ಫ.ಗು. ಹಳಕಟ್ಟಿ ಕೊಡುಗೆ ಅಮೋಘ: ತಹಶೀಲ್ದಾರ್ ಬಿರಾದಾರ
F.G. Halakatti's contribution is immense: Tehsildar Biradar
ದೇವರಹಿಪ್ಪರಗಿ 02: ಫ.ಗು. ಹಳಕಟ್ಟಿಯವರು ಬಸವಾದಿ ಶರಣರ ವಚನಗಳನ್ನು ಹುಡುಕಿ, ಸಂಪಾದಿಸಿ, ಪ್ರಕಟಿಸಿ, ಕನ್ನಡದ ಅಮೂಲ್ಯ ನಿಧಿ ಪರಿಚಯಿಸಿದ ಮಹಾನ್ ಶಿಲ್ಪಿ ,ಅವರ ಕೊಡುಗೆ ಅಮೋಘ ಎಂದು ತಹಶೀಲ್ದಾರ್ ನಿಂಗಪ್ಪ ಬಿರಾದಾರ ಹೇಳಿದರು.ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಭವನದಲ್ಲಿ ಗುರುವಾರ ಆಯೋಜಿಸಿದ್ದ ಫ.ಗು.ಹಳಕಟ್ಟಿ ಅವರ ಜನ್ಮದಿನ ಹಾಗೂ ವಚನ ಸಾಹಿತ್ಯ ದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ಫ.ಗು. ಹಳಕಟ್ಟಿ ಅವರು ಕನ್ನಡದ ಸಾರಸತ್ವ ಲೋಕದ ಅಪ್ರತಿಮ ಸಂಶೋಧಕರು, ವಿದ್ವಾಂಸರು, ವಕೀಲರು ಹಾಗೂ ಸಹಕಾರ ಚಳವಳಿಯ ಪ್ರವರ್ತಕರು ಆಗಿದ್ದರು ಎಂದರು.
ತಾಲೂಕು ಕಸಾಪ ಮಾಜಿ ಅಧ್ಯಕ್ಷರಾದ ಜಿ.ಪಿ.ಬಿರಾದಾರ ಅವರು ಮಾತನಾಡಿ, ವಕೀಲಿ ವೃತ್ತಿ ಬಿಟ್ಟು ವಚನ ಸಂಶೋಧನೆ ಮಾಡಲು ಜೀವನವನೇ ಮುಡುಪಾಗಿಟ್ಟ ಹಳಕಟ್ಟಿ ಬಸವತತ್ವದ ಅನರ್ಘ್ಯ ರತ್ನ ಎಂದು ವರ್ಣಿಸಿದರು.ಮುಖಂಡರಾದ ಮಲ್ಲು ಕೋರಿ ಅವರು ಮಾತನಾಡಿ,ಬಸವತತ್ವವನ್ನು ಸಮಾಜಕ್ಕೆ ಪರಿಚಯಿಸಿದ ಕೀರ್ತಿ ಫ.ಗು. ಹಳಕಟ್ಟಿ ಅವರಿಗೆ ಸಲ್ಲುತ್ತದೆ. ಅವರ ಕಾರ್ಯ ಅಮೋಘವಾದುದು ಎಂದರು.ಇದೇ ಸಂದರ್ಭದಲ್ಲಿ ಪಟ್ಟಣದ ಪ್ರಮುಖರು, ಗಣ್ಯರು ಹಾಗೂ ತಹಶೀಲ್ದಾರ್ ಕಚೇರಿ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 