ಕಾರ್ಖಾನೆ ಮಾಲೀಕರು ಜನರ ನೋವಿಗೆ ಸ್ಪಂದಿಸುವದಿಲ್ಲ - ಚೇತನ ಅಹಿಂಸಾ
Factory owners are not responsive to people's pain - Chetana Ahimsa
ಕೊಪ್ಪಳ 18: ಗದುಗಿನಿಂದ ಜನಸಾಮಾನ್ಯರು ಕಟ್ಟಿದ ಹೋರಾಟದ ಫಲವಾಗಿ ಇದೇ ಬಲ್ಡೋಟಾ ಗೋಲ್ಡ್ ಮೈನಿಂಗ್ ಮಾಡಲು ಕಪ್ಪತಗುಡ್ಡಕ್ಕೆ ಬಂದಿದ್ದರು. ಎಲ್ಲಾ ರೀತಿಯ ಆಮಿಷ ತೋರಿಸಿ ಏನೆಲ್ಲಾ ಮಾಡಲು ಪ್ರಯತ್ನಿಸಿದರೂ ಸಹ ನಾವು ಅವರನ್ನು ಓಡಿಸಿದೆವು ಎಂದು ಗದಗ ಜಿಲ್ಲೆ ಕಪ್ಪತಗುಡ್ಡ ನಂದಿವೇರಿ ಶಿವಕುಮಾರ ಸ್ವಾಮೀಜಿ ಅವರು ಹೇಳಿದರು.
ಅವರು ಇಲ್ಲಿನ ನಗರಸಭೆ ಸಂಕೀರ್ಣದ ಮುಂದೆ ನಡೆದಿರುವ ಬಲ್ಡೋಟಾ ಹಾಗೂ ಇತರೆ ಕಾರ್ಖಾನೆ ತಡೆ ಹೋರಾಟದ 19 ನೇ ದಿನದಲ್ಲಿ ಪಾಲ್ಗೊಂಡು ತಮ್ಮ ಅಭಿಪ್ರಾಯ ಹಂಚಿಕೊಂಡರು. ಸಭೆಗೆ ಬರುವ ಮುಂಚೆ ಅವರು ಭಾದಿತ ಪ್ರದೇಶದ ಕೆಲವು ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಯನ್ನು ಆಲಿಸಿ ಬಂದಿದ್ದರು. ಈ ವೇಳೆ ಅಲ್ಲಿನ ಗಂಭೀರ ಪರಿಸ್ಥಿತಿಯನ್ನು ಪ್ರತಿ ಮನೆಗೆ ಮುಟ್ಟಿಸುವ ಕೆಲಸವಾಗಬೇಕಿದೆ ಈಗಾಗಲೇ ಹೋರಾಟಕ್ಕೆ ಚಾಲನೆ ನೀಡಿರುವಂತಹ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಇದರ ನೇತೃತ್ವ ವಹಿಸಿಕೊಳ್ಳಬೇಕು ಎಂಬ ಅಭಿಪ್ರಾಯ ಜನರದ್ದಾಗಿದೆ. ನಮ್ಮದು ಆಗಿದೆ. ರಾಜ್ಯದ ಎಲ್ಲ ಭಾಗಗಳ ಸ್ವಾಮೀಜಿಗಳನ್ನು ಅವಶ್ಯಕತೆ ಇದೆ ಎಂದರೆ ಕರೆದುಕೊಂಡು ಬರುತ್ತೇವೆ.
ಇದೇ ವೇಳೆ ಹೋರಾಟದ ಭಾಗವಾಗಿ ಆಗಮಿಸಿದ ಚಲನ ಚಿತ್ರ ನಟ, ಪ್ರಗತಿಪರ ಮುಖಂಡ ಚೇತನ ಅಹಿಂಸಾ ಮಾತನಾಡಿ, ಜನರಿಗೆ ಮೂಲಭೂತವಾಗಿ ಅವಶ್ಯಕತೆ ಇರುವ ಬದುಕುವ ಹಕ್ಕನ್ನು ಸಂವಿಧಾನ ಕೊಟ್ಟಿದೆ ಅದರ ಆಶಯದಂತೆ ನಮಗೆ ನ್ಯಾಯ ಸಿಗಬೇಕು. ಹೋರಾಟ ಎಷ್ಟು ದೊಡ್ಡದಿದೆ ಚಿಕ್ಕದಿದೆ ಎಂಬುದು ಮುಖ್ಯವಲ್ಲ ಆದರೆ ಆ ಹೋರಾಟದ ವಿಷಯ ವಸ್ತು ಮತ್ತು ಅದನ್ನು ತೆಗೆದುಕೊಂಡು ಹೋರಾಟ ಮಾಡುವ ಗಟ್ಟಿ ಜನ ಬಹಳ ಮುಖ್ಯ.
