ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಕುಟುಂಬ ರಾಜಕಾರಣ : ಮಲ್ಲಿಕಾರ್ಜುನ್ ತೆಗ್ಗಿನ್
ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಕುಟುಂಬ ರಾಜಕಾರಣ : ಮಲ್ಲಿಕಾರ್ಜುನ್ ತೆಗ್ಗಿನ್
ರಾಣೆಬೆನ್ನೂರು 16 : ನ 16ದೇಶದಲ್ಲಿ ಇಂದು ಹಲವು ರಾಜ್ಯಗಳಲ್ಲಿ ಕುಟುಂಬ ರಾಜಕಾರಣ ಹೆಚ್ಚಾಗಿದೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಕುಟುಂಬ ರಾಜಕಾರಣ ಮಾಡುತ್ತಿರುವುದು ವಿಪರ್ಯಾಸವೆಂದು ಮಾತೃಭೂಮಿ ಗ್ರಾಮೀಣ ಅಭಿವೃದ್ಧಿ ಸೇವಾ ಸಂಸ್ಥೆಯ ಸಂಸ್ಥಾಪಕ ಮಲ್ಲಿಕಾರ್ಜುನ್ ತೆಗ್ಗಿನ್ ಹೇಳಿದರು. ಅವರು ಹಾವೇರಿ ಜಿಲ್ಲಾಡಳಿತ ಭವನದ ಎದುರಿಗೆ ನಿಂತುಕೊಂಡು ಮೌನ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳು ಮತ್ತು ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು. ಭಾರತ ಸರ್ಕಾರ ಕುಟುಂಬ ರಾಜಕಾರಣ ನಿಯಂತ್ರಣ ಕಾಯ್ದೆಯನ್ನು ಕೇಂದ್ರ ಸರ್ಕಾರವು ಜಾರಿಗೊಳಸಬೇಕು. ಮುಂದಿನ ಪ್ರಜಾಪ್ರಭುತ್ವದ ಉಳಿವಿಗೆ ಅತ್ಯವಶ್ಯಕವಾಗಿದೆ. ಭಾರತದಲ್ಲಿ ದಿನದಿಂದ ದಿನಕ್ಕೆ ಕುಟುಂಬ ರಾಜಕಾರಣ ವಿಸ್ತರಣೆಯಾಗುತ್ತಿದೆ. ಇದರಿಂದ ಸಮಾಜದಲ್ಲಿ ಅಸಮಾನತೆ ಉಂಟಾಗುತ್ತದೆ. ಆದ್ದರಿಂದ ಭಾರತ ಸರ್ಕಾರ ಪ್ರಧಾನಮಂತ್ರಿಗಳು ಮತ್ತು ರಾಷ್ಟ್ರಪತಿಗಳು ಕುಟುಂಬ ರಾಜಕಾರಣ ನಿಯತ್ರಣ ಕಾಯ್ದೆಯ ಬಗ್ಗೆ ಚರ್ಚೆ ಮಾಡಿ ಜಾರಿಗೆ ತರುವಂತಹ ಕೆಲಸ ಮಾಡಬೇಕು. ಎಂದು ಹೇಳಿದರು. ಕುಟುಂಬದಲ್ಲಿ ಒಬ್ಬ ಸದಸ್ಯನಿಗೆ ಮಾತ್ರ ಸ್ಪರ್ಧಿಸುವಂತೆ ಕಡ್ಡಾಯಗೊಳಿಸಬೇಕು. ಸಾರ್ವತ್ರಿಕ ಚುನಾವಣೆಯಲ್ಲಿ ಕನಿಷ್ಠ ಪದವಿ ವಿದ್ಯಾರ್ಹತೆ ಕಡ್ಡಾಯಗೊಳಿಸಬೇಕು. ಭಾರತದಲ್ಲಿ ಎಲ್ಲಾ ಪ್ರಜೆಗಳಿಗೆ ಮತದಾನ ಕಡ್ಡಾಯಗೊಳಿಸಬೇಕು. ಚುನಾವಣೆಗೆ ಸ್ಪರ್ಧಿಸಲು ಗರಿಷ್ಠ ವಯೋಮಿತಿ ನಿಗದಿಯಾಗಬೇಕು ಎಂದು ತಮ್ಮ ಬೇಡಿಕೆಯ ಮನವಿಯನ್ನು ಸಲ್ಲಿಸಿದರು ಈ ಸಂದರ್ಭದಲ್ಲಿ ರೈತ ಮುಖಂಡ ಸೋಮರೆಡ್ಡಿ ಹಾದಿಮನಿ, ಉಪಸ್ಥಿತರಿದ್ದರು.ಊ16-ಖಓಖ07-ಓಇಘಖ. ಂಓಆ. ಕಊಓಖಿಓ.