ಕರಡಿ ದಾಳಿಗೆ ರೈತ ಗಂಭೀರ ಗಾಯ
Farmer critically injured in bear attack
ಲೋಕದರ್ಶನ ವರದಿ
ದಾಂಡೇಲಿ, ಸೆ. 2: ಸಮೀಪದ ಭಾಮಣಗಿ ಗ್ರಾಮದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕರಡಿಯೊಂದು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ನಡೆದಿದೆ. ದಾವಲಸಾಬ್ ಗುಡೂಸಾನ ದೊಡ್ಮನಿ (50) ಕರಡಿ ದಾಳಿಗೆ ಒಳಗಾದ ರೈತನಾಗಿದ್ದು, ದಾಳಿಯಿಂದ ಎರಡೂ ಕೈಗಳು ಹಾಗೂ ಮುಖಕ್ಕೆ ಗಂಭೀರ ಗಾಯಗಳಾಗಿವೆ. ತಕ್ಷಣ ಅವರನ್ನು ದಾಂಡೇಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆಯಿಂದ ಗ್ರಾಮಸ್ಥರಲ್ಲಿ ಆತಂಕ ಮೂಡಿದ್ದು, ಕರಡಿ ಸಂಚಾರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಗತ್ಯ ಕ್ರಮ ಕೈಗೊಂಡು ಗ್ರಾಮಸ್ಥರಿಗೆ ಸುರಕ್ಷತೆ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 