ಕಾರ್ಖಾನೆಗಳ ಹೊಗೆ ಕೇವಲ ಹೊಗೆ, ಬೂದಿ ಅಲ್ಲ ಅದು ವಿಷ : ಹುರಕಡ್ಲಿ
Factory smoke is not just smoke, ash is poison: Hurakadli
ಕೊಪ್ಪಳ 02: 20ಕ್ಕೂ ಹೆಚ್ಚು ಹಳ್ಳಿಗಳು, ನಗರದ ಅರ್ಧ ಭಾಗ ಈ ಮಾಲಿನ್ಯಕಾರಕ ಕಾರ್ಖಾನೆಗಳಿಂದ ಆರೋಗ್ಯ ಹದೆಗೆಟ್ಟಿದೆ, ಅದರ ಮೂಲಕ ಆರ್ಥಿಕವಾಗಿ ತೀವ್ರ ಸಂಕಷ್ಟ ಎದುರಾಗಿದೆ, ಇಲ್ಲಿನ ಕಾರ್ಖಾನೆಗಳ ಹೊಗೆ ಕೇವಲ ಹೊಗೆ, ಬೂದಿ ಅಲ್ಲ ಅದು ವಿಷಾನಿಲ ಎಂಬ ಟರಿವು ನಮಗಿದೆ ಎಂದು ಹಿರಿಯ ಸಾಹಿತಿ ವೀರಣ್ಣ ಹುರಕಡ್ಲಿ ಹೇಳಿದರು.
ಅವರು ನಗರಸಭೆ ಮುಂದುಗಡೆ ಬಲ್ಡೋಟ, ಕಿರ್ಲೋಸ್ಕರ್, ಕಲ್ಯಾಣಿ ಸ್ಟೀಲ್, ಮುಕುಂದ ಸುಮಿ, ಎಕ್ಸ್ ಇಂಡಿಯಾ ಸೇರಿ ಇತರೆ ಎಲ್ಲಾ ಕಾರ್ಖಾನೆಗಳ ವಿಸ್ತರಣೆ ಮತ್ತು ಆರಂಭ ವಿರೋಧಿಸಿ ಕಳೆದ 64 ದಿನಗಳಿಂದ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಇದರ ಜಂಟಿ ಕ್ರಿಯಾ ವೇದಿಕೆ ನಡೆಸುತ್ತಿರುವ ಅನಿರ್ಧಿಷ್ಟ ಧರಣಿಯಲ್ಲಿ ಮಾತನಾಡಿ, ಕಾರ್ಖಾನೆ ಎಂದೊಡನೆ ಇಲ್ಲಿ ಅಭಿವೃದ್ಧಿ ಮತ್ತು ಉದ್ಯೋಗ ಕುರಿತು ಮಾತನಾಡುವುದೇ ಅಸಹ್ಯವಾಗಿದೆ. ಈ ಹೋರಾಟಕ್ಕೆ ಜಾತ್ರೆಯ ನಂತರ ಇಡೀ ಭಾಗ್ಯನಗರ ಬರಲಿದೆ ಎಂದರು.
ಧರಣಿಯಲ್ಲಿ ಪದವಿ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿ, ಬರುವ ದಿನಗಳಲ್ಲಿ ಎಲ್ಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಕಾರ್ಖಾನೆಗಳು ಮಾಡಿದ ಮೋಸ, ಮಾಡುತ್ತಿರುವ ವಿನಾಷಕಾಇ ಕೃತ್ಯಗಳನ್ನು ವಿವರಿಸಿ ಸಾವಿರಾರು ಸಂಖ್ಯೆಯಲ್ಲಿ ಹೋರಾಟಕ್ಕೆ ಕರೆದುಕೊಂಡು ಬರುವದಾಗಿ ಹೇಳಿದರು.
ಧರಣಿಯಲ್ಲಿ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು ಅವರು ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಭಾಗವಹಿಸಿ ಬೆಂಬಲ ನೀಡಬೇಕೆಂದು ಕರೆ ನೀಡಿದರು. ಹಿರಿಯ ಸಾಹಿತಿ ಎ.ಎಂ.ಮದರಿ, ಸಂಚಾಲಕರಾದ ಮಲ್ಲಿಕಾರ್ಜುನ ಬಿ. ಗೋನಾಳ ಮತ್ತು ಮಂಜುನಾಥ ಜಿ. ಗೊಂಡಬಾಳ, ವಿದ್ಯಾರ್ಥಿಗಳಾದ ಬಸವರಾಜ ಬಂಡಿ, ಹನುಮಂತಗೌಡ ಪೊಲೀಸ್ ಪಾಟೀಲ್, ಕಿರಣಕುಮಾರ, ಅಮೀರ್ ಸಾಬ್, ರಾಮಚಂದ್ರ ಮುದ್ದಾಬಳ್ಳಿ, ಕುಮಾರ ಈರಗಾರ್, ಹನುಮೇಶ ಗಂಗಾವತಿ, ಪುಷ್ಪಲತಾ ಏಳುಬಾವಿ, ಎಸ್.ಮಹಾದೇವಪ್ಪ ಮಾವಿನಮಡು, ಮಂಜುನಾಥ ಕವಲೂರು, ಭೀಮಪ್ಪ ಯಲಬುರ್ಗಾ, ಮಖ್ಯುಲ್ ರಾಯಚೂರು, ಗಂಗಮ್ಮ ಕವಲೂರು, ಎಸ್. ಬಿ. ರಾಜೂರು, ಶಂಭುಲಿಂಗಪ್ಪ ಹಲಗೇರಿ ಪಾಲ್ಗೊಂಡರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 