ರೈತರ ಗೌರವ ನಿಧಿ 20ನೇ ಕಂತಿನ ಹಣ ಬಿಡುಗಡೆ
Farmers' Honor Fund 20th installment released
ರೈತರ ಗೌರವ ನಿಧಿ 20ನೇ ಕಂತಿನ ಹಣ ಬಿಡುಗಡೆ
ಹುಲಕೋಟಿ 02: ಪ್ರಧಾನ ಮಂತ್ರಿ ಕಿಸಾನ ಸಮ್ಮಾನ ನಿಧಿ (ರೈತ ಗೌರವ ನಿಧಿ) ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾಗಿದೆ. ಈ ಯೋಜನೆಯನ್ನು 2019 ರಲ್ಲಿ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಪ್ರಾರಂಭ ಮಾಡಿದರು. ಈ ಯೋಜನೆಯು ಎಲ್ಲ ವರ್ಗದ ಭೂಹಿಡುವಳಿ ರೈತರಿಗೆ ಆರ್ಥಿಕ ನೆರವು ನೀಡುವುದು ಇದರ ಮುಖ್ಯ ಉದ್ದೇಶವಾಗಿದೆ. ದಿನಾಂಕ 02-08-2025 ರಂದು ರೈತರ ಗೌರವ ನಿಧಿ ಯೋಜನೆಯ 20ನೇ ಕಂತಿನ ಹಣವನ್ನು ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಉತ್ತರ ಪ್ರದೇಶದ ವಾರಣಾಸಿಯ, ಸೇವಾಪುರಿ ತಾಲೂಕಿನ ಬನೋವಲಿಯಲ್ಲಿ ಬಿಡುಗಡೆ ಮಾಡಿದರು.
ಇದರಿಂದ ಸುಮಾರು 9.7 ಕೋಟಿ ರೈತರಿಗೆ 20,500 ಕೋಟಿ ಹಣ ಈ ಕಂತಿನ ಮೂಲಕ ಬಿಡುಗಡೆ ಮಾಡಿದರು. ಸದರಿ ಈ ಕಾರ್ಯಕ್ರಮದ ನೇರ ಪ್ರಸಾರವನ್ನು ಐ.ಸಿ.ಎ.ಆರ್-ಕೆ.ಎಚ್.ಪಾಟೀಲ ಕೃಷಿ ವಿಜ್ಞಾನ ಕೇಂದ್ರ, ಹುಲಕೋಟಿಯ ಸಭಾಂಗಣದಲ್ಲಿ ಏರಿ್ಡಸಲಾಯಿತು. ಕೃಷಿ ಇಲಾಖೆಯ ಗದಗ ವಿಭಾಗದ ಉಪ ಕೃಷಿ ನಿರ್ದೇಶಕರಾದ ಶ್ರೀಮತಿ ಸ್ಪೂರ್ತಿ ಜಿ. ಎಸ್. ಇವರು ಭಾಗವಹಿಸಿ ತಮ್ಮ ಇಲಾಖೆಯಿಂದ ದೊರೆಯುವ ವಿವಿಧ ಯೋಜನೆಗಳ ಸೌಲಭ್ಯಗಳು ಹಾಗೂ ಸಹಾಯಧನ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಹುಲಕೋಟಿಯ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿಗಳು ಹಾಗೂ ಮುಖ್ಯಸ್ಥರಾದ ಡಾ. ಸುಧಾ ವಿ. ಮಂಕಣಿಯವರು ಕೃಷಿ ವಿಜ್ಞಾನ ಕೇಂದ್ರದಲ್ಲಿ ರೈತರಿಗಾಗಿ ಹಮ್ಮಿಕೊಳ್ಳುವ ವಿವಿಧ ಕಾರ್ಯಕ್ರಮಗಳ ಕುರಿತು ವಿವರಿಸಿದರು. ಪ್ರಾರಂಭದಲ್ಲಿ ರೈತರ ಜೊತೆ ಸಂವಾದ ಕಾರ್ಯಕ್ರಮವನ್ನು ಏರಿ್ಡಸಲಾಗಿತ್ತು. ರೈತರಿಗೆ ಮುಂಗಾರು ಹಂಗಾಮಿನ ವಿವಿಧ ಬೆಳೆಗಳಲ್ಲಿ ಬರುವಂತಹ ಕೀಟ ಹಾಗೂ ರೋಗಗಳ ಹತೋಟಿ ಕ್ರಮಗಳು ಹಾಗೂ ವಿವಿಧ ಬೆಳೆಗಳಲ್ಲಿ ಪೋಷಕಾಂಶಗಳ ನಿರ್ವಹಣೆ ಕುರಿತು ಮಾಹಿತಿಯನ್ನು ನೀಡಲಾಯಿತು. ಸದರಿ ಕಾರ್ಯಕ್ರಮದಲ್ಲಿ ಒಟ್ಟು 285 ಜನ ರೈತ ಮತ್ತು ರೈತ ಮಹಿಳೆಯರು,
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 