’ಎಕ್ಸ್ಪರ್ಟ್ ಉತ್ಸವ 2025-26’ ರ ಎಸ್‌ಎಸ್‌ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭ
Farewell and felicitation ceremony for SSLC and PUC students of 'Expert Utsav 2025-26'
ಮುದ್ದೇಬಿಹಾಳ 23 : ಮಕ್ಕಳಿಗೆ ಶಿಕ್ಷಣದ ಜತೆಗೆ ಧರ್ಮ, ಸಂಸ್ಕಾರ, ಪರಂಪರೆಯ ಜತೆಗೆ ಮಾನವಿಯ ಮೌಲ್ಯಗಳುಳ್ಳ ಬೋಧನೆ ಅತ್ಯಗತ್ಯವಾಗಿದೆ ಎಂದು ಕುಂಟೋಜಿ ಭಾವೈಕ್ಯತಾ ಹಿರೇಮಠದ ಡಾ, ಚನ್ನವೀರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ತಾಲೂಕಿನ ನಾಗರಬೆಟ್ಟದ ಪ್ರತಿಷ್ಠಿತ ಬಸ್ ನಿಲ್ದಾಣದ ಹತ್ತಿರವಿರುವ ಆಕ್ಸ್ಫರ್ಡ್ ಮಠ್ಸ್ ಸಂಸ್ಥೆಯ ಎಕ್ಸ್ಪರ್ಟ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ’ಎಕ್ಸ್ಪರ್ಟ್ ಉತ್ಸವ 2025-26’ ರ ಎಸ್‌ಎಸ್‌ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭದಲ್ಲಿ ಅವರು ಸಾನಿಧ್ಯ ವಹಿಸಿ ಅವರು ಮಾತನಾಡಿ.
ಇಂದು ತಂತ್ರಜ್ಞಾನ ಬಹಳಷ್ಟು ವೇಗವಾಗಿ ಬೆಳೆಯುತ್ತಿದೆ ಅದರಂತೆ ಸ್ಪರ್ಧಾತ್ಮಕ ಯುಗವೇಗವಾಗಿ ಓಡುತ್ತಿದೆ ಇಂತಹ ಸಂದರ್ಭದಲ್ಲಿ ಮಕ್ಕಳು ಟಿವಿ ಮೋಬೈಲ್ ಗಳಿಗೆ ಅಂಟಿಕೊಳ್ಳದೆ ಸಾಧನೆಯ ಹಾದಿಯಲ್ಲಿ ಮುಂದೆ ಸಾಗಬೇಕು ಪರಿಶ್ರಮ ಪಡಬೇಕು. ಶೈಕ್ಷೆಣಿಕ ಜೀವನವನ್ನು ಅತ್ಯಂತ ಸಂತೋಷ ಸಂಭ್ರಮದಿಂದ ಯಶಸ್ಸುಗೊಳಿಸಲು ಸಾಧ್ಯ ಇಂತಹ ಕಾರ್ಯದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿಯೇ ಬಿ ಜಿ. ಮಠ ಅವರ 30 ವರ್ಷಗಳ ಅವಿರತ ಪರಿಶ್ರಮದಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಇಂದು ಈ ಸಂಸ್ಥೆ ಹೆಮ್ಮರವಾಗಿ ಬೆಳೆದಿದೆ. ಜಿಲ್ಲೆಯಲ್ಲೇ ವಸತಿ ಶಾಲೆಯ ಮೂಲಕ ಶೈಕ್ಷಣಿಕ ಕ್ರಾಂತಿ ಮಾಡುತ್ತಿದೆ. ವಿದ್ಯಾರ್ಥಿಗಳು ತಮಗೆ ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಂಡು ಆತ್ಮವಿಶ್ವಾಸದಿಂದ ಮುನ್ನಡೆಯಬೇಕು," ಎಂದರು.
