ಎಫ್.ಟಿ.ಕೆ. ಟೆಸ್ಟ್ ಕಡ್ಡಾಯ : ಈಶ್ವರ ಕಾಂದೂ
ಕಾರವಾರ 10 : ಜಿಲ್ಲೆಯಲ್ಲಿನ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಕುಡಿಯುವ ನೀರಿನ ಮೂಲಗಳಲ್ಲಿ ಕಡ್ಡಾಯವಾಗಿ ನಿರಂತರವಾಗಿ ಎಫ್.ಟಿ.ಕೆ. ಟೆಸ್ಟ್ ಮಾಡಬೇಕು. ಹಾಗೂ ಆನ್‌ಲೈನ್‌ನಲ್ಲಿ ಅಪ್ಡೇಟ್ ಮಾಡಬೇಕು. ಆ ಮೂಲಕ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಹೇಳಿದರು. ಸೋಮವಾರ ಕುಮಟಾ ತಾಲೂಕು ಪಂಚಾಯತ ಸಭಾಂಗಣದಲ್ಲಿ ನಡೆದ ವಿವಿಧ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಹೆಸ್ಕಾಂಗೆ ಸಂಬಂಧಿಸಿದಂತೆ ಬಾಕಿ ಮೊತ್ತ ಪಾವತಿ, ಜಲ ಜೀವನ ಮಿಷನ್‌ಗೆ ಸಂಬಂಧಿಸಿದಂತೆ ಬ್ಯಾಚ್ 1,2,3, ಮತ್ತು 4 ಹಾಗೂ ಎಸ್.ಡಿ.ಪಿ., ಟಾಸ್ಕ್ ಫೋರ್ಸ್, ಎನ್.ಆರ್.ಡಿ.ಡಬ್ಲ್ಯೂ.ಪಿ. ಪ್ರಗತಿ ಪರೀಶೀಲನೆ, ಟ್ಯಾಗಿಂಗ್ ಪ್ರಗತಿ, ಕುಡಿಯುವ ನೀರಿನ ಸಮಸ್ಯೆ ಕುರಿತು. ವಸತಿ, ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಮಾನವ ದಿನ ಸೃಜನೆ, ಕಾಮಗಾರಿ ಪೂರ್ಣಗೊಳಿಸುವಿಕೆ, ಕಡತ ಪರೀಶೀಲನೆ, ಜಿಯೋ ಟ್ಯಾಗ್, ಸಾಮಾಜಿಕ ಲೆಕ್ಕ ಪರಿಶೋಧನೆ, ಆನ್ ಲೈನ್ ವಾರ್ಷಿಕ ಕ್ರೀಯಾ ಯೋಜನೆ, ಬೂದು ನೀರು ನಿರ್ವಹಣೆ ಕಾಮಗಾರಿ ಸೇರಿದಂತೆ ವಿವಿಧ ಯೋಜನೆಗ ಪ್ರಗತಿ ಪರೀಶೀಲನೆ ನಡೆಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಆಡಳಿತ ಶಾಖೆಯ ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್, ಅಭಿವೃದ್ಧಿ ಶಾಖೆಯ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ, ಮುಖ್ಯ ಲೆಕ್ಕಾಧಿಕಾರಿ ಆನಂದ ಸಾ ಹಬೀಬ್, ಮುಖ್ಯ ಯೋಜನಾಧಿಕಾರಿ ವಿನೋದ್ ಅಣ್ವೇಕರ್, ಯೋಜನಾ ನಿರ್ದೇಶಕ ಕರೀಂ ಅಸದಿ, ಕಾರ್ಯನಿರ್ವಾಹಕ ಅಭಿಯಂತರರು ಸಹಾಯಕ ಕಾರ್ಯದರ್ಶಿ ಆಡಳಿತ ಅಧಿಕಾರಿ ಮತ್ತು ಕಾರ್ಯಪಾಲಕ ಅಭಿಯಂತರರು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಎಲ್ಲ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.