ಪತ್ರಿಕಾರಂಗ ಸಮಾಜದ ಕಣ್ಣು-ಕಿವಿ: ಹತ್ತರಗಿ ಸುಕ್ಷೇತ್ರದ ಗುರುಸಿದ್ಧ ಸ್ವಾಮೀಜಿ
Eyes and ears of the press community: Gurusiddha Swamiji of Hattaragi Sukshetra
ಲೋಕದರ್ಶನ ವರದಿ
ಯಮಕನಮರಡಿ 02: ಪತ್ರಿಕಾರಂಗವು ಸಮಾಜದ ಕಣ್ಣು ಹಾಗೂ ಕಿವಿಯಾಗಿದ್ದು, ಸತ್ಯ, ನ್ಯಾಯ ಮತ್ತು ಜನಪರ ಮೌಲ್ಯಗಳನ್ನು ಎತ್ತಿಹಿಡಿಯುವ ಮಹತ್ವದ ಜವಾಬ್ದಾರಿಯನ್ನು ಹೊತ್ತಿದೆ ಎಂದು ಹತ್ತರಗಿ ಕಾರಿಮಠದ ಗುರುಸಿದ್ಧ ಸ್ವಾಮೀಜಿಗಳು ಹೇಳಿದರು. ಅವರು ಬುಧವಾರ ಸಮೀಪದ ನಾಗನೂರ ಕೆ.ಎಂ. ಸರ್ಕಾರಿ ಪ್ರೌಢ ಶಾಲೆಯಲ್ಲಿ ಯಮಕನಮರಡಿ ಪತ್ರಕರ್ತರ ಬಳಗ ಹಾಗೂ ಹುಕ್ಕೇರಿ ಸಾಮಾಜಿಕ ಅರಣ್ಯ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾದ ಪತ್ರಿಕಾ ದಿನಾಚರಣೆ ಹಾಗೂ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ದಿವ್ಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಕ್ಷೇತ್ರದಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರು ಶೈಕ್ಷಣಿಕ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದು, ಅಭಿವೃದ್ಧಿಗೊಂಡ ಶಾಲೆಯಲ್ಲಿ ಪತ್ರಿಕಾ ದಿನಾಚರಣೆ ನಡೆಯುತ್ತಿರುವುದು ಸಂತೋಷ ತಂದಿದೆ ಎಂದರು. ಪತ್ರಕರ್ತರು ಯಾವುದೇ ನೀರೀಕ್ಷೆಯಿಲ್ಲದೆ ನಿಷ್ಪಕ್ಷಪಾತವಾಗಿ ಸಮಾಜ ಸೇವೆ ಸಲ್ಲಿಸುತ್ತಿದ್ದು, ಅವರ ಸೇವೆಯನ್ನು ಗೌರವಿಸಬೇಕೆಂದು ಕರೆ ನೀಡಿದರು. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಮರಗಳನ್ನು ಬೆಳೆಸುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಉಳಿಸಿಕೊಡಬೇಕೆಂದೂ, ವಿದ್ಯಾರ್ಥಿಗಳು ಉತ್ತಮ ಶಿಕ್ಷಣದ ಜೊತೆಗೆ ಪರಿಸರದ ಬಗ್ಗೆ ಕಾಳಜಿ ಬೆಳೆಸಿಕೊಳ್ಳಬೇಕೆಂದೂ ಸಲಹೆ ನೀಡಿದರು.
ಯಮಕನಮರಡಿಯ ಹರಿ ಮಂದಿರದ ಆನಂದ ಗೋಸಾವಿ ಮಹಾರಾಜರು ಮಾತನಾಡಿ, ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನ ನೀಡುವ ಮೂಲಕ ಪ್ರತಿಭೆಯನ್ನು ಪ್ರೋತ್ಸಾಹಿಸಲಾಗುತ್ತಿರುವುದು ಶ್ಲಾಘನೀಯ ಎಂದರು. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಜ್ಞಾನ ಮತ್ತು ಸ್ಪರ್ಧಾತ್ಮಕ ಮನೋಭಾವ ಬೆಳೆಸಲು ಸಹಕಾರಿ ಎಂದು ಅಭಿಪ್ರಾಯಪಟ್ಟರು. ರಾಜ್ಯದಲ್ಲಿ ಜುಲೈ1ರಂದು ಪತ್ರಿಕಾ ದಿನಾಚರಣೆ ಆಚರಿಸಲಾಗುತ್ತಿದ್ದು, ಮಂಗಳೂರು ಸಮಾಚಾರ ಪತ್ರಿಕೆಯ ಪ್ರಾರಂಭದ ನೆನಪಿಗಾಗಿ ಈ ದಿನವನ್ನು ಆಚರಿಸಲಾಗುತ್ತದೆ ಎಂದು ತಿಳಿಸಿದರು. ಸಾಮಾಜಿಕ ಜಾಲತಾಣಗಳ ಅಬ್ಬರದ ನಡುವೆಯೂ ಪತ್ರಿಕೆಗಳ ಮೇಲೆ ಜನರು ಇಟ್ಟಿರುವ ವಿಶ್ವಾಸ ಮಹತ್ವದ್ದಾಗಿದೆ ಎಂದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 