ಇನಾಂ ವೀರಾಪುರ ಗ್ರಾಮಕ್ಕೆ ಅಬಕಾರಿ ಸಚಿವರಾದ ಆರ್.ಬಿ.ತಿಮ್ಮಾಪುರ ಭೇಟಿ
Excise Minister R.B. Thimmapura visits Inam Veerapur village
ಹುಬ್ಬಳ್ಳಿ ಡಿ.30: ಇಂದು ಇನಾಂ ವೀರಾಪುರ ಗ್ರಾಮಕ್ಕೆ ಅಬಕಾರಿ ಸಚಿವರಾದ ಆರ್.ಬಿ.ತಿಮ್ಮಾಪುರ ಅವರು ಭೇಟಿ ನೀಡಿ, ವಿವೇಕಾನಂದ ದೊಡ್ಡಮನಿ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು. ವಿವೇಕಾಂದ ದೊಡ್ಡಮನಿ ಅವರ ಮನೆಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಸಚಿವರು, ಮಾನ್ಯಾ ಪಾಟೀಲಳ ಕೊಲೆ ಹಾಗೂ ಕುಟುಂಬ ಸದಸ್ಯರ ಮೇಲೆ ಹಲ್ಲೆ ಆಗಿರುವ ಬಗ್ಗೆ ಮಾಹಿತಿ ಪಡೆದುಕೊಂಡು, ಘಟನೆಯ ಸ್ಥಳ ಪರೀಶೀಲನೆ ಮಾಡಿದರು.
ನಂತರ ಕುಟುಂಬ ಸದಸ್ಯರೊಂದಿಗೆ ಸಚಿವ ಆರ್.ಬಿ.ತಿಮ್ಮಾಪೂರ ಅವರು ಮಾತನಾಡಿ, ಇದೊಂದು ದುರ್ಘಟನೆ ಆಗಬಾರದಿತ್ತು. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ. ದೊಡ್ಡಮನಿ ಕುಟುಂಬಸ್ಥರು ಹೆದರಬಾರದು. ಸರಕಾರ, ಜಿಲ್ಲಾಡಳಿತ ನಿಮ್ಮೊಂದಿಗಿದೆ ಎಂದು ಧೈರ್ಯ ತುಂಬಿದರು. ದೌರ್ಜನ್ಯ ಪೀಡಿತ ಕುಟುಂಬಕ್ಕೆ ಈಗಾಗಲೇ ಜಿಲ್ಲಾಡಳಿತದಿಂದ ಪರಿಹಾರ ನೀಡಲಾಗಿದೆ. ಕುಟುಂಬಕ್ಕೆ ರಕ್ಷಣೆ ಹಾಗೂ ಅಗತ್ಯ ಸೌಲಭ್ಯ ನೀಡುವ ಕುರಿತು ಜಿಲ್ಲಾಡಳಿತ ಮತ್ತು ಪೊಲೀಸ ಇಲಾಖೆಗೆ ಸೂಚನೆ ನೀಡಲಾಗಿದೆ. ಗ್ರಾಮದಲ್ಲಿ ಶಾಂತಿ, ಸೌರ್ಹಾದ ಕಾಪಾಡಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಈಗಾಗಲೇ ಶಾಂತಿ ಸಭೆ ಜರುಗಿಸಲಾಗಿದೆ. ಗ್ರಾಮಸ್ಥರು ಸಹಕಾರದ ಭರವಸೆ ನೀಡಿದ್ದಾರೆ. ದೊಡ್ಡಮನಿ ಕುಟುಂಬದವರಿಗೆ ಯಾವುದೇ ಭಯ ಬೇಡ ಎಂದು ಸಚಿವರು ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆಯಿಂದ ಎಲ್ಲರ ಚಿಕಿತ್ಸಾ ವೆಚ್ಚ ಭರಿಸಲಾಗುತ್ತದೆ. ಆಸ್ಪತ್ರೆ ಖರ್ಚಿನ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಎಲ್ಲರೂ ಆರೋಗ್ಯವಂತರಾಗಿ ಸಹಜ ಜೀವನಕ್ಕೆ ಬರಬೇಕು ಎಂದು ಕುಟುಂಬ ಸದಸ್ಯರಿಗೆ ಸಚಿವರು ಹೇಳಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಲಿತ ಕುಟುಂಬದ ಮೇಲೆ ದೌರ್ಜನ್ಯ ಹಾಗೂ ಹತ್ಯೆ ಮಾಡಿದವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ರಾಜ್ಯ ಸರ್ಕಾರ ಇಂತಹ ಘಟನೆಗಳ ಬಗ್ಗೆ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತದೆ. ಮಾನಸಿಕವಾಗಿ ಜಾತಿ ವ್ಯವಸ್ಥೆ ಬದಲಾಗಬೇಕಿದೆ. ಆ ದಿಶೆಯಲ್ಲಿ ಎಲ್ಲರ ಮೇಲೆ ಜವಾಬ್ದಾರಿಯಿದೆ. ಮನುಷ್ಯರನ್ನು ಮನುಷ್ಯ ರೀತಿಯಲ್ಲಿ ಕಾಣುವ ಬದುಕನ್ನು ನಾವು ಕಟ್ಟಿಕೊಳ್ಳಬೇಕು. ಜಾತಿ ವ್ಯವಸ್ಥೆಯಲ್ಲಿ ಕೆಟ್ಟ ಭಾವನೆಗಳನ್ನು ಸರಿಪಡಿಸುವ ಕೆಲಸಗಳು ಆಗಬೇಕಿವೆ. ಬರೀ ಕಾನೂನಿನಿಂದ ಎಲ್ಲವನ್ನೂ ಸರಿಪಡಿಸಲು ಸಾಧ್ಯವಾಗುವುದಿಲ್ಲ. ಎಲ್ಲರೂ ತಮ್ಮ ಜವಾಬ್ದಾರಿ ಅರಿತುಕೊಳ್ಳಬೇಕು. ಜಾತಿ ವ್ಯವಸ್ಥೆ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯಗಳಾಗಬೇಕು ಎಂದರು.
ವಿವೇಕಾನಂದ ಆಸ್ಪತ್ರೆಗೆ ಅಬಕಾರಿ ಸಚಿವರ ಭೇಟಿ ಬಳಿಕ ಹುಬ್ಬಳ್ಳಿಯ ವಿವೇಕಾನಂದ ಆಸ್ಪತ್ರೆಗೆ ಅಬಕಾರಿ ಸಚಿವರಾದ ಆರ್.ಬಿ.ತಿಮ್ಮಾಪುರ ಅವರು ಭೇಟಿ ನೀಡಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿವೇಕಾನಂದ ದೊಡ್ಡಮನಿ ಅವರ ತಾಯಿ ರೇಣವ್ವ ದೊಡ್ಡಮನಿ ಅವರ ಆರೋಗ್ಯ ಹಾಗೂ ಚಿಕಿತ್ಸೆ ಕುರಿತು ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಉತ್ತಮ ಚಿಕಿತ್ಸೆ, ಓಷಧಿ ನೀಡುವಂತೆ ವೈದ್ಯರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ. ಆರ್.ಜೆ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ ಆರ್ಯ, ಡಿಸಿಆರ್ ಇ ವಿಜಯಪುರ ಡಿವೈಎಸ್‌ಪಿ ಹಾಗೂ ಇನಾಂ ವೀರಾಪೂರ ಪ್ರಕರಣದ ತನಿಖಾ ಅಧಿಕಾರಿ ಸಂದೀಪ್ ಸಿಂಗ್ ಮುರಗೋಡ, ಸಹಾಯಕ ಪೊಲೀಸ ಆಯುಕ್ತ ಶಿವಪ್ರಕಾಶ ನಾಯ್ಕ, ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರುಪೀಠದ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ.ಶುಭ, ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ಇನಸ್ಪೆಕ್ಟರ್ ಮುರಗೇಶ ಚನ್ನಣ್ಣವರ, ಸಹಾಯಕ ನಿರ್ದೇಶಕಿ ಪ್ರಿಯದರ್ಶಿನಿ ಹಿರೇಮಠ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಕುಟುಂಬಸ್ಥರು, ಇತರರು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 