ಫಲಶೃತಿಅಕ್ರಮ ಗಣಿಗಾರಿಕೆ: ಅಧಿಕಾರಿಗಳ ತಂಡದಿಂದ ಪರೀಶೀಲನೆ
Falashruthi Illegal mining: Inspection by a team of officials
ಸವದತ್ತಿ 23: ನಗರದ ಬೆಟಸೂರ ರಸ್ತೆಯ ಮಾರ್ಗ ಕೆಎಚ್‌ಬಿ ಕಾಲೋನಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಕ್ರಮವಾಗಿ ಗರಸು ಮಣ್ಣು ಗಣಿಗಾರಿಕೆ ನಡೆಯುತ್ತಿದೆ ಎಂಬ ಸ್ಥಳೀಯ ನಿವಾಸಿಗಳ ದೂರಿನ ಮೇರೆಗೆ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ನಾಗೇಂದ್ರ ಪ್ರಸಾದ ಅವರು ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದರು.
ಈ ಸಂಬಂಧ ಲೋಕ ದರ್ಶನ ಪತ್ರಿಕೆಯಲ್ಲಿ ಪ್ರಕಟವಾದ ವರದಿಯ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ಗಣಿಗಾರಿಕೆ ನಡೆಯುತ್ತಿರುವ ಸ್ಥಳವನ್ನು ಪರೀಶೀಲಿಸಿದ್ದು, ಅಕ್ರಮವಾಗಿ ಗರಸು ಮಣ್ಣು ತೆಗೆದು ಸಾಗಿಸಿರುವುದು ನಡೆದಿದೆ ಎಂಬುದು ದೃಢಪಟ್ಟಿದೆ. ಪರೀಶೀಲನೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನಾಗೇಂದ್ರ ಪ್ರಸಾದ ಅವರು, ಸರ್ಕಾರದ ಜಾಗದಲ್ಲಿ ಅನುಮತಿ ಇಲ್ಲದೆ ಗಣಿಗಾರಿಕೆ ನಡೆಸಿರುವುದು ಕಂಡುಬಂದಿದೆ. ದೂರುಗಳ ವಾಸ್ತವತೆ, ನಿಯಮಗಳ ಉಲ್ಲಂಘನೆ ಹಾಗೂ ಪರಿಸರ ಹಾನಿಯ ಕುರಿತು ಖುದ್ದು ಪರೀಶೀಲನೆ ನಡೆಸಲಾಗಿದೆ. ಈ ಬಗ್ಗೆ ತಹಶೀಲ್ದಾರ್ ಅವರೊಂದಿಗೆ ಚರ್ಚಿಸಿ ಸೂಕ್ತ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪರೀಶೀಲನಾ ತಂಡದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ರಿಜ್ವಾನ, ಕಂದಾಯ ಇಲಾಖೆ ನೀರೀಕ್ಷಕ ಎಸ್.ಎಮ್. ಮುದಗಲ್, ಗ್ರಾಮ ಆಡಳಿತ ಅಧಿಕಾರಿ ರಾಮಚಂದ್ರ ಠಕ್ಕೆವಾರಿ,ಹಾಗೂ ಪಕ್ಕೀರ್ಪ ಕೋಣನ್ನವರ,ಸೇರಿದಂತೆ ಹಲವು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 