ಗದಗ 22: ಮೊದಲನೇ ಸುತ್ತಿನ ಇಂದ್ರಧನುಷ್ ಲಸಿಕಾ ಕಾರ್ಯಕ್ರಮವನ್ನು ನವೆಂಬರ್ 23, 24 ಹಾಗೂ 27, 28 ರಂದು ಹಮ್ಮಿಕೊಳ್ಳಲಾಗಿದ್ದು ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಲು ಗದಗ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ತಿಳಿಸಿದರು.
ಅವರಿಂದು ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯಿಂದ ಜರುಗಿದ ಜಿಲ್ಲಾ ಟಾಸ್ಕ್ ಫೋರ್ಸ ಲಸಿಕಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕಳೆದ ಸುತ್ತಿನಲ್ಲಿ ಲಸಿಕೆಯಿಂದ ವಂಚಿತರಾದ ಮಕ್ಕಳು ಈ ಸುತ್ತಿನಲ್ಲಿ ಲಸಿಕೆ ಪಡೆಯುವಂತಾಗಬೇಕು ಹಾಗೂ ಮಿಷನ್ ಇಂದ್ರಧನುಷ ಕಾರ್ಯಕ್ರಮವು ಯಾವುದೇ ನ್ಯೂನತೆಗಳಿಲ್ಲದೇ ಯಶಸ್ವಿ ನೆರವೇರಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿದರ್ೇಶನ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಡಾ. ಎಸ್.ಎಮ್. ಹೊನಕೇರಿ ಸರ್ವರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಭಾರತ ಸಕರ್ಾರದ ಆದೇಶದನ್ವಯ ಕನರ್ಾಟಕ ರಾಜ್ಯದ ಆಯ್ದ 5 ಜಿಲ್ಲೆಗಳಲ್ಲಿ ಮಿಷನ್ ಇಂದ್ರಧನುಷ್ ಕಾರ್ಯಕ್ರಮವು ನವೆಂಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಮೊದಲನೇ ಸುತ್ತಿನ ಮಿಷನ್ ಇಂದ್ರಧನುಷ್ ಕಾರ್ಯಕ್ರಮ ನವೆಂಬರ್ ತಿಂಗಳಿನಲ್ಲಿ ಜಿಲ್ಲೆಯಾದ್ಯಂತ 0-2 ವರ್ಷದ ಮಕ್ಕಳು 3024 ಹಾಗೂ ಗಭರ್ಿಣಿಯರು 357 ಅರ್ಹ ಫಲಾನುಭವಿಗಳನ್ನು ಗುರುತಿಸಲಾಗಿದೆ. ಒಟ್ಟು ಲಸಿಕಾ ಸತ್ರ-195 , ಮೊಬೈಲ್ ತಂಡ- 4, ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರದ ಒಳಗೊಂಡ ಗ್ರಾಮಗಳಲ್ಲಿ ಮೇಲ್ಕಾಣಿಸಿದ ದಿನಾಂಕದಂದು ಅರ್ಹ ಫಲಾನುಬವಿಗಳಿಗೆ ಲಸಿಕೆಯನ್ನು ಕೊಡಲಾಗುವುದು. ಲಸಿಕೆ ನೀಡುವ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಕಾರ್ಯಕ್ರಮ ಅನುಷ್ಟಾನ ಅಧಿಕಾರಿಗಳು, ತಾಲೂಕಾ ಆರೋಗ್ಯಾಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದರ್ೇಶಕರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿದರ್ೇಶಕರು ಉಪಸ್ಥಿತರಿದ್ದರು.