ಸಾಹಿತಿ ಶಿವಶರಣಪ್ಪ ಶಿರೂರ ಅವರು ಮಾತನಾಡಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಹೇಳಿದಂತೆ ಶಿಕ್ಷಣವು ಹುಲಿ ಹಾಲಿನಂತಿದೆ, ಅದನ್ನು ಕುಡಿದವರು ಮಕ್ಕಳು ಗರ್ಜಿಸಲೇಬೇಕು. ಕೇವಲ ಶಾಲೆಯ ಬೋರ್ಡಗಳು ಶಿಕ್ಷಣ ನೀಡುವುದಿಲ್ಲ, ಮಕ್ಕಳಲ್ಲಿ ಕಠಿಣ ಪರಿಶ್ರಮ ಮತ್ತು ಸಾಧಿಸುವ ಛಲವಿರಬೇಕು. 623 ಹೆಚ್ಚು ಅಂಕಗಳನ್ನು ಪಡೆಯುವ ಗುರಿ ಮಕ್ಕಳಲ್ಲಿರಬೇಕು. ಈ ಸಂಸ್ಥೆಯು ಕೇವಲ ಪಾಠವನ್ನಷ್ಟೇ ಅಲ್ಲದೆ, ಉತ್ತಮ ಸಂಸ್ಕಾರವನ್ನೂ ಕಲಿಸುತ್ತಿದೆ. ಗ್ರಾಮೀಣ ಭಾಗದ ಬಡ ಹಾಗೂ ಕೂಲಿ ಕಾರ್ಮಿಕರ ಮಕ್ಕಳಿಗೆ ಇಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ. ಈ ಸಂಸ್ಥೆಯ ವಿದ್ಯಾರ್ಥಿಗಳು ಎಪಿಜೆ ಅಬ್ದುಲ್ ಕಲಾಂ, ಛತ್ರಪತಿ ಶಿವಾಜಿಯಂತಹ ಮಹಾನ್ ವ್ಯಕ್ತಿಗಳ ಕನಸನ್ನು ನನಸು ಮಾಡುವ ಗುರಿ ಹೊಂದಬೇಕು," ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್ಡಿಇ ಟ್ರಸ್ಟ್ ಅಧ್ಯಕ್ಷ ಬಿ. ಜಿ. ಮಠ ಮಾತನಾಡಿ, "ಜೀವನದಲ್ಲಿ ಹಣಕ್ಕಿಂತ ಒಳ್ಳೆಯ ಗುಣ ಮತ್ತು ಸಂಸ್ಕೃತಿ ಮುಖ್ಯ. ವಿದ್ಯಾರ್ಥಿಗಳು ದುರಾಸೆ ಬಿಟ್ಟು, ಗುರಿ ಮತ್ತು ಶಿಸ್ತನ್ನು ಅಳವಡಿಸಿಕೊಳ್ಳಬೇಕು.
ಎಸ್‌ಎಸ್‌ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ತಂದೆ-ತಾಯಿ ಹಾಗೂ ಶಾಲೆಗೆ ಕೀರ್ತಿ ತರಬೇಕು," ಎಂದರು.ಇದೇ ಸಂದರ್ಭದಲ್ಲಿ ಎಕ್ಸಪರ್ಟ್ ಕಾಲೇಜಿನಲ್ಲಿ ಓದಿ ವೈದ್ಯಕೀಯ, (ಮೆಡಿಕಲ್) ಸೀಟು ಪಡೆದ ಸಾಧಕ ವಿದ್ಯಾರ್ಥಿಗಳನ್ನು ವಿಶೇಷವಾಗಿ ಗೌರವಿಸಿ ಸನ್ಮಾನಿಸಲಾಯಿತು. ಈ ಸಮಾರಂಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಸಿದ್ದಯ್ಯ ಮಠ, ಆಡಳಿತಾಧಿಕಾರಿ ಪ್ರಜ್ವಲ್ ಬಿ. ಮಠ, ಪ್ರಾಂಶುಪಾಲರಾದ ಆರ್. ಎ. ಬಾಗವಾನ್,ಎಸ್ ಡಿ ಕೆ ಪ್ರೌಢಶಾಲಾ ಮುಖ್ಯಗುರು ವಿರೂ ನಾಯಕ, ಸರ ಶಿವಯ್ಯ ಹಿರೇಮಠ,ಆರ್ ಎಂ ಪೂಜಾರಿ,ಸೇರಿದಂತೆ ಹಲವು ಗಣ್ಯರು, ಶಿಕ್ಷಕ ವೃಂದ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 