ಹಾಗಾಗಿ ಅತ್ಯಂತ ಸೂಕ್ತವಾದ ವಿಷಯ ಇಟ್ಟುಕೊಂಡು ಸೂಕ್ತ ಹೋರಾಟ ರೂಪಿಸಿದ ಕಾರಣ ನಾನು ಇಲ್ಲಿಯವರೆಗೆ ಬಂದಿದ್ದೇನೆ, ಜನ ಎದ್ದೇಳಬೇಕು ಹೋರಾಡಬೇಕು ನಾನು ಸಹ ಅಗತ್ಯ ಬಿದ್ದಾಗ ಈ ಹೋರಾಟದಲ್ಲೇ ಮತ್ತೆ ಮತ್ತೆ ಭಾಗವಹಿಸುತ್ತೇನೆ ಎಂದ ಅವರು ಆಳುವ ಜನ ನೋವಿನಲ್ಲಿರುವ ಜನರ ಕಷ್ಟವನ್ನು ಕೇಳುವಂತಿರಬೇಕು ಅಂಥವರನ್ನು ನಾವು ಆಯ್ಕೆ ಮಾಡಿಕೊಳ್ಳಬೇಕು. ಅಂಬೇಡ್ಕರ್ ಅವರು ಹೇಳಿದಂತೆ ಕೇವಲ ಮತ ಚಲಾಯಿಸುವುದಲ್ಲ ಅಧಿಕಾರದ ಹಕ್ಕನ್ನು ಸಹ ನಾವು ಪಡೆದುಕೊಳ್ಳಬೇಕು ಎಂದರು. ಅಂತಹ ಜಾಗೃತಿ ಮೂಡಿಸುವ ಸಲುವಾಗಿ ನಾನು ರಾಜ್ಯಾದ್ಯಂತ ಓಡಾಡಿ ಜನರಿಗೆ ತಮ್ಮ ಹಕ್ಕು ಅಧಿಕಾರದ ಮಾಹಿತಿ ನೀಡುತ್ತಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಮತ್ತು ಪರಿಸರ ಹಿತರಕ್ಷಣಾ ವೇದಿಕೆಯ ಪ್ರಮುಖರುಗಳಾದ ಪ್ರೊ. ಅಲ್ಲಮಪ್ರಭು ಬೆಟ್ಟದೂರು, ಡಿ.ಎಚ್.ಪೂಜಾರ, ಕೆ. ಬಿ. ಗೋನಾಳ, ಮಂಜುನಾಥ ಜಿ. ಗೊಂಡಬಾಳ, ಎಸ್.ಬಿ.ರಾಜೂರು, ಮೂಕಪ್ಪ ಮೇಸ್ತ್ರಿ, ಯಮನೂರ್ಪ ಹಾಲಳ್ಳಿ, ಕರಿಯಪ್ಪ ಗುಡಿಮನಿ, ವಿದ್ಯಾ ನಾಲವಾಡ, ರತ್ನಮ್ಮ ಡಿ. ಬಸವರಾಜ ಶೀಲವಂತರ, ಮಹಾದೇವಪ್ಪ ಮಾವಿನಮಡು, ಎಸ್. ಎ. ಗಫಾರ್, ಶಂಭುಲಿಂಗಪ್ಪ ಹರಗೇರಿ, ಡಿ.ಎಂ.ಬಡಿಗೇರ, ಮುದಕಪ್ಪ ಹೂಸಮನಿ, ಶರಣು ಪಾಟೀಲ್, ಮಖಬೂಲ್ ರಾಯಚೂರು, ಕಾಶಪ್ಪ ಛಲವಾದಿ, ರಾಜು ಸಸಿಮಠ, ಗವಿಸಿದ್ದಪ್ಪ ಅನೇಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 