ಕ್ರೀಡಾ ತರಬೇತಿಗೆ ಬರುವ ವಿದ್ಯಾರ್ಥಿಗಳನ್ನು ಕೆಲಸಕ್ಕೆ ಬಳಕೆ: ಎಸ್‌ಎಫ್‌ಐ ಖಂಡನೆ

Exploitation of sports training students: SFI condemns

ಕ್ರೀಡಾ ತರಬೇತಿಗೆ ಬರುವ ವಿದ್ಯಾರ್ಥಿಗಳನ್ನು ಕೆಲಸಕ್ಕೆ ಬಳಕೆ: ಎಸ್‌ಎಫ್‌ಐ ಖಂಡನೆ

ಹಾವೇರಿ 05: ನಗರದ ಜಿಲ್ಲಾ ಕ್ರೀಡಾಂಗದಲ್ಲಿರುವ ಈಜುಕೊಳ ಹಾಗೂ ಒಳಾಂಗಣದ ಮುಖ್ಯಧ್ವಾರದಲ್ಲಿ ಕ್ರೀಡಾ ವಸತಿ ನಿಲಯ ವಿದ್ಯಾರ್ಥಿಗಳಿಂದ ಕಾಮಗಾರಿ ಕೆಲಸಕ್ಕೆ ಬಳಕೆ ಮಾಡಿದನ್ನು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ)ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಬಸವರಾಜಎಸ್ ತಿಳಿಸಿದ್ದಾರೆ.  

     ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ವಿದ್ಯಾಭ್ಯಾಸದ ಜೊತೆಗೆ ಕ್ರೀಡಾಸಕ್ತಿ ಹೊಂದಿದ ವಿದ್ಯಾರ್ಥಿಗಳು ಬೇರೆ ಬೇರೆ ಜಿಲ್ಲೆಗಳಿಂದ ಬಂದು ಹಾವೇರಿ ಜಿಲ್ಲಾ ಕ್ರೀಡಾಂಗಣದಲ್ಲಿರುವ ಯುವಜನ ಮತ್ತು ಕ್ರೀಡಾ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಕ್ರೀಡಾ ವಸತಿ ನಿಲಯದಲ್ಲಿ ವಿದ್ಯಾಭ್ಯಾಸದೊಂದಿಗೆ ಕ್ರೀಡಾ ತರಬೇತಿ ಪಡೆದುಕೊಳ್ಳುತ್ತಿದ್ದಾರೆ ಇಂತಹ ವಿದ್ಯಾರ್ಥಿಗಳನ್ನು ಅಧಿಕಾರಿಗಳು ಮುಖ್ಯಧ್ವಾರದ ಗೇಟಿನ ಬಳಿ ದಿನಾಂಕ:2025 ಗುರುವಾರ ಸಂಜೆ ಕಾಮಗಾರಿ ಕೆಲಸಕ್ಕೆ ಬಳಕೆ ಮಾಡಿದ್ದು ನಾಚಿಕೆಗೇಡಿನ ಸಂಗತಿಯಾಗಿದೆ. ಮಕ್ಕಳ ಕೈಯಲ್ಲಿ ಪೆನ್ನು ನೀಡಬೇಕಾದ ಅಧಿಕಾರಿಗಳು ವಿದ್ಯಾರ್ಥಿಗಳ ಕೈಯಲ್ಲಿ ಕಲ್ಲು, ಜಲ್ಲಿ, ಸಿಮೆಂಟ್, ಸುತ್ತಿಗೆ, ಸಲಾಕಿ ಸೇರಿದಂತೆ ವಿವಿಧ ರೀತಿಯ ಕಾಮಗಾರಿ ವಸ್ತುಗಳನ್ನು ನೀಡಿ ಕೆಲಸಕ್ಕೆ ಹೆಚ್ಚಿರುವುದು ಸಂಬಂಧಿಸಿದಂತೆ ವಿಡಿಯೋ ಮತ್ತು ಪೋಟೋಗಳು ಸಾಕ್ಷಿ ಇವೆ. ಇದರ ಆಧಾರದಲ್ಲಿ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಜಿಲ್ಲಾಧಿಕಾರಿಗಳು, ಜಿಲಾ ್ಲಉಸ್ತುವಾರಿ ಸಚಿವರು, ಶಾಸಕರು ಹಾಗೂ ಉಪ ಸಭಾಪತಿಗಳು ಶಿಸ್ತು ಕ್ರಮ ಜರುಗಿಸಿ ಸರ್ಕಾರಿ ಹುದ್ದೆಯಿಂದ ಅಮಾನತು ಮಾಡಬೇಕು.  

ಕ್ರೀಡಾಂಗಣದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಅನುದಾನ ಬಿಡುಗಡೆ ಮಾಡಿ ಕಾರ್ಮಿಕರು ಮೂಲಕ ಮಾಡಿಸಬೇಕಾದ ಕೆಲಸವನ್ನು ಈ ರೀತಿಯಲ್ಲಿ ವಿದ್ಯಾರ್ಥಿಗಳಿಂದ ಕೆಲಸ ಮಾಡಿಸಿಕೊಂಡು ಕಾರ್ಮಿಕರಿಗೆ ನೀಡಬೇಕಾದ ಬಂದಿರುವ ಹಣವನ್ನು ಕೊಳೆಹಿಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಬಾಲ ಕಾರ್ಮಿಕ ವಿರೋಧಿ ಚಟುವಟಿಕೆಗಳನ್ನು ತಡೆಗಟ್ಟಬಹುದಾದ ಅಧಿಕಾರಿಗಳೆ ಈ ರೀತಿಯ 18 ವರ್ಷದ ಒಳಗಿನ ವಿದ್ಯಾರ್ಥಿಗಳನ್ನು ಕೆಲಸಕ್ಕೆ ಬಳಕೆ ಮಾಡಿದ್ದು ಕಾನೂನು ಬಾಹಿರ ಅಪರಾಧವಾಗಿದೆ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಂಡು ಅಮಾನತು ಮಾಡಿ ಮಕ್ಕಳ ಹಕ್ಕುಗಳನ್ನು ಕಾಪಾಡಲು ಮುಂದಾಗಬೇಕೆಂದು ಎಸ್‌ಎಫ್‌ಐ ಆಗ್ರಹಿಸುತ್ತದೆ.ಯಾವುದೇ ರೀತಿಯ ಕ್ರಮ ತೆಗೆದುಕೊಳ್ಳದೆ ಈಜುಕೊಳ ಉದ್ಘಾಟಿಸಿದ್ದರೆ ಮಕ್ಕಳ ಹಕ್ಕುಗಳನ್ನು ಉಲ್ಲಘಂನೆಯ ಹೊಣೆಗಾರಿಕೆಯನ್ನು ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಉಪ ಸಭಾಪತಿಗಳು ತಮ್ಮ ಹೆಗಲಿಗೆ ಹೊರಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಎಸ್‌ಎಫ್‌ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಬಸವರಾಜಎಸ್ ಹಾಗೂ ಜಿಲ್ಲಾ ಕಾರ್ಯದರ್ಶಿ ದುರಗಪ್ಪ ಯಮ್ಮಿಯವರ ಎಚ್ಚರಿಕೆ ನೀಡಿದರು.