ಪಟ್ಟಣದ ಆದಿಶೇಷ ಸಂಸ್ಥಾನ ಮಠದ 29ನೇ ಜಾತ್ರಾ ಮಹೋತ್ಸವ ನಿಮಿತ್ಯ ಹಮ್ಮಿಕೊಂಡ ನೇತ್ರ ಚಿಕಿತ್ಸೆ ಶಿಬಿರ
ಸಿಂದಗಿ 20: ಜಗತ್ತಿನ ಸೌಂದರ್ಯ ಸವಿಯಲು ಕಣ್ಣು ಅತೀ ಮುಖ್ಯ. ಮಾನವನ ದೇಹದಲ್ಲಿ ಮೆದುಳಿನ ನಂತರ ಕಣ್ಣು ಅತೀ ಸೂಕ್ಷ್ಮ ಅಂಗ. ಕಣ್ಣಿನ ಆರೈಕೆಗೆ ಪ್ರತಿಯೊಬ್ಬರೂ ಜಾಗೃತಿ ವಹಿಸಬೇಕು. ಎಂದು ಆದಿಶೇಷ ಶ್ರೀಮಠದ ನಾಗರತ್ನ ರಾಜಯೋಗಿ ವೀರರಾಜೇಂದ್ರ ಮಹಾಸ್ವಾಮಿಗಳು ಹೇಳಿದರು.
ಪಟ್ಟಣದ ಬಸ್ಡಿಪೋ ಹತ್ತಿರದಲ್ಲಿರುವ ಆದಿಶೇಷ ಸಂಸ್ಥಾನ ಹಿರೇಮಠದ ಆವರಣದಲ್ಲಿ ಹಮ್ಮಿಕೊಂಡ ಶ್ರೀ ಆದಿಶೇಷ ಸಂಸ್ಥಾನ ಹಿರೇಮಠದ 29ನೆಯ ಜಾತ್ರಾ ಮಹೋತ್ಸವ-ಧರ್ಮಸಭೆ ಕಾರ್ಯಕ್ರಮ ನಿಮಿತ್ಯ ಹಮ್ಮಿಕೊಂಡ ಕಣ್ಣಿನ ಶಸ್ತ್ರ ಚಿಕಿತ್ಸೆ ನಂತರ ಸರಿಯಾದ ಮುಂಜಾಗೃತ ಕ್ರಮಗಳು ಅತೀ ಮುಖ್ಯ. ಅದನ್ನು ಸರಿಯಾಗಿ ನಿಭಾಯಿಸಬೇಕು ಎಂದು ಸಲಹೆ ನೀಡಿದರು.
ಪತ್ರಕರ್ತರ ಸಂಘದ ಅದ್ಯಕ್ಷ ಪಂಡಿತ ಯಂಪೂರೆ ಮಾತನಾಡಿ, ಹುಟ್ಟಿನಿಂದಲೇ ದೃಷ್ಟಿಯನ್ನು ಕಳೆದುಕೊಂಡವರು ಪ್ರಪಂಚವನ್ನು ನೋಡುವ ಭಾಗ್ಯದಿಂದ ವಂಚಿತರಾಗಿದ್ದಾರೆ. ಆದರೆ ಬಹಳಷ್ಟ್ಟು ಮಂದಿ ತಮ್ಮ ನಿರ್ಲಕ್ಷ್ಯದಿಂದ ಕಣ್ಣು ಕಳೆದುಕೊಂಡವರಿದ್ದಾರೆ. ಆದ ಕಾರಣ ದೃಷ್ಟಿ ಇದ್ದವರು ಕಣ್ಣಿನ ರಕ್ಷಣೆಗೆ ಒತ್ತು ನೀಡುವುದು ಅವಶ್ಯ. ಎಂದು ಹೇಳಿದ ಅವರು, ಉಚಿತ ಕಣ್ಣಿನ ಚಿಕಿತ್ಸಾ ಶಿಬಿರ ಎಂದರೆ ತಾಸ್ತಾರ ಮಹೋಬಾವ ತೊರದೇ ಒಳ್ಳೆ ಮನಸ್ಸಿನಿಂದ ತಪಾಷಣೆ ಪಡೆದುಕೊಂಡು ವೈದ್ಯರು ಹೇಳೀದಂತೆ ನಡೆದುಕೊಂಡು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಡಾ ಮಹಾಂತೇಶ ಹಿರೇಮಠ ಮಾತನಾಡಿ, ವಿಜಯಪುರದ ಅನುಗ್ರಹ ಕಣ್ಣಿನ ಆಸ್ಪತ್ರೆಯ ಮುಖ್ಯಸ್ಥ ಡಾ ಪ್ರಭುಗೌಡ ಬಿರಾದಾರ ಅವರು ಬಡವರ ಸಾಮಾಜಿಕ ಸೇವೆಯಲ್ಲಿ ದೇವರನ್ನು ಕಾಣಲು ಹೊರಟಿದ್ದಾರೆ ಅವರ ಕುಟುಂಬದಲ್ಲಿ ಸುಮಾರು 8 ಜನ ಕಣ್ಣಿನ ತಜ್ಞರಿದ್ದಾರೆ ಅವರೆಲ್ಲರು ಬಡಜನರ ಸೇವೆಗೆ ಪಣ ತೊಟ್ಟಿದ್ದಾರೆ ಅವರ ಕುಟುಂಬಕ್ಕೆ ಆದಿಶೇಷ ಸಂಸ್ಥಾನ ಮಠದ ಆಶಿರ್ವಾದ ಇರಬೇಕು ಎಂದು ಮನವಿ ಮಾಡಿಕೊಂಡರು.
ಈ ಶಿಬಿರದಲ್ಲಿ 50ಕ್ಕೂ ಅಧಿಕ ಜನರು ತಪಾಷಣೆ ಪಡೆದುಕೊಂಡರೆ 15 ಜನರು ಶಸ್ತ್ರ ಚಿಕಿತ್ಸೆಗೆ ಒಳಪಟ್ಟಿದ್ದಾರೆ ಅವರನ್ನು ಜ.27 ರಂದು ಚಿಕಿತ್ಸೆಗೆ ದಿನಾಂಕ ನಿಗದಿ ಪಡಿಸಲಾಗಿದೆ.
ದಿವ್ಯ ಸಾನಿಧ್ಯವನ್ನು ನಾಲವಾರ ಶ್ರೀಮಠದ ಶಿವಯೋಗಿ ಡಾ.ಚಂದ್ರಶೇಖರ ಸ್ವಾಮಿಗಳು ವಹಿಸಿದ್ದರು.
ರಾಮನಗೌಡ ಮೊರಟಗಿ ಸ್ವಾಗತಿಸಿದರು. ಅನುಗ್ರಹ ಕಣ್ಣಿನ ಆಸ್ಪತ್ರೆಯ ಸಿಬ್ಬಂದಿ ಇದ್ದರು.