದರು. ಆಪ್ತ ಸಮಾಲೋಚಕಿ ಡಾ. ಸುರೇಖಾ ರಾಠೋಡ ನಿರೂಪಿಸಿದರು. ಸಮಾಜಶಾಸ್ತ್ರ ಅಧ್ಯಯನ ವಿಭಾಗದ ಡಾ. ರಶ್ಮಿ ವಂಶಕೃತಮಠ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 