ಕನ್ನಡ ರಾಜ್ಯೋತ್ಸವದ ವಿಜೃಂಭಣೆಯ ಆಚರಣೆ: ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ
Exuberant celebration of Kannada Rajyotsava: Additional District Collector Sajid Mulla
ಕನ್ನಡ ರಾಜ್ಯೋತ್ಸವದ ವಿಜೃಂಭಣೆಯ ಆಚರಣೆ: ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ
ಕಾರವಾರ, ಅ.15: ಜಿಲ್ಲೆಯಲ್ಲಿ ನವೆಂಬರ್ 1 ರಂದು ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ನಾಡು, ನುಡಿ, ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ನಿರ್ದೇಶನ ನೀಡಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಗರದ ಪೊಲೀಸ್ ಪೆರೇಡ್ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಮತ್ತು ಯಾವುದೇ ಲೋಪಗಳಿಲ್ಲದಂತೆ ಆಚರಿಸಲು ವಿವಿಧ ಅಧಿಕಾರಿಗಳ ನೇತೃತ್ವದ ಉಪ ಸಮಿತಿಗಳನ್ನು ರಚಿಸಿದ ಅವರು, ಸ್ವಾಗತ, ಮೆರವಣಿಗೆ, ಸ್ತಬ್ಧಚಿತ್ರ, ಧ್ಜಜಾರೋಹಣ, ವೇದಿಕೆ, ಪಥಸಂಚಲನ, ಸಾಂಸ್ಕೃತಿಕ, ಬಹುಮಾನ ವಿತರಣೆ ಕುರಿತ ವಿವಿಧ ಉಪ ಸಮಿತಿಗಳ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಪೊಲೀಸ್ ಪರೇಡ್ ಮೈದಾನದವರೆಗೆ ಕನ್ನಡಾಂಬೆಯ ಭಾವಚಿತ್ರ ಮೆರವಣಿಗೆಯನ್ನು ವಿವಿಧ ಕಲಾತಂಡಗಳೊಂದಿಗೆ ಅದ್ದೂರಿಯಾಗಿ ಏರಿ್ಡಸಬೇಕು. ಮೆರವಣಿಗೆ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್, ಕೃಷಿ, ತೋಟಗಾರಿಕೆ, ಅರಣ್ಯ, ಮೀನುಗಾರಿಗೆ, ಬಂದರು ಇಲಾಖೆ ಮತ್ತು ನಗರಸಭೆ ವತಿಯಿಂದ ಸ್ತಬ್ಧಚಿತ್ರವನ್ನು ಪ್ರದರ್ಶಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ರಾಜ್ಯೋತ್ಸವ ಪ್ರಯುಕ್ತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮತ್ತು ನಗರದ ಪ್ರಮುಖ ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡುವಂತೆ ಹಾಗೂ ಪೊಲೀಸ್ ಕವಾಯತು ಮೈದಾನದಲ್ಲಿ ಧ್ವಜಾರೋಹಣ ಮತ್ತು ಪಥ ಸಂಚಲನ ಕಾರ್ಯಕ್ರಮಕ್ಕೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಮೆರವಣಿಗೆಯಲ್ಲಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಪೊಲೀಸ್, ಎನ್.ಸಿ.ಸಿ, ಗೃಹ ರಕ್ಷಕ ದಳ ಸೇರಿದಂತೆ ಎಲ್ಲರೂ ಪಾಲ್ಗೊಳ್ಳುವಂತೆ ನಿರ್ದೇಶನ ನೀಡಿದ ಅಪರ ಜಿಲ್ಲಾಧಿಕಾರಿಗಳು, ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ವಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದರು. ಸಭೆಯಲ್ಲಿ ಉಪ ವಿಭಾಗಾಧಿಕಾರಿ ಶ್ರವಣಕುಮಾರ್, ಜಿಲ್ಲಾ ಪಂಚಯತ್ ಉಪ ಕಾರ್ಯದರ್ಶಿ ಅಲ್ಲಾ ಬಕಷ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 